ಹಿಟ್ & ರನ್ ಪ್ರಕರಣ: ಅಪಘಾತಕ್ಕೆ ನೇರ ಕಾರಣ ಅವೈಜ್ಞಾನಿಕ ರಸ್ತೆ: ಅವೈಜ್ಞಾನಿಕ ರಸ್ತೆ ಖಂಡಿಸಿ ಶವವನ್ನ ರಸ್ತೆ ಮಧ್ಯೆ ಇಟ್ಟು ಪ್ರತಿಭಟನೆ

ನ.9ರ ಸಂಜೆ ದೊಡ್ಡಬಳ್ಳಾಪುರ ನಗರದ ಮುತ್ತೂರಿನ ಅಂಜನೇಯ ದೇವಸ್ಥಾನದ ಬಳಿ ಅಪರಿಚಿತ ವಾಹನವೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿತ್ತು. ಈ ಅಪಘಾತದಲ್ಲಿ ಕೂಲಿ ಮಾಡುವ ವ್ಯಕ್ತಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದ. ಈ ಅಪಘಾತಕ್ಕೆ ನೇರ ಕಾರಣ ಸರ್ವಿಸ್ ರಸ್ತೆ ಮತ್ತು ಬೀದಿ ದೀಪಗಳ ವ್ಯವಸ್ಥೆ ಇಲ್ಲದೆ ಇರುವುದು ಅಪಘಾತಗಳಿಗೆ ಕಾರಣವಾಗಿದೆ ಎಂದು ಅಕ್ರೋಶಗೊಂಡ ಸ್ಥಳಿಯರು ಶವವನ್ನ ರಸ್ತೆಯಲ್ಲೇ ಇಟ್ಟು ಇಂದು ಪ್ರತಿಭಟನೆ ನಡೆಸಿದರು.

ಮುತ್ತೂರು ಬಳಿ ಹಿಂದೂಪುರ-ಯಲಹಂಕ ರಾಜ್ಯ ಹೆದ್ದಾರಿ ಹಾದು ಹೋಗಿದೆ, ಮುತ್ತೂರು ಬಳಿ ಸರ್ವಿಸ್ ರಸ್ತೆ, ಬೀದಿ ದೀಪಗಳು ಮತ್ತು ರಸ್ತೆ ಉಬ್ಬುಗಳನ್ನ ಹಾಕದೆ ಇರುವುದು ಅಪಘಾತಗಳಿಗೆ ಕಾರಣವಾಗಿದೆ, ರಸ್ತೆ ನಿರ್ವಹಣೆ ಮಾಡುವ ಟೋಲ್ ನವರು ಕೇವಲ ವಾಹನ ಸವಾರರಿಂದ ಟೋಲ್ ಸಂಗ್ರಹ ಮಾಡುತ್ತಾರೆ ಹೊರತು ಸರ್ವಿಸ್ ರಸ್ತೆ  ಸೌಲಭ್ಯ ಮತ್ತು ಬೀದಿ ದೀಪಗಳ ವ್ಯವಸ್ಥೆ ಮಾಡಿಲ್ಲ ಎಂದು ಅಕ್ರೋಶ ವ್ಯಕ್ತಪಡಿಸಿದರು.

ಟೋಲ್ ನವರ ನಿರ್ಲಕ್ಷ್ಯತೆಯ ವಿರುದ್ಧ ಅಕ್ರೋಶಗೊಂಡ ಸ್ಥಳೀಯರು ಶವವನ್ನ ರಸ್ತೆಯಲ್ಲೇ ಇಟ್ಟು ಪ್ರತಿಭಟನೆ ನಡೆಸಿದರು, ಇದರಿಂದ ಕೆಲಕಾಲ ರಸ್ತೆ ಬಂದ್ ಆಗಿತು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯ ನಿಯಂತ್ರಿಸಿ ವಾಹನಗಳ ಓಡಾಟಕ್ಕೆ ಅನುವು ಮಾಡಿಕೊಟ್ಪರು.

ಮುತ್ತೂರು ಬಳಿ ರಸ್ತೆ ಅಪಘಾತಗಳಿಂದ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ, ಕದೀರ್ ಪಾಷ ಒಬ್ಬನೇ ಮಗ, ಮನೆಗೆ ಆಧಾರವಾಗಿದ್ದ ಒಬ್ಬನೇ ಮಗನನ್ನ ಕಳೆದುಕೊಂಡ ಹೆತ್ತವರು ಕಣ್ಣೀರು ಹಾಕುತ್ತಿದ್ದಾರೆ, ಮುಂದೆ ನಮಗೆ ಯಾರು ಗತಿ, ಇನ್ನೂ ಎಷ್ಟು ತಾಯಂದಿರ ತಮ್ಮ ಮಕ್ಕಳನ್ನು ಕಳೆದುಕೊಳ್ಳ ಬೇಕೆಂದು ಕದೀರ್ ಪಾಷಾನ ತಾಯಿ ಝರೀನಾ ಕಣ್ಣೀರು ಹಾಕಿದರು.

ಪ್ರತಿಭಟನೆಯಲ್ಲಿ ಸಮತ ಸೈನಿಕ ದಳದ ಜಿಲ್ಲಾಧ್ಯಕ್ಷರಾದ ಒಬಳೇಶ್, ತಾಲೂಕು ಯೂತ್ ಕಾಂಗ್ರೆಸ್ ಅಧ್ಯಕ್ಷ ಸಯೈದ್ ರಜಾಕ್, ಸ್ಥಳೀಯರಾದ ಇಮ್ರಾನ್, ಆನಂದ್ ಕುಮಾರ್ ಸೇರಿದಂತೆ ನೂರಾರು ಮುತ್ತೂರಿನ‌ ನಿವಾಸಿಗಳು ಭಾಗಿಯಾಗಿದ್ದರು.

Ramesh Babu

Journalist

Recent Posts

ದೇವಸ್ಥಾನದಲ್ಲಿ ಕಳ್ಳನ ಕೈಚಳಕ: ಬೈಕ್ ಸಮೇತ ಕಳ್ಳನ ಬಂಧನ

ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…

2 hours ago

ನೊಂದವರ ನೋವಾ ನೋಯದವರೆತ್ತ ಬಲ್ಲರೋ……

ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…

10 hours ago

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

1 day ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

1 day ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

1 day ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

2 days ago