ಹುಡುಗಿ ವಿಚಾರಕ್ಕೆ ಬಾವ-ಬಾಮೈದ ನಡುವೆ ಜಗಳ?: ಸೋದರ ಮಾವನಿಂದಲೆ ಅಳಿಯನ ಕೊಲೆ

ಸೋದರ ಮಾವನಿಂದಲೆ ಅಳಿಯನ ಕೊಲೆಯಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಬೆಂಗಳೂರು ಉತ್ತರ ತಾಲೂಕಿನ ಕಾರ್ಲಾಪುರದಲ್ಲಿ ನಿನ್ನೆ ಸಂಜೆ ನಡೆದಿದೆ.

ಗಂಗರಾಜ್(30) ಕೊಲೆಯಾದ ದುರ್ದೈವಿ. ಶ್ರೀನಿವಾಸ್ (35) ಕೊಲೆ‌ ಮಾಡಿರುವ ಆರೋಪಿ.

ಮೃತ ದುರ್ದೈವಿ ಗಂಗರಾಜ್ ತಾಯಿಯ ತಮ್ಮನಾದ ಶ್ರೀನಿವಾಸ್ ಎಂಬಾತ ಗಂಗರಾಜ್ ತಲೆಗೆ ರಾಡ್ ನಿಂದ ಹೊಡೆದು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಬಾವ-ಬಾಮೈದ ನಡುವೆ ಹುಡುಗಿಯ ವಿಚಾರಕ್ಕೆ ಒಂದು ವರ್ಷದಿಂದ ಜಿದ್ದು ಇತ್ತು. ಇವರಿಬ್ಬರು ಈ ಹಿಂದೆ ಕೂಡ ಗಲಾಟೆ ಮಾಡಿಕೊಂಡಿದ್ದರು. ತಾಯಿಯ ತಮ್ಮ ಆಗಿದ್ದ ಕಾರಣ ಪೊಲೀಸ್ ದೂರು ನೀಡಿರಲಿಲ್ಲ. ಅದೇರೀತಿ ಆರ್ಥಿಕವಾಗಿ ಬೆಳೆದರು ಎಂದು ಯಾವಾಗಲೂ ಗಲಾಟೆ ನಡೆಯುತ್ತಿತ್ತು. ನಿನ್ನೆ ಸಂಜೆ ನಾಲ್ಕೈದು ಸ್ನೇಹಿತರ ಜೊತೆ ಸೇರಿ ಊರಿನ ಮಧ್ಯೆ ಇರುವ ಸರ್ಕಲ್ ನಲ್ಲಿ ಕೊಲೆ ಮಾಡಲಾಗಿದೆ ಎಂದು ಮೃತ ದುರ್ದೈವಿ ತಂದೆ ರಾಜಣ್ಣ ತಿಳಿಸಿದ್ದಾರೆ.

ಮೃತನನ್ನು ಯಲಹಂಕ ಸರಕಾರಿ ಶವಾಗಾರಕ್ಕೆ ರವಾನೆ‌ ಮಾಡಲಾಗಿದೆ.

ರಾಜಾನುಗುಂಟೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಲೆ ಮರಿಸಿಕೊಂಡಿರುವ ಆರೋಪಿಗಾಗಿ‌ ಪೊಲೀಸರು ಬಲೆ ಬೀಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

Ramesh Babu

Journalist

Recent Posts

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

11 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

17 hours ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

21 hours ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

22 hours ago

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

1 day ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

2 days ago