ಇಂದಿನ ದಿನಮಾನಗಳಲ್ಲಿ ನಗರೀಕರಣ ಬೆಳೆದಂತೆ ಕುಟುಂಬಗಳು ವಿಭಕ್ತವಾಗಿ ಹಿರಿಯರನ್ನು ಪ್ರೀತಿ-ವಾತ್ಸಲ್ಯದಿಂದ ಕಾಣುವುದು ಕಡಿಮೆಯಾಗುತ್ತಿದೆ. ಪ್ರತಿಯೊಂದು ಕುಟುಂಬದ ಕಿರಿಯರು ಹಿರಿಯರಿಗೆ ಮುಪ್ಪಾವಸ್ಥೆಯಲ್ಲಿ ಒಳ್ಳೆಯ ಆರೈಕೆ, ಪ್ರೀತಿ, ಗೌರವವನ್ನು ನೀಡುವುದು ಆದ್ಯ ಕರ್ತವ್ಯವಾಗಿದೆ. ಪ್ರತಿಯೊಂದು ಮನೆಯಲ್ಲೂ ಹಿರಿಯ ನಾಗರಿಕರನ್ನು ಗೌರವಯುತವಾಗಿ ನಡೆಸಿಕೊಂಡು ಸಂತೋಷದ ಜೀವನ ನಡೆಸಲು ಅನುವು ಮಾಡಿಕೊಡಬೇಕು ಎಂದು ರಾಜ್ಯ 5ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ. ನಾರಾಯಣಸ್ವಾಮಿ ಅವರು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದಲ್ಲಿ “ಘನತೆಯ ಬಾಳಿನೊಂದಿಗೆ ವಯೋಪಕ್ವತೆ; ವಿಶ್ವದಾದ್ಯಂತ ಹಿರಿಯ ಜೀವಿಗಳಿಗೆ ಆರೈಕೆ ಮತ್ತು ಬೆಂಬಲ ವ್ಯವಸ್ಥೆಗಳನ್ನು ಸದೃಢಗೊಳಿಸುವುದರ ಮಹತ್ವ” ಎಂಬ ಘೋಷ ವಾಕ್ಯದೊಂದಿಗೆ ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಆಯೋಜಿಸಿದ್ದ ‘ವಿಶ್ವ ಹಿರಿಯ ನಾಗರಿಕರ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ಮಾತನಾಡಿ ರಾಜ್ಯದಲ್ಲಿಯೇ ಜಿಲ್ಲೆಯಲ್ಲಿ 5 ಸಾವಿರ ಊರುಗೋಲುಗಳನ್ನು ಹಿರಿಯ ನಾಗರಿಕರಿಗೆ ಹಂತ ಹಂತವಾಗಿ ವಿತರಿಸಲಾಗುವುದು ಇದರಿಂದ ಹಿರಿಯ ನಾಗರಿಕರಿಗೆ ನಡೆದಾಡಲು ಸಹಾಯ ಕಲ್ಪಿಸುತ್ತದೆ. ಹಿರಿಯ ನಾಗರಿಕರ ಹಾಗೂ ವಿಶೇಷ ಚೇತನರ ಕುಂದು ಕೊರತೆಗಳನ್ನು ಪರಿಹರಿಸಲು ಜಿಲ್ಲಾಡಳಿತ ಸದಾ ಸಿದ್ಧವಿದೆ. ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯೂ ನಿರಾಶ್ರಿತ ಹಿರಿಯ ನಾಗರಿಕರ ರಕ್ಷಣೆ, ಇಲಾಖೆಯ ಸಂಗಮ ಯೋಜನೆ ಹಾಗೂ ಹಿರಿಯ ನಾಗರಿಕರ ಮನರಂಜನಾ ಕಾರ್ಯಕ್ರಮಗಳನ್ನು ರೂಪಿಸಿ ನಾವೀನ್ಯ ಕಾರ್ಯಕ್ರಮಗಳು ರೂಪಿಸುತ್ತಿರುವುದು ಶ್ಲಾಘನೀಯ ಎಂದರು. ಈ ಸಂದರ್ಭದಲ್ಲಿ ಹಿರಿಯ ನಾಗರಿಕರು ಈಗಿರುವ 1200 ರೂಗಳ ಪಿಂಚಣಿ ಸೌಲಭ್ಯವನ್ನು 2000 ರೂಗಳಿಗೆ ಹೆಚ್ಚಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು. ಇದಕ್ಕೆ ಜಿಲ್ಲಾಧಿಕಾರಿಗಳು ಸ್ಪಂದಿಸಿ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಹಿರಿಯ ನಾಗರಿಕರಿಗೆ ಆಶ್ವಾಸನೆ ನೀಡಿದರು.
ಇದೇ ವೇಳೆ ಕ್ರೀಡೆ, ಪ್ರಬಂಧ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಿರಿಯ ನಾಗರಿಕರನ್ನು ಅಭಿನಂದನಾ ಪತ್ರ ನೀಡಿ, ಸನ್ಮಾನಿಸಲಾಯಿತು.
ಸಭೆಯಲ್ಲಿ ಆಲೂರು ದುದ್ದನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಜಯಲಕ್ಷ್ಮಮ್ಮ, ಉಪಾಧ್ಯಕ್ಷರಾದ ಪಿ. ಮುನಿರಾಜು, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಮುದ್ದಣ್ಣ, ಹಿರಿಯ ನಾಗರಿಕರ ಮತ್ತು ವಿಕಲಚೇತನರ ಸಬಲೀಕರಣ ಇಲಾಖೆಯ ಜಿಲ್ಲಾ ಅಧಿಕಾರಿ ಜಗದೀಶ್ ಎನ್.ಎಂ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಅನಿತಾಲಕ್ಷ್ಮೀ, ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರು, ಸಿಬ್ಬಂದಿ, ಜಿಲ್ಲಾ/ತಾಲ್ಲೂಕು ನಿವೃತ್ತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು/ಪಧಾದಿಕಾರಿಗಳು, ಗ್ರಾಮೀಣ/ನಗರ/ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಹಾಗೂ ಇಲಾಖೆಯ ಸಿಬ್ಬಂದಿಗಳು, ಹಿರಿಯ ನಾಗರಿಕರು, ವಿಶೇಷ ಚೇತನರು ಉಪಸ್ಥಿತರಿದ್ದರು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…