ಬೈಂದೂರು ಬಿಜೆಪಿ ಟಿಕೆಟ್ ಕೊಡಿಸೋದಾಗಿ 5 ಕೋಟಿ ಪಡೆದು ವಂಚಿಸಿರೋ ಆರೋಪ ಹಿನ್ನೆಲೆ ಹಿಂದೂ ಪರ ಹೋರಾಟಗಾರ್ತಿ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಉದ್ಯಮಿ ಗೋವಿಂದ್ ಪೂಜಾರಿ ಅವರು ಬಂಡೇಪಾಳ್ಯ ಪೊಲೀಸ್ ಠಾಣೆಯಲ್ಲಿ ವಂಚನೆ ಕುರಿತು ದೂರ ನೀಡಿದ್ದರು. ದೂರಿನನ್ವಯ ಚೈತ್ರಾ ವಿರುದ್ದ IPC 420 (ವಂಚನೆ) ಅಡಿ ಪ್ರಕರಣ ದಾಖಲಿಸಿಕೊಂಡು ಉಡುಪಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೇಂದ್ರದ ನಾಯಕರು, RSS ಪ್ರಮುಖರು ನಮ್ಮ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಿ ನಂಬಿಸಿ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.
ಚೈತ್ರಾ ಕುಂದಾಪುರ ಜೊತೆ ಇನ್ನೂ ಮೂವರನ್ನು ವಶಕ್ಕೆ ಪಡೆದಿರೋ ಸಿಸಿಬಿ. ಇಂದು ಸಿಸಿಬಿ ಕಚೇರಿಗೆ ಕರೆತಂದು ವಿಚಾರಣೆ ನಡೆಸಲಿರೋ ಅಧಿಕಾರಿಗಳು.