ಹಿಟ್ & ರನ್ ಗೆ ಓರ್ವ ಬಲಿ: ಮತ್ತೋರ್ವನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

 

ಕೆಎಸ್ ಆರ್ ಟಿಸಿ ಬಸ್ ಗೆ ಬೈಕ್ ಹ್ಯಾಂಡಲ್ ತಗುಲಿ ಬೈಕ್ ಸಮೇತ ಇಬ್ಬರು ಕೆಳಗೆ ಬಿದ್ದಿದ್ದಾರೆ. ಹಿಂದಿನಿಂದ ಬಂದ ಕ್ಯಾಂಟರ್ ಬೈಕ್ ಮೇಲೆ ಹರಿದಿದೆ. ಈ ವೇಳೆ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದಾನೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಿಹಳ್ಳಿ ಹಾಗೂ ಕಂಟನಕುಂಟೆ ಮಾರ್ಗ ಮಧ್ಯದ ಹಸನಘಟ್ಟ ಗೇಟ್ ಬಳಿ ಇಂದು ರಾತ್ರಿ 8 ಗಂಟೆ ಸಮಯದಲ್ಲಿ ಘಟನೆ ನಡೆದಿದೆ.

ಹಿಟ್ ಆಂಡ್ ರನ್ ಪ್ರಕರಣದಲ್ಲಿ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಪುರಾ ಗ್ರಾಮದ ಉಪೇಂದ್ರ(27) ಎಂಬ ವ್ಯಕ್ತಿ ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ. ಚಂದ್ರಶೇಖರ್  ಗಾಯಗೊಂಡಿರುವ ವ್ಯಕ್ತಿ. ಈತ ಮಲತ್ತಹಳ್ಳಿಯ ನಿವಾಸಿಯಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮೃತ ಉಪೇಂದ್ರ ಮಲತ್ತಹಳ್ಳಿಯ ಸಂಬಂಧಿಕರ ಮನೆಗೆ ಕಾರ್ಯಕ್ರಮಕ್ಕೆ ಬಂದಿದ್ದು, ಊರಿಗೆ ವಾಪಸ್ ಹೋಗುವ ವೇಳೆ ಘಟನೆ ನಡೆದಿದೆ.

ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ಹಾಗೂ ಸಿಬ್ಬಂದಿ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಓವರ್ ಟೇಕ್ ಮಾಡುವಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *