ಹಿಟ್ ಅಂಡ್ ರನ್‌ಗೆ ದೇವನಹಳ್ಳಿಯ ಇಬ್ಬರು ಪ್ರಾಣ ಸ್ನೇಹಿತರು ಬಲಿ

ದೇವನಹಳ್ಳಿ: ತಡರಾತ್ರಿ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಹಿಟ್ ಅಂಡ್ ರನ್ ಅಪಘಾತದಲ್ಲಿ ದೇವನಹಳ್ಳಿ ಪಟ್ಟಣದ ಇಬ್ಬರು ಪ್ರಾಣ ಸ್ನೇಹಿತರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ದೇವನಹಳ್ಳಿ ತಾಲ್ಲೂಕಿನ ಅತ್ತಿಬೆಲೆ ಗ್ರಾಮದ ಬಳಿ ನಡೆದಿದೆ.

ದೇವನಹಳ್ಳಿ ಪಟ್ಟಣದ ಮಿಥುನ್ ಮತ್ತು ಕನಕ ಮೃತ ದುರ್ದೈವಿಗಳು. ಮೃತರು ಹೆದ್ದಾರಿಯಲ್ಲಿರುವ ಡಾಬಾಗಳಿಗೆ ಮೊಟ್ಟೆ ಮತ್ತು ಚಿಕನ್ ಪೂರೈಕೆ ಮಾಡುವ ಕೆಲಸ ಮಾಡುತ್ತಿದ್ದರು. ಎಂದಿನಂತೆ ರಾತ್ರಿ ಕಲೆಕ್ಷನ್‌ಗಾಗಿ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಬಂದ ಕಾರು ಬೈಕ್‌ಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ಇಬ್ಬರೂ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಅಪಘಾತ ಸಂಭವಿಸಿದ ಕೂಡಲೇ ಕಾರು ನಿಲ್ಲಿಸದೆ ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ. ಆದರೆ, ಡಿಕ್ಕಿಯ ರಭಸಕ್ಕೆ ಕಾರಿನ ನಂಬರ್ ಪ್ಲೇಟ್ ಸ್ಥಳದಲ್ಲೇ ಬಿದ್ದಿದ್ದು, ಅದನ್ನೇ ಆಧಾರವಾಗಿಟ್ಟುಕೊಂಡು ವಿಜಯಪುರ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದಾರೆ.

ನಂಬರ್ ಪ್ಲೇಟ್ ಆಧರಿಸಿ ಬೆನ್ನಟ್ಟಿದ ಪೊಲೀಸರು ಚಿಕ್ಕಬಳ್ಳಾಪುರದ ಸಮೀಪ ತೆಲಂಗಾಣ ನೋಂದಣಿಯ ಫಾರ್ಚುನರ್ ಕಾರನ್ನು ಜಪ್ತಿ ಮಾಡಿದ್ದಾರೆ. ಅಪಘಾತಕ್ಕೆ ಕಾರಣವಾದ ಕಾರನ್ನು ವಶಕ್ಕೆ ಪಡೆದಿರುವ ಪೊಲೀಸರು ಪರಾರಿಯಾದ ಚಾಲಕನ ಪತ್ತೆಗೆ ಮುಂದಾಗಿದ್ದಾರೆ.

ಈ ಘಟನೆ ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಇಬ್ಬರು ಸ್ನೇಹಿತರ ದಿಢೀರ್ ಸಾವಿನಿಂದ ದೇವನಹಳ್ಳಿ ಪಟ್ಟಣದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

Ramesh Babu

Journalist

Recent Posts

ರೈತ ಮಹಿಳೆಯರ ಸ್ವಾವಲಂಬನೆಗೆ ಕ್ಷೀರ ಸಂಜೀವಿನಿ ಆಸರೆ- ಬಿ.ಸಿ. ಆನಂದ್ ಕುಮಾರ್

ದೊಡ್ಡಬಳ್ಳಾಪುರ: ರೈತ ಮಹಿಳೆಯರು ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಂಡು ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಆರ್ಥಿಕವಾಗಿ ಸದೃಢರಾಗಬೇಕು ಎಂದು ಬಮೂಲ್ ನಿರ್ದೇಶಕ…

6 hours ago

ಮೂರನೇ ಮದುವೆಗೂ ಗುಡ್‌ಬೈ ಹೇಳಿದ ಪವನ್ ಕಲ್ಯಾಣ್!

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಖ್ಯಾತ ನಟ ಪವನ್ ಕಲ್ಯಾಣ್ ಅವರ ವೈಯಕ್ತಿಕ ಬದುಕಿನಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಪವನ್ ಕಲ್ಯಾಣ್ ಕೊನಿಡೆಲಾ…

7 hours ago

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ಪಟ್ಟಿ ಪ್ರಕಟ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯ ತಾತ್ಕಾಲಿಕ…

18 hours ago

ಹಾಲಿನ ಬೆಲೆ ಏರಿಕೆ ವಿರೋಧಿಸುವವರಿಗೆ ನೈತಿಕತೆ ಇಲ್ಲ-ರೈತಪರ ನಿರ್ಧಾರಕ್ಕೆ ರಾಜಕೀಯ ಬಣ್ಣ ಬೇಡ – ಬಿ.ಸಿ. ಆನಂದ್ ಕುಮಾರ್

ದೊಡ್ಡಬಳ್ಳಾಪುರ: ರೈತರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ಪ್ರತಿ ಲೀಟರ್ ಹಾಲಿನ ದರವನ್ನು 8 ರೂಪಾಯಿ ಹೆಚ್ಚಿಸಿರುವ ನಿರ್ಧಾರವನ್ನು ವಿರೋಧಿಸುವುದು ಸರಿಯಲ್ಲ.…

21 hours ago

ಸ್ಥಳೀಯ ಶಾಸಕರಿಂದ ಶಿಷ್ಟಾಚಾರ ಉಲ್ಲಂಘನೆ ಆರೋಪ: ಸಚಿವ ಮುನಿಯಪ್ಪಗೆ ಮಾಜಿ ಶಾಸಕರ ನಿಯೋಗದಿಂದ ದೂರು

ದೊಡ್ಡಬಳ್ಳಾಪುರ: ನಿಗಮ ಹಾಗೂ ಮಂಡಳಿಗಳ ಅಧ್ಯಕ್ಷರ ನೇಮಕಾತಿ ವಿಳಂಬ, ಸ್ಥಳೀಯ ಶಾಸಕರು ಶಿಷ್ಟಾಚಾರ ಪಾಲನೆ ಮಾಡದಿರುವುದು ಸೇರಿದಂತೆ ಕ್ಷೇತ್ರದ ವಿವಿಧ…

22 hours ago

ಹಂದಿ ಓಡಿಸಲು ಇಟ್ಟಿದ್ದ ಮದ್ದನ್ನು ಪಟಾಕಿ ಅಂತ ತಿಳಿದು ಬೆಂಕಿ ಹಚ್ಚಿದ ಬಾಲಕ – ತಲೆ ಛಿದ್ರಗೊಂಡು ಸಾವು.!!

ಕಲಬುರಗಿ: ದೀಪಾವಳಿ ಪಟಾಕಿ ಎಂದು ಭಾವಿಸಿ ಕಾಡುಹಂದಿಗಳನ್ನು ಓಡಿಸಲು ತಂದಿಟ್ಟಿದ್ದ ಸ್ಫೋಟಕ ಮದ್ದಿಗೆ ಬೆಂಕಿ ಹಚ್ಚಿದ ಪರಿಣಾಮ ಭೀಕರ ಸ್ಫೋಟ…

1 day ago