ಹುತಾತ್ಮ ಪಿಎಸ್ಐ ಜಗದೀಶ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಜಗದೀಶ್ ರವರ 43ನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಲಾಯಿತು.
ನಗರದ ಪಿಎಸ್ಐ ಜಗದೀಶ್ ವೃತ್ತದಲ್ಲಿ ಜಗದೀಶ್ ಅವರ ಭಾವಚಿತ್ರಕ್ಕೆ ಪುಷ್ಪಮಾಲೆ ಹಾಕಿ, ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಮಾಡುವ ಮೂಲಕ ಸರಳವಾಗಿ ಹುಟ್ಟುಹಬ್ಬವನ್ನು ಆಚರಿಸಲಾಯಿತು.
ನಂತರ ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಪೊಲೀಸ್ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ನಗರ ಠಾಣೆ ಇನ್ಸ್ಪೆಕ್ಟರ್ ಅಮರೇಶ್ ಗೌಡ, ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಸಾಧಿಕ್ ಪಾಷ, ನಗರಸಭೆ ಪೌರಾಯುಕ್ತ ಕಾರ್ತಿಕೇಶ್ವರ್, ನಗರ ಠಾಣೆ ಎಸ್.ಐ ಕೃಷ್ಣಪ್ಪ, ಜಗದೀಶ್ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ರಾಜಘಟ್ಟ ರವಿ, ಪ್ರಧಾನ ಕಾರ್ಯದರ್ಶಿ ರೈಲ್ವೆ ಸ್ಟೇಷನ್ ಮಲ್ಲೇಶ್, ಉಪಾಧ್ಯಕ್ಷ ಪರಮೇಶ್, ಹುತಾತ್ಮ ಪಿಎಸ್ಐ ಜಗದೀಶ್ ಅವರ ಕುಟುಂಬಸ್ಥರು ಸೇರಿದಂತೆ ಇತರರು ಉಪಸ್ಥಿತರಿದ್ದರು.