Categories: ರಾಜ್ಯ

ಹುತಾತ್ಮರಾದ ಯೋಧರಿಗೆ ಪುಷ್ಪ ನಮನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೀಡಾಗಿ ಹುತಾತ್ಮರಾದ ಯೋಧರುಗಳಾದ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಗಳಿಗೆ ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುಷ್ಪ ನಮನ ಸಲ್ಲಿಸಿ ಅಂತಿಮ ಗೌರವ ಸಲ್ಲಿಸಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿಗಳ ಮಾತು:

ಯೋಧರ ಬದುಕು, ಜೀವನ, ವೃತ್ತಿ ಅತ್ಯಂತ ಉನ್ನತವಾದದ್ದು. ನಮ್ಮ ರಾಜ್ಯದ ಯೋಧರು ಅಪಘಾತದಲ್ಲಿ ಹುತಾತ್ಮರಾಗಿರುವುದು ಅತ್ಯಂತ ನೋವಿನ ಸಂಗತಿ. ನಾಲ್ವರು ಯೋಧರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬದವರ ನೋವಿನಲ್ಲಿ ನಾನು ಭಾಗಿಯಾಗುತ್ತೇನೆ ಎಂದರು.

ಸರಕಾರದಿಂದ ನಿಯಮಾನುಸಾರ ಹುತಾತ್ಮರ ಕುಟುಂಬಕ್ಕೆ ಸಲ್ಲಬೇಕಾದ ಸಕಲ ನೆರವನ್ನೂ ಒದಗಿಸಲಾಗುವುದು ಎಂದು ಹೇಳಿದರು.

Ramesh Babu

Journalist

Recent Posts

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

1 hour ago

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ…?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…

4 hours ago

ಮರ್ಯಾದಾ ಹತ್ಯೆ……..

  ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…

13 hours ago

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

1 day ago

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

1 day ago