ಹಿರಿಯ ನಾಗರಿಕರ ಕಲ್ಯಾಣಕ್ಕೆ ಅಗತ್ಯ ಕಾರ್ಯಕ್ರಮಗಳನ್ನು ರೂಪಿಸಿ – ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್

ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿವಾರು ಹಾಗೂ ಗ್ರಾಮವಾರು ಹಿರಿಯ ನಾಗರಿಕರಿಗೆ ಅವಶ್ಯಕವಾದ ಆರೋಗ್ಯ ತಪಾಸಣೆಯನ್ನು ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಮೂಲಕ ಜಾರಿ ಮಾಡಲು ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸುವುದಾಗಿ ಜಿಲ್ಲಾಧಿಕಾರಿ ಡಾ. ಎನ್.ಶಿವಶಂಕರ್ ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದಲ್ಲಿ  ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ  ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ ಊರುಗೋಲುಗಳ ಮೂಲಕ ನಡೆದಾಡುವಂತಹ ಹಿರಿಯ ನಾಗರಿಕರಿಗೆ 5000 ಊರುಗೋಲುಗಳನ್ನು ಶೀಘ್ರವಾಗಿಯೇ ವಿತರಿಸುವುದಾಗಿ ಕಾರ್ಯಕ್ರಮದಲ್ಲಿ  ಘೋಷಿಸುವುದರ ಜೊತೆಗೆ 10 ಜನ ಹಿರಿಯ ನಾಗರಿಕರಿಗೆ ಸಾಂಕೇತಿಕವಾಗಿ ಹಿರಿಯ ನಾಗರಿಕರ ಊರುಗೋಲುಗಳನ್ನು ವಿತರಿಸಿದರು. ಪ್ರತಿ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರ ಕಾನೂನು ಅರಿವಿಗಾಗಿ ಪಾಲಕರ ಪೋಷಣೆ ಸಂರಕ್ಷಣೆ ಹಾಗೂ ಹಿರಿಯ ನಾಗರಿಕರ ರಕ್ಷಣಾ ಕಾಯ್ದೆಯ ಕಾರ್ಯಾಗಾರಗಳನ್ನು ಏರ್ಪಡಿಸಲು ಯೋಜನೆ ರೂಪಿಸುವುದಾಗಿ ತಿಳಿಸಿದರು.

ನಿರಾಶ್ರಿತ ಹಿರಿಯ ನಾಗರಿಕರ ರಕ್ಷಣೆ, ಇಲಾಖೆಯ ಸಂಗಮ ಯೋಜನೆ ಹಾಗೂ ಪ್ರತಿ ಶುಕ್ರವಾರ ಹಿರಿಯ ನಾಗರಿಕರ ಮನರಂಜನಾ ಕಾರ್ಯಕ್ರಮಗಳನ್ನು ರೂಪಿಸಿ ನಾವೀನ್ಯ ಕಾರ್ಯಕ್ರಮಗಳನ್ನು ಜಿಲ್ಲಾಡಳಿತದ ಗಮನಕ್ಕೆ ತಂದು ಅನುಷ್ಟಾನಗೊಳಿಸಿದ್ದಕ್ಕಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯನ್ನು ಶ್ಲಾಘಿಸಿದರು.

ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ ಎನ್ ಅನುರಾಧ ಅವರು ಮಾತನಾಡಿ,  ಜಿಲ್ಲಾ ಪಂಚಾಯತ್‌ನಲ್ಲಿಯೂ ಸಹ ಹಿರಿಯ ನಾಗರಿಕರಿಗೆ ವಿಶೇಷ ಆದ್ಯತೆಯ ಮೇರೆಗೆ ಸೌಲಭ್ಯಗಳನ್ನು ದೊರಕಿಸಿ ಕೊಡುವುದಾಗಿ ಹಾಗೂ ಪ್ರತಿಯೊಬ್ಬರು ಹಿರಿಯ ನಾಗರಿಕರನ್ನು ಗೌರವಯುತವಾಗಿ ನಡೆಸಿಕೊಂಡು ಸಂತೋಷದ ಜೀವನ ನಡೆಸಲು ಅನುವು ಮಾಡಿಕೊಡಲು ತಿಳಿಸಿದರು.  ಜಿಲ್ಲಾ ಪಂಚಾಯತ್ ಅನುದಾನದಲ್ಲಿ ಸ್ವೀಕೃತವಾಗಿದ್ದಂತಹ ಹಿರಿಯ ನಾಗರಿಕರ ಶ್ರವಣ ಸಾಧನೆಗಳನ್ನು ಹಾಗೂ ಇಲಾಖಾ ಅನುದಾನಿತ ಸಂಸ್ಥೆ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ವತಿಯಿಂದ ಹಿರಿಯ ನಾಗರಿಕ ವಿಕಲಚೇತನ ವ್ಯಕ್ತಿಗೆ ಕೃತಕ ಕಾಲನ್ನು ಅಳವಡಿಸಲಾಯಿತು.

ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ಜಗದೀಶ ಎನ್ ಎಂ ರವರು ಮಾತನಾಡಿ, ಪ್ರತಿ ಮನೆಯಲ್ಲಿಯೂ ಹಿರಿಯ ನಾಗರಿಕರನ್ನು ಗೌರವಿಸುವ ಪ್ರವೃತ್ತಿ ಹೆಚ್ಚಾಗಬೇಕು ಹಾಗೂ ಹಿರಿಯರ ಮತ್ತು ಹಿರಿಯರ ನಡುವೆ ಬಾಂಧವ್ಯ ಹೆಚ್ಚಿಸಿಕೊಳ್ಳುವ ಕೌಟುಂಬಿಕ ವಾತಾವರಣ ನಿರ್ಮಾಣವಾಗಬೇಕು.

ಇದಕ್ಕಾಗಿಯೇ ಇಲಾಖೆಯಿಂದ ಜಿಲ್ಲಾ ಮಟ್ಟದ ಸಂಗಮ ಹಿರಿಯರು ಮತ್ತು ಕಿರಿಯರ ವಾತ್ಸಲ್ಯದ ವೇದಿಕೆ ಹಾಗೂ ಪ್ರತಿ ಶುಕ್ರವಾರ ಹಿರಿಯ ನಾಗರಿಕರ ಮನರಂಜನ ಚಟುವಟಿಕೆಗಳನ್ನು ಪ್ರತಿ ಮನೆಯಲ್ಲಿಯೂ ಕೈಗೊಂಡು ಹಿರಿಯ ನಾಗರೀಕರ ಮನರಂಜನೆ ಆರೋಗ್ಯ ಮತ್ತು ಇತರೆ ಕಾಳಜಿಗಳನ್ನು ವಹಿಸಲು ವಿಶೇಷ ದಿನವನ್ನಾಗಿ ಆಚರಿಸಲು ತಿಳಿಸಿದರು.

ಪ್ರತಿಯೊಬ್ಬ ಹಿರಿಯ ನಾಗರಿಕರು ತಮ್ಮ ಬಳಿ ಒಂದು ಊರುಗೋಲನ್ನ ಇಟ್ಟುಕೊಳ್ಳಲು ಒಂದು ಊರುಗೋಲು ಒಬ್ಬ ವ್ಯಕ್ತಿ ಜೊತೆಗಿದ್ದಷ್ಟು ಸಮಾನವಾದದ್ದು ಎಂಬುದನ್ನು ಹಿರಿಯರಿಗೆ ತಿಳಿಸಿದರು.

ಇದೇ ವೇಳೆ ಕ್ರೀಡಾ & ಸಾಂಸ್ಕೃತಿಕ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 09 ಹಿರಿಯ ನಾಗರಿಕರನ್ನು ಮತ್ತು ಒಂದು ಸಂಸ್ಥೆಯನ್ನು ಸನ್ಮಾನಿಸಿ ಆಭಿನಂದಿಸಲಾಯಿತು.

100 ವರ್ಷ ಮೇಲ್ಪಟ್ಟ ಇಬ್ಬರು ಹಿರಿಯ ನಾಗರಿಕರಾದ ಶ್ರೀಮತಿ ಮುನಿಯಮ್ಮ ಆದಿನಾರಾಯಣ ಹೊಸಹಳ್ಳಿ ಹಾಗೂ ಶ್ರೀ.ಕೆಂಪಣ್ಣ ಆದಿನಾರಾಯಣ ಹೊಸಹಳ್ಳಿ ಇವರನ್ನು ಮಾನ್ಯ ಚುನಾವಣೆ ಆಯೋಗದ ನಿರ್ದೇಶನದಂತೆ ಹಿರಿಯ ಮತದಾರರೆಂದು ಸನ್ಮಾನಿಸಲಾಯಿತು.

ಸಭೆಯಲ್ಲಿ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರು, ಸಿಬ್ಬಂದಿಗಳು, ಜಿಲ್ಲಾ, ತಾಲ್ಲೂಕು ನಿವೃತ್ತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ಪಧಾದಿಕಾರಿಗಳು, ಗ್ರಾಮೀಣ, ನಗರ, ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಹಾಗೂ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

5 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

5 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

6 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

12 hours ago

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…

14 hours ago

ಹಸಿವಿನ ಔಷಧಿ ಮತ್ತು ಮತದಾನ…..

ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…

17 hours ago