ಕೊಡಗಿನ ಪೊನ್ನಂಪೇಟೆ ತಾಲೂಕು ಬೇಗೂರು ಗ್ರಾಮದ ಕೊಟ್ಟಂಗಡ ರಾಜಸುಬ್ಬಯ್ಯನವರ ಗದ್ದೆಯಲ್ಲಿ ಕಟ್ಟಿ ಹಾಕಿದ ಹಸುವಿನ ಮೇಲೆ ಶುಕ್ರವಾರ ಸಂಜೆ ಹುಲಿ ದಾಳಿ ಮಾಡಿ ಹಸುವನ್ನು ಕೊಂದು ಹಾಕಿರುವ ಘಟನೆ ನಡೆದಿದೆ.
ಸುದ್ದಿ ತಿಳಿದ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶೀಘ್ರವಾಗಿ ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