ಹಿಟ್ ಅಂಡ್ ರನ್ ಗೆ ಪಾದಾಚಾರಿ ಬಲಿಯಾಗಿರುವ ಘಟನೆ ನಗರದ ಹೊರವಕಯದ ರೈಲ್ವೆ ನಿಲ್ದಾಣ ಸಮೀಪ ನ.9ರ ಸಂಜೆ ಸುಮಾರು 7ಗಂಟೆ ಸಮಯದಲ್ಲಿ ನಡೆದಿದೆ.
ಕದೀರ್ ಪಾಷಾ(26), ಹಿಟ್ & ರನ್ ಗೆ ಬಲಿಯಾದ ಪಾದಚಾರಿ.
ಕದೀರ್ ಪಾಷಾ ಅವರು ರೈಲ್ವೆ ನಿಲ್ದಾದಲ್ಲಿ ಕೆಲಸ ಮುಗಿಸಿಕೊಂಡು ರಸ್ತೆ ಪಕ್ಕದಲ್ಲಿ ನಡೆದುಕೊಂಡು ಮನೆಗೆ ತೆರಳುವಾಗ ಯಾವುದೋ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಸ್ಥಳದಿಂದ ಎಸ್ಕೇಪ್ ಆಗಿದೆ. ಡಿಕ್ಕಿ ರಭಸಕ್ಕೆ ಸ್ಥಳದಲ್ಲೇ ಕದೀರ್ ಪಾಷಾ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ಒದಗಿಬಂದಿದೆ.
ಸ್ಥಳಕ್ಕೆ ನಗರ ಠಾಣಾ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮಿನಿ ಕ್ಯಾಂಟರ್ ಡಿಕ್ಕಿ ಹೊಡೆದಿರಬಹುದು ಎಂದು ಪೊಲೀಸ್ ಸಿಬ್ಬಂದಿ ಶಂಕಿಸಿದ್ದಾರೆ. ಘಟನಾ ಸ್ಥಳದ ಸಮೀಪವಿರುವ ಸಿಸಿಟಿವಿ ಪರಿಶೀಲನೆ ಮಾಡುತ್ತಿರುವ ಪೊಲೀಸ್ ಇಲಾಖೆ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…