ಹಿಂದಿನ ಸರ್ಕಾರ ಹಣವಿಲ್ಲದಿದ್ದರೂ ಕೆಲಸ ಮಂಜೂರು ಮಾಡಿ, ಟೆಂಡರ್ ಕರೆದು ಬಿಲ್ಲುಗಳನ್ನು ಬಾಕಿ ಇಟ್ಟು ಹೋಗಿದೆ. 30,000 ಕೋಟಿ ರೂ.ಗಳಷ್ಟು ಬಾಕಿ ಬಿಲ್ಲುಗಳಿವೆ. ಇದಕ್ಕೆ ಯಾರು ಹೊಣೆ? ನಮ್ಮ ಕಾಲದ ಹಾಗೂ ಹಿಂದಿನ ಸರ್ಕಾರದ ಕಾಲದ ಆರ್ಥಿಕ ಸ್ಥಿತಿ ಕುರಿತು ಶ್ವೇತಪತ್ರವನ್ನು ವಿಧಾನಮಂಡಲದಲ್ಲಿ ಮಂಡಿಸುತ್ತೇನೆ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕುಮಾರಸ್ವಾಮಿ ಅವರು ವಿಶ್ವಾಸ ಮತಯಾಚನೆ ಸಂದರ್ಭದಲ್ಲಿ ಮಾತನಾಡುವಾಗ ಮೈತ್ರಿ ಸರ್ಕಾರವನ್ನು ಬೀಳಿಸಿದ್ದು ಬಿಜೆಪಿಯವರು ಎಂದಿರುವುದು ವಿಧಾನಮಂಡಲದ ದಾಖಲೆಯಲ್ಲಿದೆ. ಅದನ್ನು ಬಿಡುಗಡೆ ಮಾಡುತ್ತೇನೆ. ತಮ್ಮ ಹೇಳಿಕೆ ಬದಲಿಸುವ ಮೂಲಕ ಅವರು ವಿಧಾನಮಂಡಲವನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ ಎಂದು ಗುಡುಗಿದರು.
ವಿದ್ಯುತ್ ಕ್ಷಾಮ ನೀಗಿಸಲು ಹೊರಗಿನಿಂದ ವಿದ್ಯುತ್ ಕೊಳ್ಳುತ್ತಿದ್ದೇವೆ. ಎಲ್ಲಾ ಸಕ್ಕರೆ ಕಾರ್ಖಾನೆಗಳು ಪ್ರಾರಂಭವಾಗುತ್ತಿದ್ದು, ಅಲ್ಲಿ ಕೋಜನರೇಷನ್ ನಿಂದ ಉತ್ಪಾದನೆ ಆಗುವ ವಿದ್ಯುತನ್ನು ಕೊಂಡುಕೊಳ್ಳುತ್ತೇವೆ. ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಮಾಡುವ ಖಾಸಗಿ ಸಂಸ್ಥೆಗಳು ರಾಜ್ಯಕ್ಕೆ ನೀಡಬೇಕೆಂದು ಆದೇಶ ಹೊರಡಿಸಿದ್ದೇವೆ. ವಿದ್ಯುತ್ ಕೊರತೆ ನೀಗಿಸಲು ಎಲ್ಲಾ ರೀತಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
2019-23ರ ಅವಧಿಯಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಲು ಹಿಂದಿನ ಸರ್ಕಾರ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಈಗ ಬರ ಬಂದಿರುವುದರಿಂದ ವಿದ್ಯುತ್ ತೊಂದರೆಯಾಗಿರುವುದಕ್ಕೆ ಅವರೇ ಕಾರಣ. 16,000 ಮೆಗಾ ವ್ಯಾಟ್ ಸೌರ ವಿದ್ಯುತ್ ಉತ್ಪಾದನೆಯನ್ನು ನಾವು ಮಾಡಿದ್ದೆವು. ನವೀಕರಿಸಬಹುದಾದ ಇಂಧನ ಮೂಲಗಳ ಸದ್ಬಳಕೆಗೆ ಹಿಂದಿನ ಸರ್ಕಾರ ಒತ್ತು ನೀಡಿದ್ದರೆ ಪರಿಸ್ಥಿತಿ ಬೇರೆಯದೆ ಇರುತ್ತಿತ್ತು ಎಂದು ಹೇಳಿದರು.
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…