ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ.
ಅರವಳ್ಳಿ ಗ್ರಾಮದ ಕರೆಪ್ಪ ಮಾಧರ(36), ಮಧುರಾ ಕರೆಪ್ಪ ಮಾದರ (30) ಸಾವು.
ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಪತ್ನಿ ಮಧುರಾ ಕ್ರಿಮಿನಾಶಕ ಮಾತ್ರೆ ಸೇವನೆ ಮಾಡಿದ್ದರು. ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮದ್ಯೆ ಮಹಿಳೆ ಮೃತರಾಗಿದ್ದಾರೆ.
ಪತ್ನಿ ಸಾವಿನ ಆಘಾತದಲ್ಲಿ ಬಸ್ ಚಕ್ರಕ್ಕೆ ಸಿಲುಕಿ ಪತಿಯೂ ಕೂಡ ಬಲಿಯಾಗಿದ್ದಾರೆ. ತಂದೆ-ತಾಯಿ ಕಳೆದುಕೊಂಡ ಮೂವರು ಮಕ್ಕಳು ಅನಾಥರಾಗಿದ್ದಾರೆ.
ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ. ಕಳೆದ ಒಂಬತ್ತು ವರ್ಷಗಳ ಹಿಂದೆ ಮದುವೆಯಾಗಿದ್ದ ಜೋಡಿ. ದಂಪತಿಗೆ ಒಂದು ಹೆಣ್ಣು, ಇಬ್ಬರು ಮುದಾದ ಗಂಡು ಮಕ್ಕಳು ಇದ್ದಾರೆ.
ಕಳೆದ ಹಲವು ವರ್ಷಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮಧುರಾ. ಹೊಟ್ಟೆ ನೋವು ತಾಳಲಾರದೇ ಕ್ರಿಮಿನಾಶಕ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ಸಾವಿನ ಸುದ್ದಿ ತಿಳಿದು ಆಘಾತಗೊಂಡಿದ್ದ ಪತಿ ಕರೆಪ್ಪ. ಈ ವೇಳೆ ಅವಸರದಲ್ಲಿ ಬರೋವಾಗ ಬಸ್ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ.
ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.
ದೇವನಹಳ್ಳಿ: ಬೀದಿ ನಾಯಿಗಳ ಗುಂಪೊಂದು ಕುರಿ, ಮೇಕೆಗಳ ಕೊಟ್ಟಿಗೆಗೆ ನುಗ್ಗಿ ದಾಳಿ ನಡೆಸಿದ ಪರಿಣಾಮ 10ಕ್ಕೂ ಹೆಚ್ಚು ಕುರಿ ಮತ್ತು…
ಸಮರ್ಪಕ ದಾಖಲೆಗಳಿಲ್ಲದೆ ವಿದೇಶಗಳಿಂದ ಬಂದು ಜಿಲ್ಲೆಯಲ್ಲಿ ನೆಲೆಸಿರುವವರ ಪತ್ತೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…
ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…
ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…
ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…