
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲ್ಲೂಕಿನ ಹಣಬೆ ಗ್ರಾಮದ ಹಿರಿಯ ರಾಜಕಾರಣಿ ಹಾಗೂ ಮಾಜಿ ಶಾಸಕ ಆರ್.ಜಿ. ವೆಂಕಟಾಚಲಯ್ಯ (90) ಅವರು ಶುಕ್ರವಾರ ಬೆಳಗಿನ ಜಾವ ವಿಧಿವಶರಾಗಿದ್ದಾರೆ.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.

ಆರ್.ಜಿ. ವೆಂಕಟಾಚಲಯ್ಯ ಅವರು ತಮ್ಮ ರಾಜಕೀಯ ಜೀವನದಲ್ಲಿ ಜನಪರ ನಾಯಕರಾಗಿ ಗುರುತಿಸಿಕೊಂಡಿದ್ದು, ದೊಡ್ಡಬಳ್ಳಾಪುರ ಭಾಗದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ನಿಧನದಿಂದ ರಾಜಕೀಯ ವಲಯ ಹಾಗೂ ಅಭಿಮಾನಿಗಳಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
ಮೃತರು ಮೂರು ಪುತ್ರಿಯರನ್ನು ಅಗಲಿದ್ದಾರೆ.

ಹಣಬೆ ಗ್ರಾಮದಲ್ಲಿರುವ ಅವರ ನಿವಾಸದಲ್ಲಿ ಇಂದು ಬೆಳಿಗ್ಗೆ 11 ಗಂಟೆಯಿಂದ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಅಂತ್ಯಕ್ರಿಯೆಯು ಶುಕ್ರವಾರ ಸಂಜೆ ಹಣಬೆ ಗ್ರಾಮದಲ್ಲೇ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.