ರಾಜ್ಯದಲ್ಲಿ ಹುಲಿ ಉಗುರು ಪ್ರಕರಣ ಬೆಳಕಿಗೆ ಬಂದಿರುವ ಹಿನ್ನೆಲೆ, ಸಿಐಡಿ ಫಾರೆಸ್ಟ್ ಸೆಲ್ ಅಧಿಕಾರಿಗಳ ವಿಶೇಷ ಕಾರ್ಯಾಚರಣೆ ಚುರುಕುಗೊಂಡಿದೆ. ಅಕ್ರಮವಾಗಿ ಹುಲಿ ಉಗುರುಗಳನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ಸುಮಾರು 10 ಲಕ್ಷ ರೂ. ಮೌಲ್ಯದ 42 ಹುಲಿ ಉಗುರುಗಳನ್ನ ವಶಕ್ಕೆ ಪಡೆಯಲಾಗಿದೆ.
CID ಫಾರೆಸ್ಟ್ ಸೆಲ್ SP ಕಾಶಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಹುಲಿ ಉಗುರು ಸಾಗಾಟ ಮಾಡುತ್ತಿದ್ದ ಗೋಪಾಲ ನಾಯಕ್ ,ಅನುಮೇಶ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.
ಈ ಹುಲಿ ಉಗುರುಗಳನ್ನ ಕರ್ನಾಟಕದಲ್ಲಿ ಅಕ್ರಮವಾಗಿ ಪ್ರತಿ ಉಗುರು 10 ರಿಂದ 20 ಸಾವಿರಕ್ಕೆ ಆರೋಪಿಗಳು ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.