ಸಿಮೆಂಟ್ ಬಲ್ಕರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ಸುಮಾರು 8:30 ಗಂಟೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಮೇಲಿನ ನಾಯಕರಂಡನಹಳ್ಳಿ ಬಳಿ ನಡೆದಿದೆ..
ಘಟನೆ ತಡವಾಗಿ ಬೆಳಕಿಗೆ ಬಂದಿದೆ….
ಹಿಂದೂಪುರ ಮೂಲದ ಪವನ್ ಕುಮಾರ್ (22) ಸ್ಥಳದಲ್ಲೇ ಸಾವನ್ನಪ್ಪಿದ್ದು, ಪಾವಗಡ ತಾಲೂಕಿನ ಗಂಗವಾರ ಗ್ರಾಮದ ಅಶೋಕ್(24) ಆಸ್ಪತ್ರೆಗೆ ರವಾನಿಸುವ ಮಾರ್ಗ ಮಧ್ಯೆದಲ್ಲಿ ಅಸುನೀಗಿದ್ದಾನೆ ಎಂದು ತಿಳಿದುಬಂದಿದೆ….
ರಾತ್ರಿ ಹಿಂದೂಪುರದಿಂದ ಬೆಂಗಳೂರಿ ಕಡೆಗೆ ಬೈಕಿನಲ್ಲಿ ಬರುವ ವೇಳೆ ಮುಂದೆ ಸಾಗುತ್ತಿದ್ದ ಸಿಮೆಂಟ್ ಬಲ್ಕರ್ ಲಾರಿ ದಿಢೀರನೇ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದಿದೆ, ಡಿಕ್ಕಿ ರಭಸಕ್ಕೆ ಸ್ಥಳದಲ್ಲೇ ಪವನ್ ಎಂಬಾತ ಸಾವನ್ನಪ್ಪಿದ್ದು, ಮತ್ತೊರ್ವ ಅಶೋಕ್ ಆಸ್ಪತ್ರೆಗೆ ರವಾನಿಸುವ ವೇಳೆ ಮೃತನಾಗಿದ್ದಾನೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ…..
ಸದ್ಯ ಸಿಮೆಂಟ್ ಬಲ್ಕರ್ ಎಸ್ಕೇಪ್ ಆಗಿದ್ದು, ಪೊಲೀಸರು ಚಾಲಕನನ್ನು ಪತ್ತೆಹಚ್ಚಲು ಹುಡುಕಾಟ ಪ್ರಾರಂಭಿಸಿದ್ದಾರೆ… ಮೇಲ್ನೋಟಕ್ಕೆ ಬಲ್ಕರ್ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ…
ಕುವೆಂಪು......... ಸಾಹಿತ್ಯ - ವಿಶ್ವ ಮಾನವ ಪ್ರಜ್ಞೆ...... ಅಕ್ಷರಗಳ ಸಂಶೋಧನೆ - ಬರವಣಿಗೆ - ಸಾಹಿತ್ಯ - ಕನ್ನಡ ಭಾಷೆ…
ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…
ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…
ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…