ಹುಲಿಕುಂಟೆಯಲ್ಲಿ ಹುಲಿಬೇಟೆ ವೀರಗಲ್ಲು ಪತ್ತೆ: ತಾಲೂಕಿನಲ್ಲಿ ಈವರೆಗೆ ನಾಲ್ಕು ಹುಲಿಬೇಟೆ ವೀರಗಲ್ಲು ಲಭ್ಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಇತಿಹಾಸಕಾರ ಡಾ.ಎಸ್ ವೆಂಕಟೇಶ್ ಅವರು ಹೇಳುವಂತೆ ಹುಲಿಬೇಟೆಯ ವೀರಗಲ್ಲುಗಳು ದೊರೆತಿರುವುದು ತೀರಾ ಕಡಿಮೆ. ತೂಬಗೆರೆ ಹೋಬಳಿಯ ತಿಮ್ಮೋಜನಹಳ್ಳಿಯಲ್ಲಿ ಎರಡು ಮತ್ತು ಗೆದ್ದಲಪಾಳ್ಯದ ರಸ್ತೆಯಲ್ಲಿ ಒಂದು ಹುಲಿಬೇಟೆ ವೀರಗಲ್ಲುಗಳು ಲಭ್ಯವಾಗಿವೆ. ಈಗ ಇವುಗಳ ಜೊತೆಗೆ ದೊಡ್ಡಬೆಳವಂಗಲ ಹೋಬಳಿಯ ಹುಲಿಕುಂಟೆ ಗ್ರಾಮದಲ್ಲಿ ಹುಲಿಬೇಟೆಯ ವೀರಗಲ್ಲೊಂದು ಲಭ್ಯವಾಗಿದೆ. ಶಿಲ್ಪ ಲಕ್ಷಣದ ಆಧಾರದ ಮೇಲೆ ಇದನ್ನು 10ನೇ ಶತಮಾನಕ್ಕೆ ಸೇರಿಸಬಹುದು ಎನ್ನುತ್ತಾರೆ ವೆಂಕಟೇಶ್.

ವೀರನು ಆಲೀಢಭಂಗಿಯಲ್ಲಿ ನಿಂತಿದ್ದು, ತನ್ನ ಬಲಗೈಯಲ್ಲಿ ಖಡ್ಗವನ್ನು ಹಿಡಿದು ಮೇಲೆತ್ತಿರುವನು. ಎದುರುಗಡೆ ವೀರನತ್ತ ಮುನ್ನುಗ್ಗುತ್ತಿರುವ ಹುಲಿಯ ಚಿತ್ರಣವಿದೆ. ಈ ವೀರಗಲ್ಲಿನ ಮೇಲೆ ಯಾವುದೇ ರೀತಿಯ ಬರೆವಣಿಗೆ ಇಲ್ಲ. ಒಟ್ಟಾರೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಈವರೆಗೆ ನಾಲ್ಕು ಹುಲಿಬೇಟೆ ವೀರಗಲ್ಲುಗಳು ಲಭ್ಯವಾದಂತಾಯಿತು.

ಮಾನವ ಮತ್ತು ಹುಲಿಗಳ ಸಂಘರ್ಷ ಇಂದು-ನಿನ್ನೆಯಿಂದಲ್ಲ ಇತಿಹಾಸ ಪೂರ್ವಕಾಲದಿಂದಲೂ ಮಾನವ ನಿರಂತರವಾಗಿ ಹುಲಿಗಳ ಜೊತೆಗೆ ಸಂಘರ್ಷ ಮಾಡಿಕೊಂಡು ಬಂದಿದ್ದಾನೆ. ಹೀಗೆ ಹುಲಿ ಜೊತೆ ಕಾದಾಡುವಾಗ ಮೃತಪಟ್ಟ ವೀರನ ಸ್ಮರಣಾರ್ಥ ನೆಟ್ಟಕಲ್ಲುಗಳೆ ಹುಲಿಬೇಟೆ ವೀರಗಲ್ಲುಗಳು. ಇಂತಹ ಸ್ಮಾರಕ ಶಿಲ್ಪಗಳಿಂದ ಹುಲಿಗಳ ವಾಸಸ್ಥಾನದ ಕುರಿತಂತೆ ಅಧ್ಯಯನ ಮಾಡುವುದಕ್ಕೆ ಸಾದ್ಯವಿದೆ.

ಬ್ರಿಟಿಷ್ ಆಡಳಿತದ ಅವಧಿಯವರೆಗೆ ಈ ಭಾಗದಲ್ಲಿ ಹುಲಿಗಳಿದ್ದ ಮಾಹಿತಿಯಿದೆ. ಆದರೆ ರಾಜ್ಯದ ಅರಣ್ಯ ಇಲಾಖೆಗಳ ದಾಖಲೆಗಳ ಪ್ರಕಾರ 1950 ರ ನಂತರ ಇಲ್ಲಿ ಹುಲಿಗಳಿದ್ದ ಯಾವುದೇ ಮಾಹಿತಿಯಿಲ್ಲ.

ಇದೇ ಡಿಸೆಂಬರ್ 26 ಕ್ಕೆ ಹುಲಿಕುಂಟೆಯ ಬೇಟೆರಂಗನಾಥಸ್ವಾಮಿಯ ಜಾತ್ರೆಯಿದೆ. ಕಾಕತಾಳೀಯವೆಂಬಂತೆ ಈಗಲೇ ಹುಲಿಬೇಟೆ ವೀರಗಲ್ಲು ಪತ್ತೆಯಾಗಿರುವುದು ಗ್ರಾಮಸ್ಥರಲ್ಲಿ ಸಂತಸ ಮೂಡಿಸಿದೆ.

ಕೆಲವರು ಈ ಹುಲಿಬೇಟೆಯ ವೀರಗಲ್ಲನ್ನು ಗ್ರಾಮನಾಮದೊಂದಿಗೆ ತಳುಕು ಹಾಕುತ್ತಿರುವುದು ವಿಶೇಷ.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

4 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

8 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

8 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

13 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago