2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ನಿಗಮಗಳ ವಿವಿಧ ಯೋಜನೆಗಳಡಿ ಸೌಲಭ್ಯ ಒದಗಿಸಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮ(ನಿ), ಕರ್ನಾಟಕ ವೀರಶೈವ ಲಿಂಗಾಯತ ಸಮುದಾಯ ಅಭಿವೃದ್ಧಿ ನಿಗಮ(ನಿ), ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ(ನಿ), ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ(ನಿ), ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮ(ನಿ), ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ(ನಿ), ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ(ನಿ), ಕರ್ನಾಟಕ ಅಲೆಮಾರಿ/ಅರೆಅಲೆಮಾರಿ ಅಭಿವೃದ್ಧಿ ನಿಗಮ(ನಿ), ಕರ್ನಾಟಕ ವಿಶ್ವಕರ್ಮ ಸಮುದಾಗಳ ಅಭಿವೃದ್ಧಿ ನಿಗಮ(ನಿ), ಕರ್ನಾಟಕ ಕಾಡುಗೊಲ್ಲ ಅಭಿವೃದ್ಧಿ ನಿಗಮ(ನಿ), ಈ ನಿಗಮಗಳ ಆಯಾ ಸಮುದಾಯದವರು ಯೋಜನವಾರು ಸೌಲಭ್ಯ ಕೋರಿ ಆನ್ ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್ ನಲ್ಲಿ https://sevasindhu.karnataka.gov.in ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಸೇವಾ ಕೇಂದ್ರಗಳಲ್ಲಿಅರ್ಜಿ ಸಲ್ಲಿಸಬಹುದಾಗಿರುತ್ತದೆ.
ನಿಗಮದ ವಿವಿಧ ಯೋಜನೆಗಳು- ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್ ಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆ ಕೌಶಲ್ಯಾಭಿವೃದ್ಧಿ ತರಬೇತಿ, ಹೊಲಿಗೆ ಯಂತ್ರ ವಿತರಣೆ ಯೋಜನೆ(ಡಿ.ದೇವರಾಜ ಅರಸು ನಿಗಮದ ಫಲಾಪೇಕ್ಷಿಗಳಿಗೆ ಮಾತ್ರ), ಮರಾಠ ಮಿಲಿಟರಿ ಹೋಟೆಲ್ ಯೋಜನೆ(ಮರಾಠ ಸಮುದಾಯದವರಿಗೆ ಮಾತ್ರ), ಭೋಜನಾಲಯ ಕೇಂದ್ರ(ವೀರಶೈವ ಲಿಂಗಾಯತ ಸಮುದಾಯದವರಿಗೆ ಮಾತ್ರ), ವಿಭೂತಿ ನಿರ್ಮಾಣ ಘಟಕ(ವೀರಶೈವ ಲಿಂಗಾಯತ ಸಮುದಾಯದವರಿಗೆ ಮಾತ್ರ), ಪಂಚವೃತ್ತಿ ಸಾಲ ಯೋಜನೆ (ವಿಶ್ವಕರ್ಮ ಸಮುದಾಯದವರಿಗೆ ಮಾತ್ರ)
ಸಾಮಾನ್ಯ ಅರ್ಹತೆಗಳು:-
ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಕಡ್ಡಾಯವಾಗಿ ಮೊಬೈಲ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆಯನ್ನು ಜೋಡಣೆ ಮಾಡಿರುಬೇಕು, ಅರ್ಜಿದಾರರು ನಿಗಮವಾರು ಆಯಾ ಸಮುದಾಯದ ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು, ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ಗ್ರಾಮಾಂತರ ಪ್ರದೇಶದವರಿಗೆ ರೂ. 98,000/- ಗಳಿಗಿಂತ ಹಾಗೂ ಪಟ್ಟಣ ಪ್ರದೇಶದವರಿಗೆ ರೂ. 1,20,000/- ಗಳಿಗಿಂತ ಕಡಿಮೆ ಇರಬೇಕು.
ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸೌಲಭ್ಯ ಪಡೆಯುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನವು ರೂ. 3.50 ಲಕ್ಷಗಳ ಮಿತಿಯಲ್ಲಿರುಬೇಕು. ಹಾಗೂ ವಿದೇಶಿ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕಾಗಿ ಸೌಲಭ್ಯ ಪಡೆಯುವ ವಿದ್ಯಾರ್ಥಿಗಳ ಕುಟುಂಬ ವಾರ್ಷಿಕ ವರಮಾನ 8.00 ಲಕ್ಷಗಳ ಮಿತಿಯಲ್ಲಿರಬೇಕು, ಅರ್ಜಿದಾರರ ವಯೋಮಿತಿ 18-55 ವರ್ಷಗಳ ಮಿತಿಯಲ್ಲಿರಬೇಕು.
ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್ ಗಳ ಸಹಯೋಗದೊಂದಿಗೆ), ಸ್ವಾವಲಂಭಿ ಸಾರಥಿ ಯೋಜನೆಯಡಿ ಅರ್ಜಿದಾರರ ವಯೋಮಿತಿ 21 -45 ವರ್ಷಗಳ ಒಳಗಿರಬೇಕು, ಈ ಹಿಂದೆ ನಿಗಮದ ಯಾವುದಾದರೂ ಯೋಜನೆ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಂದು ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.
ವಿಶೇಷ ಸೂಚನೆ:-
2023-24ನೇ ಸಾಲಿನಲ್ಲಿ ನಿಗಮಗಳ ವಿವಿಧ ಯೋಜನೆಗಳಡಿ ಅರ್ಜಿ ಸಲ್ಲಿಸಿ, ಸೌಲಭ್ಯ ಪಡೆಯದೆ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯತೆ ಇರುವುದಿಲ್ಲ.ಹಿಂದಿನ ವರ್ಷದ ಅರ್ಜಿಗಳನ್ನು ಈ ವರ್ಷಕ್ಕೆ ಪರಿಗಣಿಸಲಾಗುತ್ತದೆ.
ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ: ಆಯಾ ನಿಗಮಗಳ ವೆಬ್ ಸೈಟ್ ಗಳನ್ನು ಸಂಪರ್ಕಿಸುವುದು.
(bcwdcorporations.karnataka.gov.in) ಅಥವಾ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಛೇರಿ ದೂ.ಸಂ:080-29605761 ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…