ಹುತಾತ್ಮ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರಧನ ಮಂಜೂರು

ಜಮ್ಮು – ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದ ವೇಳೆ ಹುತಾತ್ಮರಾದ ನಾಡಿನ ಹೆಮ್ಮೆಯ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ರೂ. 50,00,000 ( ಐವತ್ತು ಲಕ್ಷ ) ಪರಿಹಾರಧನವನ್ನು ನಮ್ಮ ಸರ್ಕಾರದಿಂದ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.

ದೇಶ ರಕ್ಷಣೆಗಾಗಿ ಪ್ರಾಣ ಪಣಕ್ಕಿಟ್ಟು ಶ್ರಮಿಸುವ ಪ್ರತಿಯೊಬ್ಬ ಯೋಧನ ಬಗ್ಗೆ ನಮಗೆ ಅಪಾರ ಗೌರವವಿದೆ. ಹುತಾತ್ಮ ಯೋಧ ಪ್ರಾಂಜಲ್ ಅವರ ತ್ಯಾಗ, ಬಲಿದಾನಕ್ಕೆ ಬೆಲೆಕಟ್ಟಲಾಗದು, ಆದರೆ ದೇಶದ ಕೋಟ್ಯಂತರ ಜನರ ಪರವಾಗಿ ಈ ಹೊತ್ತಿನಲ್ಲಿ ಅವರ ಕುಟುಂಬದ ಜೊತೆ ನಿಲ್ಲಬೇಕಾದುದ್ದು ನಮ್ಮ ಕರ್ತವ್ಯವೆಂದು ಭಾವಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಪರಿಹಾರಧನದ ಚೆಕ್ ಅನ್ನು ಸಿದ್ಧಪಡಿಸಲಾಗಿದ್ದು ನಾಳೆ ಮೃತ ಯೋಧನ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು. ಮತ್ತೊಮ್ಮೆ ಕ್ಯಾಪ್ಟನ್ ಪ್ರಾಂಜಲ್ ಅವರ ಅನನ್ಯ ದೇಶಸೇವೆ, ಸಮರ್ಪಣಾಭಾವವನ್ನು ಗೌರವದಿಂದ ಸ್ಮರಿಸುತ್ತಾ, ಗೌರವ ನಮನ ಸಲ್ಲಿಸುತ್ತೇನೆ ಎಂದಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

11 hours ago

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

12 hours ago

ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…

13 hours ago

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

18 hours ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

18 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

19 hours ago