ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕೂಗೇನಹಳ್ಳಿ ಗೇಟ್ ಬಳಿ ನಡೆದಿದೆ.
ಮೃತರನ್ನು ಕತ್ತಿಹೊಸಹಳ್ಳಿ ಮೂಲದ ಲಕ್ಷ್ಮಯ್ಯ (55) ಹಾಗೂ ಅವರ ಪತ್ನಿ ಅನಿತಾ (45) ಎಂದು ಗುರುತಿಸಲಾಗಿದೆ.
ಪಿತೃಪಕ್ಷದ ಅಂಗವಾಗಿ ಮನೆಯಲ್ಲಿ ಪೂಜೆ ಹಾಗೂ ಹಬ್ಬದ ಕಾರ್ಯಕ್ರಮ ಮುಗಿಸಿಕೊಂಡಿದ್ದ ದಂಪತಿ, ಬಳಿಕ ಸಂಬಂಧಿಕರ ಮನೆಗೆ ತೆರಳಿ ಹರಿಕಥೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮ ಮುಗಿದ ನಂತರ ದ್ವಿಚಕ್ರ ವಾಹನದಲ್ಲಿ ಮನೆಗೆ ವಾಪಸ್ ತೆರಳುತ್ತಿದ್ದ ವೇಳೆ ಕೂಗೇನಹಳ್ಳಿ ಗೇಟ್ ಬಳಿ ಹಿಂಬದಿಯಿಂದ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ದಂಪತಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಜಪಾನಿನ ಐಚಿ - ನಾಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಮತ್ತು ಭಾರತದ ವಿವಿಧ ಭಾಷೆಯ ಟಿವಿ ಚಾನಲ್ ಗಳಲ್ಲಿ ಪ್ರಸಾರವಾಗುತ್ತಿರುವ…
ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…
ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…
ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…
ದೇವನಹಳ್ಳಿ: ನಕಲಿ ಔಷಧಿಗಳ ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ, ಪ್ರಕರಣದ ಕಿಂಗ್‌ಪಿನ್ ಎಂದು ಪೊಲೀಸರು ಗುರುತಿಸಿರುವ ಪ್ರಶಾಂತ್…