ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ ಗ್ರಾಮದಲ್ಲಿ ಗುರುವಾರ ಮುಂಜಾನೆ ನಡೆದಿದೆ.
ಪಚ್ಚಾರ್ಲಳ್ಳಿ ಗ್ರಾಮದ ನಾಗಮ್ಮ (45) ಮೃತ ದುರ್ದೈವಿ.
ಎಂದಿನಂತೆ ಇಂದು ಮುಂಜಾನೆ ತೋಟಕ್ಕೆ ಸುಗಂಧರಾಜ ಹೂ ಬಿಡಿಸಲು ತೆರಳಿದ್ದ ನಾಗಮ್ಮ ಅವರಿಗೆ ಹೂ ಬಿಡಿಸುವ ವೇಳೆ ಹಾವು ಕಚ್ಚಿದೆ ಎನ್ನಲಾಗಿದೆ.
ಹಾವು ಕಡಿತದಿಂದ ಅಸ್ವಸ್ಥಗೊಂಡ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಅಸುನೀಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ.
ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…