ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ಅವರ ನೇತೃತ್ವದ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ, ಕಾವ್ಯಾರಾಣಿ ಅವರು ತಮ್ಮ ಗುಮಾಸ್ತ ಶಿವಕುಮಾರ್ ಮೂಲಕ ₹5.50 ಲಕ್ಷ ಹಣ ಸ್ವೀಕರಿಸುತ್ತಿದ್ದ ವೇಳೆ ಟ್ರ್ಯಾಪ್ ಮಾಡಲಾಗಿದೆ.
ಮಾಹಿತಿಯ ಪ್ರಕಾರ, ಹೆಚ್.ಡಿ. ಕೋಟೆ ತಾಲೂಕಿನ 4.5 ಎಕರೆ ಜಮೀನಿಗೆ ಸಂಬಂಧಿಸಿದ ಕಂದಾಯ ಮೇಲ್ಮನವಿಯನ್ನು ಇತ್ಯರ್ಥಪಡಿಸಲು ಒಟ್ಟು ₹10.50 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರೆಂದು ಆರೋಪಿಸಲಾಗಿದೆ. ಈ ಪೈಕಿ ಈಗಾಗಲೇ ₹5 ಲಕ್ಷ ಮುಂಗಡವಾಗಿ ಪಡೆದಿದ್ದು, ಉಳಿದ ₹5.50 ಲಕ್ಷವನ್ನು ಗುಮಾಸ್ತ ಶಿವಕುಮಾರ್ ಮೂಲಕ ಸ್ವೀಕರಿಸುವಂತೆ ಸೂಚಿಸಿದ್ದರೆಂದು ತಿಳಿದುಬಂದಿದೆ.
ಹಣ ಸ್ವೀಕರಿಸಲು ಗುಮಾಸ್ತನನ್ನು ಮನೆಗೆ ಕರೆಸಿಕೊಂಡಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಹಣವನ್ನು ವಶಪಡಿಸಿಕೊಂಡು ಗುಮಾಸ್ತ ಶಿವಕುಮಾರ್ ಅವರನ್ನು ವಶಕ್ಕೆ ಪಡೆದಿದ್ದಾರೆ.
ಘಟನೆಯ ಬಳಿಕ ಹುಣಸೂರು ಎಸಿ ಕಚೇರಿ ಹಾಗೂ ನಿವಾಸದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳು ಮತ್ತು ಕಡತಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಪ್ರಸ್ತುತ ಎಸಿ ಕಾವ್ಯಾರಾಣಿ ಹಾಗೂ ಗುಮಾಸ್ತ ಶಿವಕುಮಾರ್ ಲೋಕಾಯುಕ್ತ ವಶದಲ್ಲಿದ್ದು, ಪ್ರಕರಣ ಸಂಬಂಧ ವಿಚಾರಣೆ ಮುಂದುವರಿದಿದೆ.
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…
ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…
ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…