ಹಿಂದೂ ಸಮಾಜೋತ್ಸವದ ಶೋಭಾಯಾತ್ರೆ ದಿನದಂದೇ 8 ಅಡಿ ಅಗಲ, 4 ಅಡಿ ಉದ್ದದ ಮಿನಿ ವಿಮಾನ ಮಾದರಿಯ ಡ್ರೋನ್ ಪತ್ತೆ: ಜನರಲ್ಲಿ ಆತಂಕ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಪಾಲನಜೋಗಹಳ್ಳಿಯ ಖಾಲಿ ಜಮೀನಿನಲ್ಲಿ ಅಪರಿಚಿತ ಡ್ರೋನ್ ಪತ್ತೆಯಾಗಿದ್ದು ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿದೆ. ಹಿಂದೂ ಸಮಾಜೋತ್ಸವದ ಶೋಭಾಯಾತ್ರೆ ನಡೆಯುತ್ತಿದ್ದ ವೇಳೆ ವಿಮಾನ ಮಾದರಿಯ ಡ್ರೋನ್ ಪತ್ತೆಯಾಗಿರುವುದು ಅನುಮಾನಕ್ಕೆ ಕಾರಣವಾಗಿದೆ. ಮನೆ ಸಮೀಪ ಡ್ರೋನ್ ಬಿದ್ದಿರುವುದನ್ನು ಕಂಡ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬ್ಯಾಟರಿಗಳು ಸೇರಿದಂತೆ ಎಲೆಕ್ಟ್ರಿಕ್ ವೈರ್‌ಗಳು ಜೋಡಿಸಲ್ಪಟ್ಟಿದ್ದ 8 ಅಡಿ ಅಗಲ, 4ಅಡಿ ಉದ್ದದ ಮಿನಿ ವಿಮಾನ ಮಾದರಿಯ ಡ್ರೋನ್ ಪತ್ತೆಯಾಗಿದೆ.., ಡ್ರೋನ್‌ನಲ್ಲಿ ಯಾವುದೇ ಸ್ಪೋಟಕ ವಸ್ತುಗಳಿವೆಯೇ ಎಂಬ ಬಗ್ಗೆ ಪೊಲೀಸ್ ಎಕ್ಸ್‌ಪರ್ಟ್ಸ್ ತಂಡ ಸ್ಥಳಕ್ಕೆ ಆಗಮಿಸಿ ಸುಮಾರು ಎರಡು-ಮೂರು ಗಂಟೆಗಳ ಕಾಲ ಸೂಕ್ಷ್ಮ ಪರಿಶೀಲನೆ ಮಾಡಿದ್ದಾರೆ. ಬಳಿಕ ಡ್ರೋನ್​​ ವಶಕ್ಕೆ ಪಡೆದುಕೊಂಡಿದ್ದಾರೆ. ಡ್ರೋನ್ ಎಲ್ಲಿಂದ ಬಂತ್ತು, ಯಾರಿಗೆ ಸೇರಿದೆ ಮತ್ತು ಯಾವ ಉದ್ದೇಶಕ್ಕೆ ಬಳಸಲಾಗುತ್ತಿತ್ತು ಎಂಬ ಕುರಿತು ಪೊಲೀಸರು ತನಿಖೆ ನಡೆಸಿದ್ದಾರೆ. ಸದ್ಯ ನಗರದಲ್ಲಿ ಹಿಂದೂ ಸಮಾಜೋತ್ಸವದ ಶೋಭಾಯಾತ್ರೆ ಹಿನ್ನೆಲೆ ನಗರದಲ್ಲಿ ಭದ್ರತೆ ಹೆಚ್ಚಿಸಲಾಗಿತ್ತು.

Ramesh Babu

Journalist

Recent Posts

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

9 minutes ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

17 minutes ago

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ: ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರೋ ದುಷ್ಕರ್ಮಿಗಳು

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ಧಾರವಾಡ ನಗರದ ಹಾಶ್ಮಿನಗರದಲ್ಲಿ ಇರುವ ಮನೆಯಲ್ಲೇ ಹತ್ಯೆ ಮಾಡಿರುವ ಘಟನೆ…

27 minutes ago

ಭವಿಷ್ಯದ ಸಮಾಜಕ್ಕಾಗಿ…….

ಮುಂದಿನ ಸುಮಾರು 15 ವರ್ಷಗಳಲ್ಲಿ ನಮ್ಮ ಮಕ್ಕಳ ಭವಿಷ್ಯ ಉತ್ತಮವಾಗಿರಬೇಕಾದರೆ, ಈ ಸಮಾಜ ನಾವು ಈಗಿರುವ ಪರಿಸ್ಥಿತಿಗಿಂತ ಒಳ್ಳೆಯ ಗುಣಮಟ್ಟದ…

3 hours ago

ಮಹಿಳೆಯರ ಒಳ ಉಡುಪು ಕದ್ದು ಧರಿಸುತ್ತಿದ್ದ ‘ಸೈಕೋ’ ಕಳ್ಳ ಅರೆಸ್ಟ್: ನಿಟ್ಟುಸಿರು ಬಿಟ್ಟ ಜನ

ಮಹಿಳೆಯರ ಒಳ ಉಡುಪುಗಳನ್ನು ಕದ್ದು ಧರಿಸುತ್ತಿದ್ದ ವಿಚಿತ್ರ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತ್ ಎಂಬ ಈ ಆರೋಪಿ, ರಾತ್ರಿ ವೇಳೆ…

3 hours ago

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

18 hours ago