Categories: ಕೋಲಾರ

ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಸಿದ್ದರಾಮಯ್ಯ ಕೊಡುಗೆ ಅಪಾರ: ಮಠಾಧೀಶರು ಅವರ ಬೆಂಬಲಕ್ಕೆ ನಿಲ್ಲಬೇಕಾಗಿದೆ- ಸಂತೋಷ್ ಗುರೂಜಿ

ಕೋಲಾರ:ಹಿಂದುಳಿದ ವರ್ಗದ ಕೆಲ ಮಠಾಧೀಶ್ವರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಬೆಂಬಲ ಸೂಚಿಸಿದ್ದಾರೆ. ನಾವೂ ಅವರ ಬೆಂಬಲಕ್ಕೆ ಇದ್ದೇವೆ. ಹಿಂದುಳಿದ ವರ್ಗದವರು ಮಾತ್ರವಲ್ಲ; ಎಲ್ಲಾ ಲಿಂಗಾಯತ ಮಠದ ಸ್ವಾಮೀಜಿಗಳೂ ಸಿದ್ದರಾಮಯ್ಯ ಜೊತೆ ನಿಲ್ಲಬೇಕಿದೆ’ ಎಂದು ಎಂದು ಬಾರ್ಕೂರು ಸಂಸ್ಥಾನ ಮಠದ ಸಂತೋಷ ಗುರೂಜಿ ತಿಳಿಸಿದರು.

ಸೋಮವಾರ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಓಂಶಕ್ತಿ ಚಲಪತಿ ಅವರ ನಿವಾಸಕ್ಕೆ ಭೇಟಿ ಪಾದಪೂಜೆ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ವಿಚಾರದಲ್ಲಿ ಜಾತಿ ನೋಡಬಾರದು. ಆ ಸ್ಥಾನಕ್ಕೆ ಜಾತಿ ಇಲ್ಲ. ಮುಖ್ಯಮಂತ್ರಿ ಜಾತಿವಾದಿ ಆಗಿರಬಾರದು. ಇಲ್ಲಿವರೆಗೆ ಬಂದ ಮುಖ್ಯಮಂತ್ರಿಗಳ ಪೈಕಿ ಸಿದ್ದರಾಮಯ್ಯ ನಿಜವಾಗಿಯೂ ಭ್ರಷ್ಟರಲ್ಲ. ಸಿದ್ದರಾಮಯ್ಯ ಸರ್ಕಾರ ಉರುಳಿಸಲು ಬಿಜೆಪಿ ಹಾಗೂ ಜೆಡಿಎಸ್‌ ಮುಡಾ ವಿಚಾರ ಮುಂದಿಟ್ಟುಕೊಂಡಿವೆ. ಪಾರ್ವತಮ್ಮನರ ಜಮೀನಿಗೆ ಬದಲಾಗಿ ಬೇರೆ ನಿವೇಶನ ಕೊಡಲಾಗಿದೆ ಅಷ್ಟೆ. ಹಿಂದಿನ ಮುಖ್ಯಮಂತ್ರಿಗಳು ಎಷ್ಟು ಹಗರಣ ಮಾಡಿದ್ದಾರೆ, ಎಷ್ಟು ದುಡ್ಡು ಮಾಡಿದ್ದಾರೆ ಎಂಬುದೆಲ್ಲಾ ನಮಗೆ ಗೊತ್ತಿದೆ. ಕೆಲ ರಾಜಕಾರಣಿಗಳಿಗೆ ಸಾವಿರಾರು ಕೋಟಿ ಹಣ ಎಲ್ಲಿಂದ ಬಂತು? ಇಂಥವರು ಸಭೆ ಮಾಡುತ್ತಾರೆ ಎಂದರೆ ಭೂತದ ಬಾಯಲ್ಲಿ ಭಗವದ್ಗೀತೆ ಕೇಳಲು ಕರ್ನಾಟಕದ ಜನ ದಡ್ಡರಲ್ಲ. ಹೀಗಾಗಿ, ಸಿದ್ದರಾಮಯ್ಯ ಅವರಿಗೆ ಬೆಂಬಲ ಅಗತ್ಯವಿದೆ ಅದಕ್ಕೆ ನಾವು ಬದ್ಧ ಎಂದರು.

ಮುಂದಿನ 2025ರ ಜುಲೈ, ಆಗಸ್ಟ್‌ನಲ್ಲಿ ಸಿದ್ದರಾಮಯ್ಯ ಅವರಿಗೆ ಕಂಟಕ ಎದುರಾಗಲಿದೆ. ಅಲ್ಲಿಯವರೆಗೆ ಅವರನ್ನು ಇಳಿಸಲು ಯಾರಿಗೂ ಸಾಧ್ಯವಿಲ್ಲ. ಆದರೆ, ಡಿ.ಕೆ.ಶಿವಕುಮಾರ್‌ ಅವರಿಗೆ ಮುಖ್ಯಮಂತ್ರಿ ಆಗುವ ಭಾಗ್ಯವಿದೆ ಎಂಬುದಾಗಿ ನಾನು ಹೇಳಲ್ಲ. ಅವರಿಗೆ ನಾಲ್ಕಾರು ತೊಡಕುಗಳು ಇವೆ. ಮುಖ್ಯಮಂತ್ರಿ ಆಕಾಂಕ್ಷಿಗಳು ಹಲವು ಮಂದಿ ಇದ್ದಾರೆ. 2025ರ ಆಗಸ್ಟ್‌ನಲ್ಲಿ ಪ್ರಧಾನಿ ಮೋದಿ ಅವರಿಗೂ ಕಂಟಕವಿದೆ ಎಂದರು

ಸಮಾಜದಲ್ಲಿ ನೆಮ್ಮದಿಯಿಂದ ಬದುಕಲು ಎಲ್ಲರಲ್ಲೂ ಪ್ರೀತಿ ವಿಶ್ವಾಸ ಗಳಿಸಬೇಕು ಪಶು, ಪತಿಪತ್ನಿ, ಸಂತಾನ, ಆದಾಯದ ಮ‌ೂಲಕ ಜೀವನ ಸಾಗಿಸಬೇಕು ಸಾಧು ಸಂತರ ಜೊತೆಯಲ್ಲಿ ಇದ್ದಾಗ ಲಕ್ಷ್ಮೀ ಬರಲಿದೆ ಎಂದು ಉಪದೇಶ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಲೋಕಸಭಾ ಸದಸ್ಯ ಎಸ್ ಮುನಿಸ್ವಾಮಿ, ಬಿಜೆಪಿ ಜಿಲ್ಲಾ ಅಧ್ಯಕ್ಷ ವೇಣುಗೋಪಾಲ್, ಪ್ರಧಾನ ಕಾರ್ಯದರ್ಶಿಗಳಾದ ಓಂಶಕ್ತಿ ಚಲಪತಿ, ಬಿ.ವಿ ಮಹೇಶ್, ರಾಜು ಅಪ್ಪಿ ಮಹಿಳಾ ಜಿಲ್ಲಾಧ್ಯಕ್ಷೆ ಅರುಣಮ್ಮ, ಮುಖಂಡರಾದ ಸಾ.ಮಾ ಬಾಬು, ನಾಮಲ್ ಮಂಜು, ಎಬಿವಿಪಿ‌ ಹರೀಶ್, ಅಪ್ಪಿ ನಾರಾಯಣಸ್ವಾಮಿ, ರವೀಶ್ ಗೌಡ, ಮುಂತಾದವರು ಇದ್ದರು.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

12 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

22 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

1 day ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 day ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

2 days ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

2 days ago