ಕರ್ತವ್ಯದ ವೇಳೆ ದುಷ್ಟರಿಂದ ಹುತಾತ್ಮರಾದ ಪಿ.ಎಸ್.ಐ ಜಗದೀಶ್ ರವರ 9ನೇ ವರ್ಷದ ಪುಣ್ಯ ಸ್ಮರಣೆ ದಿನಾಚರಣೆಯನ್ನು ನಗರದ ಹೊರವಲಯದ ಡಿ.ಕ್ರಾಸ್ ಬಳಿಯ ಪಿ ಎಸ್ ಐ ಜಗದೀಶ ವೃತ್ತದಲ್ಲಿ ಆಯೋಜನೆ ಮಾಡಲಾಗಿತ್ತು.
ಕಾರ್ಯಕ್ರಮದಲ್ಲಿ ಕರವೇ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜ ಘಟ್ಟ ರವಿ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ಬೆಂಗಳೂರು ಹಾಗು ಬೇರೆ ರಾಜ್ಯಗಳಿಗೆ ಹೋಗಿ ವಿದ್ಯಾಭ್ಯಾಸ ಮಾಡಲು ಕಷ್ಟವಾಗಿದೆ. ಆದ್ದರಿಂದ, ಉನ್ನತ ಅಧಿಕಾರಿಗಳಿಂದ ಸಹಾಯ ಪಡೆದು ಹುತಾತ್ಮ ಪಿ ಎಸ್ ಐ ಜಗದೀಶ್ ರವರ ಹೆಸರಿನಲ್ಲಿ ಐ ಎ ಎಸ್, ಐ ಪಿ ಎಸ್ ಹಾಗು ಕೆ ಪಿ ಎಸ್ ಸಿ ಪರೀಕ್ಷೆಗಳ ತರಬೇತಿ ತೆರೆದು ನುರಿತ ಶಿಕ್ಷಕರಿಂದ ಶಿಕ್ಷಣ ನೀಡಲಾಗುವುದು ಎಂದರು..
ನಂತರ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಸಾಧಿಕ್ ಪಾಷ ಮಾತನಾಡಿ, ಅಹಿತಕರ ಘಟನೆಗಳು ನಡೆದ ಸಂದರ್ಭದಲ್ಲಿ ನಾವು ಸಮಾಜದಲ್ಲಿ ತಪ್ಪು ಮಾಡಿದವರ ಮೇಲೆ ಕಠಿಣವಾಗಿ ನಡೆದುಕೊಳ್ಳಬೇಕಾಗುತ್ತದೆ. ಆದರೆ, ಅದು ದುರುದ್ದೇಶದಿಂದ ಅಲ್ಲ, ದೊಡ್ಡಬಳ್ಳಾಪುರದ ಒಬ್ಬ ಅಧಿಕಾರಿಗೆ ಈ ತರಹದ ಗೌರವ ನೀಡಿತ್ತಿರುವುದು ಹೆಮ್ಮೆಯ ವಿಚಾರ ಎಂದರು.
ಈ ಸಂದರ್ಭದಲ್ಲಿ ತಾಲ್ಲೂಕು ದಂಡಾಧಿಕಾರಿ ವಿದ್ಯಾ ವಿಭಾ ರಾಥೋಡ್, ನಗರಸಭಾ ಉಪಾಧ್ಯಕ್ಷ ಮಲ್ಲೇಶ್ ಹಾಗು ದೊಡ್ಡಬಳ್ಳಾಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಡಿ ಚಂದ್ರು ಉಪ್ಪಾರ್, ಹುತಾತ್ಮ ಪಿ ಎಸ್ ಐ ಜಗದೀಶರವರ ಮಡದಿ, ಮಕ್ಕಳು ಹಾಗು ಸಾರ್ವಜನಿಕರು ಹಾಜರಿದ್ದರು.
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…