ಉತ್ತಮ ಆಡಳಿತ ಸಪ್ತಾಹ-2024 ರ ಅಂಗವಾಗಿ “ಇಂದೇ ಸಕಾಲ”ದಲ್ಲಿ ಹಿರಿಯ ನಾಗರಿಕರ ಗುರುತಿನ ಚೀಟಿಗಾಗಿ ಅರ್ಜಿ ಸಲ್ಲಿಸಿದ ಕೆಲವೇ ನಿಮಿಷಗಳಲ್ಲಿ ಅನುಮೋದಿಸಿ ಜಿಲ್ಲಾಧಿಕಾರಿಗಳಿಂದ ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಲಾಯಿತು.
ಉತ್ತಮ ಆಡಳಿತ ಸಪ್ತಾಹ-2024 ವು 19.12.2024 ರಿಂದ 24.12.2024 ರವರೆಗೆ ನಡೆಯಲಿದೆ. “ಪ್ರಶಾಸನ್ ಗಾಂವ್ ಕಿ ಓರೆ(ಗ್ರಾಮದ ಕಡೆಗೆ ಆಡಳಿತ)” ಎಂಬ ಅಭಿಯಾನದ ಮೂಲಕ ಜಿಲ್ಲೆಯಾದ್ಯಂತ ಸಾರ್ವಜನಿಕ ಕುಂದುಕೊರತೆಗಳಿಗೆ ತ್ವರಿತ ಪರಿಹಾರ ಮತ್ತು ಸೇವಾ ವಿತರಣೆಯನ್ನು ಸುಧಾರಿಸುವುದು ಸಪ್ತಾಹದ ಮುಖ್ಯ ಉದ್ದೇಶವಾಗಿದೆ.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದೇವನಹಳ್ಳಿ ತಾಲ್ಲೂಕಿನ ಕೊಯಿರಾ ಗ್ರಾಮದ ಗಾಂಧಿವಾದಿ ಹಾಗೂ ಪರಿಸರ ಸಂರಕ್ಷಕರಾದ ಕೆ.ಎಸ್ ಕೃಷ್ಣಪ್ಪ ಹಾಗೂ ದೊಡ್ಡಬಳ್ಳಾಪುರ ನಗರದ ನಿವೃತ್ತ ಶಿಕ್ಷರಾದ ಎಸ್.ಎಸ್ ರಾಜೇಂದ್ರ ಅವರಿಗೆ ಹಿರಿಯ ನಾಗರಿಕರ ಗುರುತಿನ ಚೀಟಿ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಅವರು ಮಾತನಾಡಿ ಜಿಲ್ಲೆಯ ಎಲ್ಲಾ ಹಿರಿಯ ನಾಗರಿಕರು “ಇಂದೇ ಸಕಾಲ” ವಿಶೇಷ ಯೋಜನೆಯಲ್ಲಿ ಹಿರಿಯ ನಾಗರಿಕರ ಗುರುತಿನ ಚೀಟಿಗಳನ್ನು ಪಡೆದು ವಿನೂತನ ಕಾರ್ಯಕ್ರಮದ ಸೌಲಭ್ಯಗಳನ್ನು ಪಡೆಯಲು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಜಗದೀಶ ಎನ್.ಎಂ, ಇಲಾಖೆಯ ಸಿಬ್ಬಂದಿ ರವಿಕುಮಾರ್, ಪ್ರಸನ್ನ ಮತ್ತು ಸಮಾಜಕಾರ್ಯ ಪ್ರಶಿಕ್ಷಣಾರ್ಥಿ ಮನೋಜ್ ಬಿ.ಹೆಚ್ ಉಪಸ್ಥಿತರಿದ್ದರು.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…