ಸೋದರ ಮಾವನಿಂದಲೆ ಅಳಿಯನ ಕೊಲೆಯಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಬೆಂಗಳೂರು ಉತ್ತರ ತಾಲೂಕಿನ ಕಾರ್ಲಾಪುರದಲ್ಲಿ ನಿನ್ನೆ ಸಂಜೆ ನಡೆದಿದೆ.
ಗಂಗರಾಜ್(30) ಕೊಲೆಯಾದ ದುರ್ದೈವಿ. ಶ್ರೀನಿವಾಸ್ (35) ಕೊಲೆ ಮಾಡಿರುವ ಆರೋಪಿ.
ಮೃತ ದುರ್ದೈವಿ ಗಂಗರಾಜ್ ತಾಯಿಯ ತಮ್ಮನಾದ ಶ್ರೀನಿವಾಸ್ ಎಂಬಾತ ಗಂಗರಾಜ್ ತಲೆಗೆ ರಾಡ್ ನಿಂದ ಹೊಡೆದು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಬಾವ-ಬಾಮೈದ ನಡುವೆ ಹುಡುಗಿಯ ವಿಚಾರಕ್ಕೆ ಒಂದು ವರ್ಷದಿಂದ ಜಿದ್ದು ಇತ್ತು. ಇವರಿಬ್ಬರು ಈ ಹಿಂದೆ ಕೂಡ ಗಲಾಟೆ ಮಾಡಿಕೊಂಡಿದ್ದರು. ತಾಯಿಯ ತಮ್ಮ ಆಗಿದ್ದ ಕಾರಣ ಪೊಲೀಸ್ ದೂರು ನೀಡಿರಲಿಲ್ಲ. ಅದೇರೀತಿ ಆರ್ಥಿಕವಾಗಿ ಬೆಳೆದರು ಎಂದು ಯಾವಾಗಲೂ ಗಲಾಟೆ ನಡೆಯುತ್ತಿತ್ತು. ನಿನ್ನೆ ಸಂಜೆ ನಾಲ್ಕೈದು ಸ್ನೇಹಿತರ ಜೊತೆ ಸೇರಿ ಊರಿನ ಮಧ್ಯೆ ಇರುವ ಸರ್ಕಲ್ ನಲ್ಲಿ ಕೊಲೆ ಮಾಡಲಾಗಿದೆ ಎಂದು ಮೃತ ದುರ್ದೈವಿ ತಂದೆ ರಾಜಣ್ಣ ತಿಳಿಸಿದ್ದಾರೆ.
ಮೃತನನ್ನು ಯಲಹಂಕ ಸರಕಾರಿ ಶವಾಗಾರಕ್ಕೆ ರವಾನೆ ಮಾಡಲಾಗಿದೆ.
ರಾಜಾನುಗುಂಟೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಲೆ ಮರಿಸಿಕೊಂಡಿರುವ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…