ಹಿರಿಯ ವಿದ್ಯಾರ್ಥಿಗಳಿಂದ‌ ಕಿರಿಯ ವಿದ್ಯಾರ್ಥಿಗಳಿಗೆ ಅಮಾನವೀಯ ರ‍್ಯಾಗಿಂಗ್‌: ಸುಮಾರು ಮೂರು ತಿಂಗಳ ಕಾಲ ಭಯಾನಕ ರ‍್ಯಾಗಿಂಗ್‌ಗೆ ಒಳಗಾಗಿದ್ದ ವಿದ್ಯಾರ್ಥಿಗಳು: ಖಾಸಗಿ ಅಂಗಕ್ಕೆ ಡಂಬಲ್ಸ್ ನೇತು ಹಾಕಿ ಹಿಂಸೆ!: ತಪ್ಪಿತಸ್ಥ ವಿದ್ಯಾರ್ಥಿಗಳ ಬಂಧನ

ಕೇರಳಾದ ಕೊಟ್ಟಾಯಂ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳು ಅಮಾನುಷವಾಗಿ ಸುಮಾರು ಮೂರು ತಿಂಗಳ ಕಾಲ ರ‍್ಯಾಗಿಂಗ್‌ಗೆ ಒಳಗಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.

ಕೊಟ್ಟಾಯಂ ಸರ್ಕಾರಿ ನರ್ಸಿಂಗ್ ಕಾಲೇಜಿನ ಮೂರನೇ ವರ್ಷದ ಐವರು ವಿದ್ಯಾರ್ಥಿಗಳು ರ‍್ಯಾಗಿಂಗ್‌ ನೆಪದಲ್ಲಿ ಪ್ರಥಮ ವರ್ಷದ ಮೂವರು ವಿದ್ಯಾರ್ಥಿಗಳನ್ನು ಅತ್ಯಂತ  ಭೀಕರವಾಗಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಹಿಂಸಿಸಿದ್ದಾರೆ.

ಘಟನೆ ಬೆಳಕಿಗೆ ಬರುತ್ತಿದ್ದಂತೆ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಿದ ಆರೋಪದ ಮೇಲೆ ತಪ್ಪಿತಸ್ಥ ವಿದ್ಯಾರ್ಥಿಗಳ ಬಂಧನವಾಗಿದೆ.

ಕಳೆದ ವರ್ಷ ನವೆಂಬರ್‌ನಿಂದ ನಿರಂತರವಾಗಿ ರ‍್ಯಾಗಿಂಗ್‌ಗೆ ಒಳಗಾಗಿರುವುದಾಗಿ ತಿರುವನಂತಪುರಂ ಮೂಲದ ಜೂನಿಯರ್ ವಿದ್ಯಾರ್ಥಿಗಳು ದೂರಿನಲ್ಲಿ ತಿಳಿಸಿದ್ದಾರೆ.

ದೂರಿನ ಆಧಾರದ ಮೇಲೆ ಆರೋಪಿ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿ, 2011ರ ಅಂಟಿ-ರ‍್ಯಾಗಿಂಗ್‌ ಕಾಯ್ದೆಯಡಿ ಬಂಧಿಸಲಾಗಿದೆ.

ಎರಡನೇ ವರ್ಷದ ಸಾಮಾನ್ಯ ನರ್ಸಿಂಗ್ ವಿದ್ಯಾರ್ಥಿಗಳಾದ ಸ್ಯಾಮ್ಯುಯೆಲ್ ಜಾನ್ಸನ್ (20), ಎನ್‌.ಎನ್.ಜೀವಾ (19) ಮತ್ತು ಮೂರನೇ ವರ್ಷದ ವಿದ್ಯಾರ್ಥಿಗಳಾದ ರಾಹುಲ್ ರಾಜ್ ಕೆ.ಪಿ (22), ಸಿ.ರಿಜಿಲ್ಟಿತ್ (21), ವಿವೇಕ್ ಎನ್ವಿ (21) ಬಂಧಿತ ವಿದ್ಯಾರ್ಥಿಗಳು.

