Categories: ಬೆಳಗಾವಿ

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ.

ಅರವಳ್ಳಿ ಗ್ರಾಮದ ಕರೆಪ್ಪ ಮಾಧರ(36), ಮಧುರಾ ಕರೆಪ್ಪ ಮಾದರ (30) ಸಾವು.

ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಪತ್ನಿ ಮಧುರಾ ಕ್ರಿಮಿನಾಶಕ ಮಾತ್ರೆ ಸೇವನೆ ಮಾಡಿದ್ದರು. ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮದ್ಯೆ ಮಹಿಳೆ ಮೃತರಾಗಿದ್ದಾರೆ.

ಪತ್ನಿ ಸಾವಿನ ಆಘಾತದಲ್ಲಿ ಬಸ್ ಚಕ್ರಕ್ಕೆ ಸಿಲುಕಿ ಪತಿಯೂ‌ ಕೂಡ ಬಲಿಯಾಗಿದ್ದಾರೆ. ತಂದೆ-ತಾಯಿ ಕಳೆದುಕೊಂಡ ಮೂವರು ಮಕ್ಕಳು ಅನಾಥರಾಗಿದ್ದಾರೆ.

ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ. ಕಳೆದ ಒಂಬತ್ತು ವರ್ಷಗಳ ಹಿಂದೆ ಮದುವೆಯಾಗಿದ್ದ ಜೋಡಿ. ದಂಪತಿಗೆ ಒಂದು ಹೆಣ್ಣು, ಇಬ್ಬರು ಮುದಾದ ಗಂಡು ಮಕ್ಕಳು ಇದ್ದಾರೆ.

ಕಳೆದ ಹಲವು ವರ್ಷಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮಧುರಾ. ಹೊಟ್ಟೆ ನೋವು ತಾಳಲಾರದೇ ಕ್ರಿಮಿನಾಶಕ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.‌ ಪತ್ನಿಯ ಸಾವಿನ ಸುದ್ದಿ ತಿಳಿದು ಆಘಾತಗೊಂಡಿದ್ದ ಪತಿ ಕರೆಪ್ಪ. ಈ ವೇಳೆ ಅವಸರದಲ್ಲಿ ಬರೋವಾಗ ಬಸ್ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ.

ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.

Ramesh Babu

Journalist

Recent Posts

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

3 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

4 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

14 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

14 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

17 hours ago

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

19 hours ago