ಕೆಎಸ್ ಆರ್ ಟಿಸಿ ಬಸ್ ಗೆ ಬೈಕ್ ಹ್ಯಾಂಡಲ್ ತಗುಲಿ ಬೈಕ್ ಸಮೇತ ಇಬ್ಬರು ಕೆಳಗೆ ಬಿದ್ದಿದ್ದಾರೆ. ಹಿಂದಿನಿಂದ ಬಂದ ಕ್ಯಾಂಟರ್ ಬೈಕ್ ಮೇಲೆ ಹರಿದಿದೆ. ಈ ವೇಳೆ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದಾನೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಿಹಳ್ಳಿ ಹಾಗೂ ಕಂಟನಕುಂಟೆ ಮಾರ್ಗ ಮಧ್ಯದ ಹಸನಘಟ್ಟ ಗೇಟ್ ಬಳಿ ಇಂದು ರಾತ್ರಿ 8 ಗಂಟೆ ಸಮಯದಲ್ಲಿ ಘಟನೆ ನಡೆದಿದೆ.
ಹಿಟ್ ಆಂಡ್ ರನ್ ಪ್ರಕರಣದಲ್ಲಿ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಪುರಾ ಗ್ರಾಮದ ಉಪೇಂದ್ರ(27) ಎಂಬ ವ್ಯಕ್ತಿ ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ. ಚಂದ್ರಶೇಖರ್ ಗಾಯಗೊಂಡಿರುವ ವ್ಯಕ್ತಿ. ಈತ ಮಲತ್ತಹಳ್ಳಿಯ ನಿವಾಸಿಯಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೃತ ಉಪೇಂದ್ರ ಮಲತ್ತಹಳ್ಳಿಯ ಸಂಬಂಧಿಕರ ಮನೆಗೆ ಕಾರ್ಯಕ್ರಮಕ್ಕೆ ಬಂದಿದ್ದು, ಊರಿಗೆ ವಾಪಸ್ ಹೋಗುವ ವೇಳೆ ಘಟನೆ ನಡೆದಿದೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ಹಾಗೂ ಸಿಬ್ಬಂದಿ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಓವರ್ ಟೇಕ್ ಮಾಡುವಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…