‘ಜೂನಿಯರ್ ವಿದ್ಯಾರ್ಥಿಗಳಿಗೆ ಬೆತ್ತಲೆಯಾಗಿ ನಿಲ್ಲುವಂತೆ ಒತ್ತಾಯಿಸಿ, ಅವರ ಖಾಸಗಿ ಅಂಗಗಳಿಗೆ ಡಂಬಲ್ಸ್‌ಗಳನ್ನು ನೇತು ಹಾಕಲಾಗುತ್ತಿತ್ತು’ ಎಂದು ಗಾಂಧಿ ನಗರ ಪೊಲೀಸರು ತಿಳಿಸಿದ್ದಾರೆ.

ಜೊತೆಗೆ ‘ಜ್ಯಾಮಿಟ್ರಿ ಬಾಕ್ಸ್ ಕಂಪಾಸ್‌ನಲ್ಲಿದ್ದ ಚೂಪಾದ ವಸ್ತುಗಳಿಂದ ಗಾಯಗೊಳಿಸಲಾಗುತ್ತಿತ್ತು. ಬಳಿಕ ಗಾಯಗಳಿಗೆ ಲೋಷನ್ ಹಚ್ಚಿ ನೋವುಂಟು ಮಾಡುತ್ತಿದ್ದರು. ಜೂನಿಯರ್ ವಿದ್ಯಾರ್ಥಿಗಳು ನೋವಿನಿಂದ ಕಿರುಚಾಡಿದಾಗ ಬಲವಂತವಾಗಿ ಲೋಷನ್ ಅನ್ನು ಬಾಯಿಗೆ ತುಂಬಿಸುತ್ತಿದ್ದರು. ಈ ಕೃತ್ಯಗಳನ್ನು ವಿಡಿಯೋ ಮಾಡಿಕೊಂಡು, ಯಾರಿಗಾದರೂ ಹೇಳಿದರೆ ಶಿಕ್ಷಣಕ್ಕೆ ತೊಂದರೆ ಕೊಡುವುದಾಗಿ ಬೆದರಿಕೆ ಹಾಕುತ್ತಿದ್ದರು’ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಭಾನುವಾರ ಹಿರಿಯ ವಿದ್ಯಾರ್ಥಿಗಳು ಜೂನಿಯರ್ ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡುತ್ತಿದ್ದರು. ಹಣ ನೀಡಲು ನಿರಾಕರಿಸಿದವರು ಥಳಿತಕ್ಕೊಳಗಾಗುತ್ತಿದ್ದರು. ಕೊನೆಗೆ ಚಿತ್ರ ಹಿಂಸೆಯನ್ನು ತಾಳಲಾರದೆ ಓರ್ವ ವಿದ್ಯಾರ್ಥಿ ತನ್ನ ತಂದೆಗೆ ವಿಷಯ ತಿಳಿಸಿದ್ದಾನೆ. ಬಳಿಕ ವಿದ್ಯಾರ್ಥಿ ತಂದೆಯೇ ಪೊಲೀಸರಿಗೆ ದೂರು ನೀಡಲು ತಿಳಿಸಿದ್ದಾರೆ. ಹೀಗಾಗಿ ಪ್ರಥಮ ವರ್ಷದ ಮೂವರು ಸಂತ್ರಸ್ತ ವಿದ್ಯಾರ್ಥಿಗಳು ದೂರು ನೀಡಿದ್ದಾರೆ.

ಕಳೆದ ಕೆಲವು ವಾರಗಳ ಹಿಂದೆ ಕೊಚ್ಚಿಯಲ್ಲಿ ನಡೆದ ರ‍್ಯಾಗಿಂಗ್‌ನಿಂದಾಗಿ 15 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದ. ಇದರ ಬೆನ್ನಲ್ಲೆ ಈ ಭೀಕರ ರ‍್ಯಾಗಿಂಗ್‌​ ಪ್ರಕರಣ ಈಗ ಬೆಳಕಿಗೆ ಬಂದಿದೆ.

Ramesh Babu

Journalist

Recent Posts

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

25 seconds ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

13 hours ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

14 hours ago

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ…?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…

17 hours ago