Categories: ಕೋಲಾರ

ಹಿರಿಯ ಸಹಕಾರಿ ಕೆ.ಶ್ರೀನಿವಾಸಗೌಡರನ್ನು ಜುಲೈ 7ರಂದು ನಡೆಯಲಿರುವ ನಾಗರೀಕ ಸನ್ಮಾನಕ್ಕೆ ಅಹ್ವಾನ

ಕೋಲಾರ: ಜಿಲ್ಲೆಯ ಹಿರಿಯ ಸಹಕಾರಿ ಧುರೀಣ ಹಾಗೂ ಮಾಜಿ ಸಚಿವ ಕೆ.ಶ್ರೀನಿವಾಸಗೌಡರಿಗೆ ಅವರ ಅಭಿಮಾನಿಗಳ ಬಳಗದಿಂದ ಜುಲೈ 7 ರಂದು ಭಾನುವಾರ ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ನಾಗರೀಕ ಸನ್ಮಾನಕ್ಕೆ ಶುಕ್ರವಾರ ಭೇಟಿ ನೀಡಿ ಅಹ್ವಾನ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್ ಮಾತನಾಡಿ, ಜಿಲ್ಲೆಯ ಕೀರ್ತಿಯನ್ನು ದೇಶ ವಿದೇಶಗಳಲ್ಲಿ ಸಹಕಾರಿ ವ್ಯವಸ್ಥೆಯ ಮೂಲಕ ಪರಿಚಯಿಸಿದ್ದಾರೆ. ಅಣ್ಣಿಹಳ್ಳಿ ಸೊಸೈಟಿಯ ಮೂಲಕ ರಾಜಕೀಯ ಪ್ರಾರಂಭಿಸಿ ತಾಲೂಕು ಬೋರ್ಡ್ ಸದಸ್ಯರಾಗಿ, ಜಿಪಂ ಸದಸ್ಯರಾಗಿ ನಾಲ್ಕು ಬಾರಿ ಕೋಲಾರ ಕ್ಷೇತ್ರದ ಶಾಸಕರಾಗಿ ಜೊತೆಗೆ ಕೃಷಿ ಸಚಿವರಾಗಿ ಜನರ ಸೇವೆಯನ್ನು ಮಾಡಿದ್ದಾರೆ. ಇಂತಹ ಜಿಲ್ಲೆಯ ನೈಜ ಸಾಧಕರನ್ನು ಗುರುತಿಸಿ ಗೌರವಿಸುವ ಕೆಲಸವನ್ನು ಮಾಡಲಾಗುತ್ತಾ ಇದೆ. ಮುಂದಿನ ಯುವ ಪೀಳಿಗೆಗೆ ಇವರನ್ನು ಪರಿಚಯಿಸಬೇಕಾಗಿದೆ ಆ ನಿಟ್ಟಿನಲ್ಲಿ ಈ ಸನ್ಮಾನ ನಡೆಯಲಿದೆ ಎಂದರು.

