ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ, ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2023-24ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ”, “ಶುಲ್ಕ ವಿನಾಯಿತಿ” ಮತ್ತು “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ” ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 10 ಆಗಿರುತ್ತದೆ. ಅರ್ಹ ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಲು ಸೂಚಿಸಿದೆ.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್‌ಸೈಟ್ ವಿಳಾಸ https://ssp.postmatric.karnataka.gov in. ಕಾರ್ಯಕ್ರಮಗಳ ವಿವರ, ಸಲ್ಲಿಸಬೇಕಾದ ದಾಖಲೆಗಳು ಅರ್ಹತೆ ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ಭೇಟಿ ನೀಡಬೇಕಾದ ವೆಬ್‌ಸೈಟ್ ವಿಳಾಸ https://bcwd.karnataka.gov.in ಇಲಾಖಾ ಸಹಾಯವಾಣಿ/ದೂರವಾಣಿ ಸಂಖ್ಯೆ 8050770005 ಇ-ಮೇಲ್ ವಿಳಾಸ bcwdhelpline@gmail.com. ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ/ದೂರವಾಣಿ ಸಂಖ್ಯೆ 1902 ಇಮೇಲ್ ವಿಳಾಸ postmatrichelp@karnataka.gov.in ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…