ಕೇರಳಾದ ಕೊಟ್ಟಾಯಂ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳು ಅಮಾನುಷವಾಗಿ ಸುಮಾರು ಮೂರು ತಿಂಗಳ ಕಾಲ ರ‍್ಯಾಗಿಂಗ್‌ಗೆ ಒಳಗಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.
ಕೊಟ್ಟಾಯಂ ಸರ್ಕಾರಿ ನರ್ಸಿಂಗ್ ಕಾಲೇಜಿನ ಮೂರನೇ ವರ್ಷದ ಐವರು ವಿದ್ಯಾರ್ಥಿಗಳು ರ‍್ಯಾಗಿಂಗ್ ನೆಪದಲ್ಲಿ ಪ್ರಥಮ ವರ್ಷದ ಮೂವರು ವಿದ್ಯಾರ್ಥಿಗಳನ್ನು ಅತ್ಯಂತ ಭೀಕರವಾಗಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಹಿಂಸಿಸಿದ್ದಾರೆ.
ಘಟನೆ ಬೆಳಕಿಗೆ ಬರುತ್ತಿದ್ದಂತೆ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಿದ ಆರೋಪದ ಮೇಲೆ ತಪ್ಪಿತಸ್ಥ ವಿದ್ಯಾರ್ಥಿಗಳ ಬಂಧನವಾಗಿದೆ.
ಕಳೆದ ವರ್ಷ ನವೆಂಬರ್‌ನಿಂದ ನಿರಂತರವಾಗಿ ರ‍್ಯಾಗಿಂಗ್‌ಗೆ ಒಳಗಾಗಿರುವುದಾಗಿ ತಿರುವನಂತಪುರಂ ಮೂಲದ ಜೂನಿಯರ್ ವಿದ್ಯಾರ್ಥಿಗಳು ದೂರಿನಲ್ಲಿ ತಿಳಿಸಿದ್ದಾರೆ.
ದೂರಿನ ಆಧಾರದ ಮೇಲೆ ಆರೋಪಿ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿ, 2011ರ ಅಂಟಿ-ರ‍್ಯಾಗಿಂಗ್ ಕಾಯ್ದೆಯಡಿ ಬಂಧಿಸಲಾಗಿದೆ.
ಎರಡನೇ ವರ್ಷದ ಸಾಮಾನ್ಯ ನರ್ಸಿಂಗ್ ವಿದ್ಯಾರ್ಥಿಗಳಾದ ಸ್ಯಾಮ್ಯುಯೆಲ್ ಜಾನ್ಸನ್ (20), ಎನ್.ಎನ್.ಜೀವಾ (19) ಮತ್ತು ಮೂರನೇ ವರ್ಷದ ವಿದ್ಯಾರ್ಥಿಗಳಾದ ರಾಹುಲ್ ರಾಜ್ ಕೆ.ಪಿ (22), ಸಿ.ರಿಜಿಲ್ಟಿತ್ (21), ವಿವೇಕ್ ಎನ್ವಿ (21) ಬಂಧಿತ ವಿದ್ಯಾರ್ಥಿಗಳು.
‘ಜೂನಿಯರ್ ವಿದ್ಯಾರ್ಥಿಗಳಿಗೆ ಬೆತ್ತಲೆಯಾಗಿ ನಿಲ್ಲುವಂತೆ ಒತ್ತಾಯಿಸಿ, ಅವರ ಖಾಸಗಿ ಅಂಗಗಳಿಗೆ ಡಂಬಲ್ಸ್‌ಗಳನ್ನು ನೇತು ಹಾಕಲಾಗುತ್ತಿತ್ತು’ ಎಂದು ಗಾಂಧಿ ನಗರ ಪೊಲೀಸರು ತಿಳಿಸಿದ್ದಾರೆ.
ಜೊತೆಗೆ ‘ಜ್ಯಾಮಿಟ್ರಿ ಬಾಕ್ಸ್ ಕಂಪಾಸ್‌ನಲ್ಲಿದ್ದ ಚೂಪಾದ ವಸ್ತುಗಳಿಂದ ಗಾಯಗೊಳಿಸಲಾಗುತ್ತಿತ್ತು. ಬಳಿಕ ಗಾಯಗಳಿಗೆ ಲೋಷನ್ ಹಚ್ಚಿ ನೋವುಂಟು ಮಾಡುತ್ತಿದ್ದರು. ಜೂನಿಯರ್ ವಿದ್ಯಾರ್ಥಿಗಳು ನೋವಿನಿಂದ ಕಿರುಚಾಡಿದಾಗ ಬಲವಂತವಾಗಿ ಲೋಷನ್ ಅನ್ನು ಬಾಯಿಗೆ ತುಂಬಿಸುತ್ತಿದ್ದರು. ಈ ಕೃತ್ಯಗಳನ್ನು ವಿಡಿಯೋ ಮಾಡಿಕೊಂಡು, ಯಾರಿಗಾದರೂ ಹೇಳಿದರೆ ಶಿಕ್ಷಣಕ್ಕೆ ತೊಂದರೆ ಕೊಡುವುದಾಗಿ ಬೆದರಿಕೆ ಹಾಕುತ್ತಿದ್ದರು’ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಭಾನುವಾರ ಹಿರಿಯ ವಿದ್ಯಾರ್ಥಿಗಳು ಜೂನಿಯರ್ ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡುತ್ತಿದ್ದರು. ಹಣ ನೀಡಲು ನಿರಾಕರಿಸಿದವರು ಥಳಿತಕ್ಕೊಳಗಾಗುತ್ತಿದ್ದರು. ಕೊನೆಗೆ ಚಿತ್ರ ಹಿಂಸೆಯನ್ನು ತಾಳಲಾರದೆ ಓರ್ವ ವಿದ್ಯಾರ್ಥಿ ತನ್ನ ತಂದೆಗೆ ವಿಷಯ ತಿಳಿಸಿದ್ದಾನೆ. ಬಳಿಕ ವಿದ್ಯಾರ್ಥಿ ತಂದೆಯೇ ಪೊಲೀಸರಿಗೆ ದೂರು ನೀಡಲು ತಿಳಿಸಿದ್ದಾರೆ. ಹೀಗಾಗಿ ಪ್ರಥಮ ವರ್ಷದ ಮೂವರು ಸಂತ್ರಸ್ತ ವಿದ್ಯಾರ್ಥಿಗಳು ದೂರು ನೀಡಿದ್ದಾರೆ.
ಕಳೆದ ಕೆಲವು ವಾರಗಳ ಹಿಂದೆ ಕೊಚ್ಚಿಯಲ್ಲಿ ನಡೆದ ರ‍್ಯಾಗಿಂಗ್‌ನಿಂದಾಗಿ 15 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದ. ಇದರ ಬೆನ್ನಲ್ಲೆ ಈ ಭೀಕರ ರ‍್ಯಾಗಿಂಗ್ ಪ್ರಕರಣ ಈಗ ಬೆಳಕಿಗೆ ಬಂದಿದೆ.
ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…
ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…
ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…