ಜಿಲ್ಲೆಯಲ್ಲಿ ರಾಜಕೀಯ ಹಿಡಿತವನ್ನು ದಿವಂಗತ ಸಿ.ಬೈರೇಗೌಡರ ನಂತರದ ಸ್ಥಾನವನ್ನು ಕೆ.ಶ್ರೀನಿವಾಸಗೌಡರು ಮುನ್ನಡೆಸಿಕೊಂಡು ಹೋಗಿದ್ದಾರೆ. ಇವರ ನೇತೃತ್ವದಲ್ಲಿ ಜಿಪಂ ತಾಪಂ ಸೇರಿದಂತೆ ವಿವಿಧ ಸಂಸ್ಥೆಗಳನ್ನು ಸುಮಾರು 40 ವರ್ಷಗಳ ಕಾಲ ಮುನ್ನಡೆಸಿಕೊಂಡು ಹೋಗಿದ್ದಾರೆ. ಮುಂದೆಯೂ ಸಹ ಇವರ ಅವಶ್ಯಕತೆ ಪಕ್ಷಕ್ಕೆ ಹಾಗೂ ಜಿಲ್ಲೆಯ ಜನತೆಗೆ ಬೇಕಾಗಿದೆ ಸಚಿವ ಕೆ.ಎಚ್ ಮುನಿಯಪ್ಪ ಹಾಗೂ ಕೆ.ಶ್ರೀನಿವಾಸಗೌಡರ ಮುಖಂಡತ್ವದಲ್ಲಿ ಇತರೆ ನಾಯಕರು ಮುಖಂಡರನ್ನು ಒಗ್ಗೂಡಿಸಿಕೊಂಡು ಪಕ್ಷವನ್ನು ಸಂಘಟಿಸಿ ಜಿಲ್ಲೆಯಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವನ್ನು ಎಲ್ಲಾ ಚುನಾವಣೆಯಲ್ಲಿ ಗೆಲ್ಲಿಸಿಕೊಂಡು ಬರಬೇಕಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹಿರಿಯ ಮುಖಂಡ ಶ್ರೀಕೃಷ್ಣ ಮಾತನಾಡಿ, ಕೋಲಾರ ವಿಧಾನಸಭಾ ಕ್ಷೇತ್ರದ ರಾಜಕೀಯದ ವ್ಯಾಪಾರಕ್ಕೆ ಶ್ರೀನಿವಾಸಗೌಡರು ತಮ್ಮ ಸ್ಥಾನವನ್ನು ಕಳೆದುಕೊಳ್ಳಬೇಕಾಯಿತು‌. ಇವರ ಕ್ಷೇತ್ರದ ತ್ಯಾಗಕ್ಕೆ ಮುಂದಿನ ದಿನಗಳಲ್ಲಿ ಇವರಿಗೆ ಸೂಕ್ತ ಸ್ಥಾನಮಾನಕ್ಕಾಗಿ ಒತ್ತಾಯಿಸಬೇಕಾಗಿದೆ. ಇವರ ಸೇವೆಯನ್ನು ಗುರುತಿಸುವ ನಿಟ್ಟಿನಲ್ಲಿ ಸರ್ಕಾರಕ್ಕೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಮನವರಿಕೆ ಮಾಡಿಕೊಡುವ ಉದ್ದೇಶದಿಂದ ಈ ಸನ್ಮಾನ ನಡೆಯಲಿದ್ದು, ಜಿಲ್ಲೆಯ ಹಿರಿಯ, ಕಿರಿಯ ಸಹಕಾರಿ ವ್ಯವಸ್ಥೆಯಲ್ಲಿ ಕೆಲಸ ಮಾಡುವವರು ಭಾಗವಹಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಹಿರಿಯ ಸಹಕಾರಿ ಹೊಳಲಿ ಪ್ರಕಾಶ್ ಮಾತನಾಡಿ, ಮಾಜಿ ಸಚಿವ ಕೆ.ಶ್ರೀನಿವಾಸಗೌಡರು ಕೋಲಾರ ಜಿಲ್ಲೆಯ ಸಹಕಾರಿ ವ್ಯವಸ್ಥೆಯನ್ನು ಬಲಪಡಿಸಲು ಸಾಕಷ್ಟು ಶ್ರಮವನ್ನು ವಹಿಸಿದ್ದಾರೆ. ತಮ್ಮ ಇಫ್ಕೋ ಕ್ರಿಭ್ಕೋ ಸಂಸ್ಥೆಗಳ ವತಿಯಿಂದ ರೈತರಿಗೆ ಹಾಗೂ ವಿಧ್ಯಾರ್ಥಿಗಳಿಗೆ ಆರ್ಥಿಕವಾಗಿ ಸಹಾಯ ಮಾಡಿದ್ದು, ಜನಪರವಾದ ಕಾಳಜಿಯುಳ್ಳ ನಾಯಕರಾಗಿದ್ದಾರೆ ಇವರು ಸುಮಾರು 2000 ಮಂದಿಗೆ ಜಿಲ್ಲೆಯ ಜನಕ್ಕೆ ಉದ್ಯೋಗ ಕೊಡಿಸಿದ್ದಾರೆ. ಇವರನ್ನು ಕೋಲಾರ ತಾಲೂಕಿನ ಟಿಎಪಿಸಿಎಂಎಸ್, ಪಿಎಲ್ಡಿ ಬ್ಯಾಂಕ್, ಸೊಸೈಟಿಗಳ ಮೂಲಕ ಈ ಸನ್ಮಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಕೆಂಬೋಡಿ ನಾರಾಯಣಗೌಡ, ಚಿಕ್ಕಹಸಾಳ ಮಂಜುನಾಥ್, ತೋರದೇವಂಡಹಳ್ಳಿ ನಾಗರಾಜಗೌಡ, ಶ್ರೀರಾಮರೆಡ್ಡಿ, ಸಂತೋಷ್, ಕಠಾರಿಪಾಳ್ಯ ಮಂಜುನಾಥ್ ಮುಂತಾದವರು ಇದ್ದರು.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

2 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

4 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

6 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

6 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

8 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

13 hours ago