ಹಿರಿಯ ನಾಗರಿಕರು ಹಾಗೂ ವಿಶೇಷಚೇತನರನ್ನು ಪ್ರೀತಿ-ವಾತ್ಸಲ್ಯದಿಂದ ಕಾಣಿ- 5ನೇ ಹಣಕಾಸು ಆಯೋಗದ ಅಧ್ಯಕ್ಷ ಸಿ.ನಾರಾಯಣಸ್ವಾಮಿ ಅಭಿಮತ

ಇಂದಿನ ದಿನಮಾನಗಳಲ್ಲಿ ನಗರೀಕರಣ ಬೆಳೆದಂತೆ ಕುಟುಂಬಗಳು ವಿಭಕ್ತವಾಗಿ ಹಿರಿಯರನ್ನು ಪ್ರೀತಿ-ವಾತ್ಸಲ್ಯದಿಂದ ಕಾಣುವುದು ಕಡಿಮೆಯಾಗುತ್ತಿದೆ. ಪ್ರತಿಯೊಂದು ಕುಟುಂಬದ ಕಿರಿಯರು ಹಿರಿಯರಿಗೆ ಮುಪ್ಪಾವಸ್ಥೆಯಲ್ಲಿ ಒಳ್ಳೆಯ ಆರೈಕೆ, ಪ್ರೀತಿ, ಗೌರವವನ್ನು ನೀಡುವುದು ಆದ್ಯ ಕರ್ತವ್ಯವಾಗಿದೆ. ಪ್ರತಿಯೊಂದು ಮನೆಯಲ್ಲೂ ಹಿರಿಯ ನಾಗರಿಕರನ್ನು ಗೌರವಯುತವಾಗಿ ನಡೆಸಿಕೊಂಡು ಸಂತೋಷದ ಜೀವನ ನಡೆಸಲು ಅನುವು ಮಾಡಿಕೊಡಬೇಕು ಎಂದು ರಾಜ್ಯ 5ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ. ನಾರಾಯಣಸ್ವಾಮಿ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದಲ್ಲಿ “ಘನತೆಯ ಬಾಳಿನೊಂದಿಗೆ ವಯೋಪಕ್ವತೆ; ವಿಶ್ವದಾದ್ಯಂತ ಹಿರಿಯ ಜೀವಿಗಳಿಗೆ ಆರೈಕೆ ಮತ್ತು ಬೆಂಬಲ ವ್ಯವಸ್ಥೆಗಳನ್ನು ಸದೃಢಗೊಳಿಸುವುದರ ಮಹತ್ವ” ಎಂಬ ಘೋಷ ವಾಕ್ಯದೊಂದಿಗೆ ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಆಯೋಜಿಸಿದ್ದ ‘ವಿಶ್ವ ಹಿರಿಯ ನಾಗರಿಕರ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಹಿರಿಯ ನಾಗರಿಕರು ಹಾಗೂ ವಿಶೇಷಚೇತನರನ್ನು ಗೌರವಿಸುವ ಪ್ರವೃತ್ತಿ ಹೆಚ್ಚಾಗಬೇಕು. ದೇವರು ವಿಶೇಷಚೇತನರಲ್ಲಿ ತನ್ನದೇಯಾದ ವಿಶಿಷ್ಟ ಕಲೆ, ಶಕ್ತಿ ನೀಡಿರುತ್ತಾನೆ. ಅದನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಸಾಧಕರನ್ನಾಗಿಸುವ ಕೆಲಸ ಮಾಡುವಂತಾಗಬೇಕಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ಮಾತನಾಡಿ ರಾಜ್ಯದಲ್ಲಿಯೇ ಜಿಲ್ಲೆಯಲ್ಲಿ 5 ಸಾವಿರ ಊರುಗೋಲುಗಳನ್ನು ಹಿರಿಯ ನಾಗರಿಕರಿಗೆ ಹಂತ ಹಂತವಾಗಿ ವಿತರಿಸಲಾಗುವುದು ಇದರಿಂದ ಹಿರಿಯ ನಾಗರಿಕರಿಗೆ ನಡೆದಾಡಲು ಸಹಾಯ ಕಲ್ಪಿಸುತ್ತದೆ. ಹಿರಿಯ ನಾಗರಿಕರ ಹಾಗೂ ವಿಶೇಷ ಚೇತನರ ಕುಂದು ಕೊರತೆಗಳನ್ನು ಪರಿಹರಿಸಲು ಜಿಲ್ಲಾಡಳಿತ ಸದಾ ಸಿದ್ಧವಿದೆ. ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯೂ ನಿರಾಶ್ರಿತ ಹಿರಿಯ ನಾಗರಿಕರ ರಕ್ಷಣೆ, ಇಲಾಖೆಯ ಸಂಗಮ ಯೋಜನೆ ಹಾಗೂ ಹಿರಿಯ ನಾಗರಿಕರ ಮನರಂಜನಾ ಕಾರ್ಯಕ್ರಮಗಳನ್ನು ರೂಪಿಸಿ ನಾವೀನ್ಯ ಕಾರ್ಯಕ್ರಮಗಳು ರೂಪಿಸುತ್ತಿರುವುದು ಶ್ಲಾಘನೀಯ ಎಂದರು. ಈ ಸಂದರ್ಭದಲ್ಲಿ ಹಿರಿಯ ನಾಗರಿಕರು ಈಗಿರುವ 1200 ರೂಗಳ ಪಿಂಚಣಿ ಸೌಲಭ್ಯವನ್ನು 2000 ರೂಗಳಿಗೆ ಹೆಚ್ಚಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು. ಇದಕ್ಕೆ ಜಿಲ್ಲಾಧಿಕಾರಿಗಳು ಸ್ಪಂದಿಸಿ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಹಿರಿಯ ನಾಗರಿಕರಿಗೆ ಆಶ್ವಾಸನೆ ನೀಡಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಅಲಿಮ್ಕೊ ಸಂಸ್ಥೆಯ ವತಿಯಿಂದ ವಯೋಶ್ರೀ ಮತ್ತು ಅಡಿಪ್ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 235 ವಿಕಚೇತನರಿಗೆ (ವ್ಹೀಲ್‌ಚೇರ್, ಯಂತ್ರಚಾಲಿತ ವ್ಹೀಲ್ ಚೇರ್ ಕ್ರರ‍್ಸ್, ಕ್ಯಾಲಿರ‍್ಸ, ವಾಕರ್, ಶ್ರವಣ ಸಾಧನ ಹಾಗೂ ಇತರೆ ಸಲಕರಣೆಗಳು) ಹಾಗೂ 182 ಹಿರಿಯ ನಾಗರಿಕರಿಗೆ ಸಾಧನ ಸಲಕರಣೆ (ವ್ಹೀಲ್‌ಚೇರ್, ತ್ರಿಚಕ್ರ, ಕ್ರರ‍್ಸ, ವಾಕರ್, ಶ್ರವಣ ಸಾಧನ ಹಾಗೂ ಇತರೆ ಸಲಕರಣೆಗಳು) ವಿತರಣೆ ಮಾಡಲಾಯಿತು.

