ಹೃದಯಾಘಾತದಿಂದ ಪತಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಮನನೊಂದ ಪತ್ನಿ ಅಪಾರ್ಟ್‌ಮೆಂಟ್‌ನ 7ನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸೋಮವಾರ ರಾತ್ರಿ ದೆಹಲಿಯ ವೈಶಾಲಿಯ ಸೆಕ್ಟರ್ -3 ರ ಅಹ್ಲ್ಕಾನ್ ಅಪಾರ್ಟ್‌ಮೆಂಟ್‌ನಲ್ಲಿರುವ ತನ್ನ 7 ನೇ ಮಹಡಿಯ ಬಾಲ್ಕನಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ದೆಹಲಿ ಮೃಗಾಲಯಕ್ಕೆ ಭೇಟಿ ನೀಡಿದಾಗ 25 ವರ್ಷದ ಪತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದ ನಂತರ ಅವರು ಈ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.
ಅಂಜಲಿ ಅಹಿಲುವಾಲಿ ಎಂದು ಗುರುತಿಸಲಾಗಿದ್ದು, ಅವರು ತಮ್ಮ ಪತಿ ಅಭಿಷೇಕ್, ಅವರ ಪೋಷಕರು ಮತ್ತು ಸಹೋದರಿಯೊಂದಿಗೆ ಫ್ಲ್ಯಾಟ್ ಸಂಖ್ಯೆ 703 ರಲ್ಲಿ ವಾಸಿಸುತ್ತಿದ್ದರು.
ಮೃಗಾಲಯದಿಂದ ಮೃತ ಅಭಿಷೇಕ್ ಪಾರ್ಥಿವ ಶರೀರ ರಾತ್ರಿ 9:30 ರ ಸುಮಾರಿಗೆ ಮನೆಗೆ ಬಂದಿತು, ಅದನ್ನು ನೋಡಿದ ಅಂಜಲಿ ತನ್ನ ಮಲಗುವ ಕೋಣೆಗೆ ಬೀಗ ಹಾಕಿಕೊಂಡಿದ್ದಳು. ಇದಾದ ಕೆಲವು ನಿಮಿಷಗಳ ನಂತರ ಬಾಲ್ಕನಿಯಿಂದ ಜಿಗಿದಳು. ಕೆಳಗೆ ಶಬ್ದ ಕೇಳಿದ ನಂತರ ಭದ್ರತಾ ಸಿಬ್ಬಂದಿ ಶವವನ್ನು ಗಮನಿಸಿ ಕುಟುಂಬ ಸದಸ್ಯರಿಗೆ ಮಾಹಿತಿ ರವಾನಿಸಿದ್ದಾರೆ.
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…