
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಪಾಲನಜೋಗಹಳ್ಳಿಯ ಖಾಲಿ ಜಮೀನಿನಲ್ಲಿ ಅಪರಿಚಿತ ಡ್ರೋನ್ ಪತ್ತೆಯಾಗಿದ್ದು ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿದೆ. ಹಿಂದೂ ಸಮಾಜೋತ್ಸವದ ಶೋಭಾಯಾತ್ರೆ ನಡೆಯುತ್ತಿದ್ದ ವೇಳೆ ವಿಮಾನ ಮಾದರಿಯ ಡ್ರೋನ್ ಪತ್ತೆಯಾಗಿರುವುದು ಅನುಮಾನಕ್ಕೆ ಕಾರಣವಾಗಿದೆ. ಮನೆ ಸಮೀಪ ಡ್ರೋನ್ ಬಿದ್ದಿರುವುದನ್ನು ಕಂಡ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬ್ಯಾಟರಿಗಳು ಸೇರಿದಂತೆ ಎಲೆಕ್ಟ್ರಿಕ್ ವೈರ್‌ಗಳು ಜೋಡಿಸಲ್ಪಟ್ಟಿದ್ದ 8 ಅಡಿ ಅಗಲ, 4ಅಡಿ ಉದ್ದದ ಮಿನಿ ವಿಮಾನ ಮಾದರಿಯ ಡ್ರೋನ್ ಪತ್ತೆಯಾಗಿದೆ.., ಡ್ರೋನ್‌ನಲ್ಲಿ ಯಾವುದೇ ಸ್ಪೋಟಕ ವಸ್ತುಗಳಿವೆಯೇ ಎಂಬ ಬಗ್ಗೆ ಪೊಲೀಸ್ ಎಕ್ಸ್‌ಪರ್ಟ್ಸ್ ತಂಡ ಸ್ಥಳಕ್ಕೆ ಆಗಮಿಸಿ ಸುಮಾರು ಎರಡು-ಮೂರು ಗಂಟೆಗಳ ಕಾಲ ಸೂಕ್ಷ್ಮ ಪರಿಶೀಲನೆ ಮಾಡಿದ್ದಾರೆ. ಬಳಿಕ ಡ್ರೋನ್ ವಶಕ್ಕೆ ಪಡೆದುಕೊಂಡಿದ್ದಾರೆ. ಡ್ರೋನ್ ಎಲ್ಲಿಂದ ಬಂತ್ತು, ಯಾರಿಗೆ ಸೇರಿದೆ ಮತ್ತು ಯಾವ ಉದ್ದೇಶಕ್ಕೆ ಬಳಸಲಾಗುತ್ತಿತ್ತು ಎಂಬ ಕುರಿತು ಪೊಲೀಸರು ತನಿಖೆ ನಡೆಸಿದ್ದಾರೆ. ಸದ್ಯ ನಗರದಲ್ಲಿ ಹಿಂದೂ ಸಮಾಜೋತ್ಸವದ ಶೋಭಾಯಾತ್ರೆ ಹಿನ್ನೆಲೆ ನಗರದಲ್ಲಿ ಭದ್ರತೆ ಹೆಚ್ಚಿಸಲಾಗಿತ್ತು.