ಹಿರಿಯ ಕನ್ನಡಪರ ಹೋರಾಟಗಾರ ಕಛೇರಿ ಪಾಳ್ಯದ ಮುನಿಯಪ್ಪ (62) ವರ್ಷ ಇಂದು ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಅವರು ಪತ್ನಿ , ಪುತ್ರ ಹಾಗೂ ಒಬ್ಬ ಪುತ್ರಿಯನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ದಿನಾಂಕ 12-02-2025 ರಂದು ಕಚೇರಿ ಪಾಳ್ಯದ ಸಾರ್ವಜನಿಕ ರುದ್ರಭೂಮಿಯಲ್ಲಿ ನಡೆಯಲಿದೆ.
ಮುನಿಯಪ್ಪ ಅವರು ಗೋಕಾಕ್ ಚಳವಳಿಯ ಮೂಲಕ ಹೋರಾಟಕ್ಕೆ ಧುಮುಕಿದ ಅವರು ಕನ್ನಡ ಚಳವಳಿ, ದಲಿತ ಚಳವಳಿಗಳಲ್ಲಿ ತೊಡಗಿಸಿಕೊಂಡವರು.
ಭುವನೇಶ್ವರಿ ಕನ್ನಡ ಸಂಘ, ಕನ್ನಡ ಜಾಗೃತ ಪರಿಷತ್ತು, ಕನ್ನಡ ಪಕ್ಷದ ಎಲ್ಲಾ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು.
ಕಳೆದ ತಿಂಗಳು ಕನ್ನಡ ಜಾಗೃತ ಪರಿಷತ್ತಿನಲ್ಲಿ ಪ್ರಾರಂಭವಾದ ಕನ್ನಡ ಕಲಿಗಳಿಗೆ ಕಜಾಪ ಜೊತೆಗಾರ ಯೋಜನೆಯ ಫಲಾನುಭವಿಗಳು ಆಗಿದ್ದರು.
ಮುನಿಯಪ್ಪ ಅವರ ನಿಧನದಿಂದ ಕನ್ನಡ ಹಾಗೂ ದಲಿತ ಚಳವಳಿಗಾರರೊಬ್ಬರನ್ನು ಕಳಕೊಂಡಂತಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಅವರ ಸಾವಿನ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ನೀಡಲಿ ಎಂದು ಭುವನೇಶ್ವರಿ ಕನ್ನಡ ಸಂಘ, ಕನ್ನಡ ಜಾಗೃತ ಪರಿಷತ್ತು, ಕನ್ನಡ ಪಕ್ಷ ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ.
ದೊಡ್ಡಬಳ್ಳಾಪುರದ ಹಲವು ಭಾಗಗಳಲ್ಲಿ ಕೆಲವು ಕಾರ್ಖಾನೆಗಳು ಕಲುಷಿತ ಕೆಮಿಕಲ್ ತ್ಯಾಜ್ಯ, ಇನ್ನಿತರ ತ್ಯಾಜ್ಯವನ್ನು ಕೆರೆಗಳಿಗೆ, ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿದ್ದಾರೆ. ಇದರಿಂದ…
ಕೂಸು ಇದ್ದ ಮನಿಗ ಬೀಸಣಿಕೆ ಯಾತಕ ? ಕೂಸು ಕಂದಯ್ಯ ಒಳ ಹೊರಗ ಆಡಿದರ ಬೀಸಣಿಕೆ ಗಾಳಿ ಸುಳಿದಾವ. ನಮ್ಮ…
ದೊಡ್ಡಬಳ್ಳಾಪುರ ತಾಲೂಕಿಗೆ ಮಂಜೂರಾಗಿದ್ದ ಜಿಲ್ಲಾಸ್ಪತ್ರೆಯನ್ನು ದೇವನಹಳ್ಳಿಗೆ ವರ್ಗಾವಣೆ ಮಾಡಲಾಗಿದೆ ಎಂಬ ಸುಳ್ಳು ಮಾಹಿತಿ ತಾಲೂಕಿನ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಇದಕ್ಕೆ…
ದೊಡ್ಡಬಳ್ಳಾಪುರ : ಬಡವರು ನಿರ್ಗತಿಕರಿಗೆ ಹಂಚಿಕೆ ಮಾಡಲಾದ ಆಶ್ರಯ ಮನೆಗಳು ಬಲಾಢ್ಯರ ಪಾಲಾಗಿವೆ, ಅಕ್ರಮವಾಗಿ ಮನೆಗಳ ಬೀಗ ಹೊಡೆದು ಅಶ್ರಯ…
ಇಂದು ವಿಧಾನಸೌಧ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆಯ…
ಜಿಲ್ಲಾ ಬಾಲಕಾರ್ಮಿಕ ಯೋಜನೆಯಲ್ಲಿ ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಗೌರವಧನ ಆಧಾರದ ಮೇರೆಗೆ ನೇಮಕಾತಿ ಮಾಡಿಕೊಳ್ಳಲು…