ಇದೇ ವೇಳೆ ಕ್ರೀಡೆ, ಪ್ರಬಂಧ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಿರಿಯ ನಾಗರಿಕರನ್ನು ಅಭಿನಂದನಾ ಪತ್ರ ನೀಡಿ, ಸನ್ಮಾನಿಸಲಾಯಿತು.

ಸಭೆಯಲ್ಲಿ ಆಲೂರು ದುದ್ದನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಜಯಲಕ್ಷ್ಮಮ್ಮ, ಉಪಾಧ್ಯಕ್ಷರಾದ ಪಿ. ಮುನಿರಾಜು, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಮುದ್ದಣ್ಣ, ಹಿರಿಯ ನಾಗರಿಕರ ಮತ್ತು ವಿಕಲಚೇತನರ ಸಬಲೀಕರಣ ಇಲಾಖೆಯ ಜಿಲ್ಲಾ ಅಧಿಕಾರಿ ಜಗದೀಶ್ ಎನ್.ಎಂ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಅನಿತಾಲಕ್ಷ್ಮೀ, ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರು, ಸಿಬ್ಬಂದಿ, ಜಿಲ್ಲಾ/ತಾಲ್ಲೂಕು ನಿವೃತ್ತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು/ಪಧಾದಿಕಾರಿಗಳು, ಗ್ರಾಮೀಣ/ನಗರ/ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಹಾಗೂ ಇಲಾಖೆಯ ಸಿಬ್ಬಂದಿಗಳು, ಹಿರಿಯ ನಾಗರಿಕರು, ವಿಶೇಷ ಚೇತನರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

6 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

18 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

19 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

20 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

20 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

1 day ago