Categories: Crime

ಹೆಂಡತಿಯ ಕೊಂ*ದು ಮನೆ ಬಳಿಯೇ ಹೂತು ಕಣ್ಮರೆ ಅಂತ ದೂರು ಕೊಟ್ಟ ಪಾಪಿ ಪತಿ…!

ದೇವರಹಿಪ್ಪರಗಿ: ‍ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊ*ಲೆ ನಡೆದು ಬರೋಬ್ಬರಿ 24 ದಿನಗಳ ಬಳಿಕ ಆರೋಪಿಯ ಅಸಲಿ ಮುಖ ಅನಾವರಣಗೊಂಡಿದ್ದು, ಸಾಲದ ವಿಚಾರಕ್ಕೆ ಜಗಳ ನಡೆದ ಹಿನ್ನೆಲೆಯಲ್ಲಿ ಹೆಂಡತಿಯನ್ನು ದುಷ್ಟ ಕೊಂದಿದ್ದ ಎಂಬುದು ಪೊಲೀಸರ ತನಿಖೆ ವೇಳೆ ಬಯಲಾಗಿದೆ.

ದೇವರಹಿಪ್ಪರಗಿ ನಿವಾಸಿ ಸರೋಜಿನಿ ಪ್ರಭು ರತ್ನಾಕರ (44) ಕೊ*ಲೆಯಾದವಳು. ಈಕೆಯ ಪತಿ, ಪ್ರಭು ರತ್ನಾಕರ (46) ಕೊ*ಲೆ ಆರೋಪಿ. ಆರೋಪಿ ಪ್ರಭು ಗುತ್ತಿಗೆದಾರನಾಗಿ ಕೆಲಸ ಮಾಡುತ್ತಿದ್ದ. ವಿವಿಧೆಡೆ ಕೈ ಸಾಲ ಮಾಡಿಕೊಂಡು, ವಿಪರೀತ ಸಾಲ ಮಾಡಿದ್ದ. ಸಾಲಗಾರರಿಗೆ ತನ್ನ ಪತ್ನಿಯ ಹೆಸರಿನಲ್ಲಿ ಚೆಕ್ ನೀಡಿದ್ದ. ಈ ಸಂಬಂಧ ಸರೋಜಿನಿ ವಿರುದ್ಧ ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಚೆಕ್ ಬೌನ್ಸ್ ಪ್ರಕರಣ ಕೂಡ ದಾಖಲಾಗಿತ್ತು. ಹೀಗಾಗಿ, ಹಣ ಕಟ್ಟುವಂತೆ ಸರೋಜಿನಿ ಆತನನ್ನು ಒತ್ತಾಯಿಸಿದ್ದಳು. ಈ ವಿಚಾರವಾಗಿ ಪತಿ-ಪತ್ನಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು.

ಹೆಂಡತಿ ಸಾವಿನ ಬಗ್ಗೆ ಕಥೆ ಕಟ್ಟಿದ್ದ ಪಾಪಿ ಪತಿ

ಇದೇ ವಿಚಾರವಾಗಿ ಜನವರಿ 24ರ ರಾತ್ರಿ ಇಬ್ಬರ ನಡುವೆ ಜಗಳವಾಗಿತ್ತು. ಈ ವೇಳೆ, ಕೋಪದ ಭರದಲ್ಲಿ ಪ್ರಭು ರತ್ನಾಕರ, ಖಾರ ಕುಟ್ಟುವ ಹಾರೆಯಿಂದ ಪತ್ನಿಯ ತಲೆಗೆ ಹೊಡೆದಿದ್ದ. ಆಕೆ ರಕ್ತಸ್ರಾವದಿಂದ ಕೊನೆಯುಸಿರೆಳೆದಿದ್ದಳು. ಬಳಿಕ, ಮನೆಯ ಆವರಣದಲ್ಲೇ ಗುಂಡಿ ತೋಡಿ, ಶವವನ್ನು ಹೂತು ಹಾಕಿದ್ದ.

ಫೆ.2ರಂದು ದೇವರಹಿಪ್ಪರಗಿ ಪೊಲೀಸ್‌ ಠಾಣೆಗೆ ತೆರಳಿ, ಮನೆಗೆ ಸಾಮಾನು ತರಲು ಕಿರಾಣಿ ಅಂಗಡಿಗೆ ಹೋಗಿ ಬರುವೆ ಎಂದು ಹೊರಹೋದ ಪತ್ನಿ ತಿರುಗಿ ಬಂದಿಲ್ಲ. ಆಕೆಗಾಗಿ ಎಲ್ಲಾ ಕಡೆ ಹುಡುಕಾಡಿದ್ದೇನೆ. ಆದರೆ ಆಕೆಯ ಪತ್ತೆಯಾಗಿಲ್ಲ. ನೆಂಟರಿಷ್ಟರ ಮನೆಗಳಿಗೂ ಕರೆ ಮಾಡಿ ಆಕೆಯ ಬಗ್ಗೆ ವಿಚಾರಿಸಿದರೂ ಪತ್ನಿಯ ಸುಳಿವು ಸಿಕ್ಕಿಲ್ಲ ಎಂದು ದೂರು ನೀಡಿದ್ದ. ಪತ್ನಿಯ ತವರು ಮನೆಯವರು, ನೆಂಟರ ಜೊತೆ ಸೇರಿಕೊಂಡು ಆಕೆಯನ್ನು ಹುಡುಕುವ ನಾಟಕವಾಡಿದ್ದ.

ಪೊಲೀಸ್ ತನಿಖೆ ವೇಳೆ ಸತ್ಯ ಒಪ್ಪಿಕೊಂಡ ಗಂಡ

ಪ್ರಕರಣದ ವಿಚಾರಣೆ ನಡೆಸಿದ ಪೊಲೀಸರಿಗೆ ಈತನ ಮೇಲೆಯೇ ಸಂಶಯ ಬಂದಿತ್ತು. ತೀವ್ರ ವಿಚಾರಣೆ ಬಳಿಕ ಆತ ಸತ್ಯ ಒಪ್ಪಿಕೊಂಡಿದ್ದು, ತಾನೇ ಕೊ*ಲೆ ಮಾಡಿದ್ದಾಗಿ ತಿಳಿಸಿದ್ದಾನೆ. ಕೊ*ಲೆ ಆರೋಪದ ಮೇಲೆ ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಹೂತಿದ್ದ ಶವ ಹೊರ ತೆಗೆದು, ಮರಣೋತ್ತರ ಪರೀಕ್ಷೆ ಬಳಿಕ ತವರು ಮನೆಯವರಿಗೆ ಶವ ಹಸ್ತಾಂತರಿಸಿದ್ದಾರೆ.

Ramesh Babu

Journalist

Recent Posts

ಸೆ.28ರಿಂದ 30ರವರೆಗೆ ಬ್ಯಾಂಕ್ ನೌಕರರ ಮುಷ್ಕರ: ಭಾನುವಾರ ಬ್ಯಾಂಕ್‌ ಸೇವೆ ಲಭ್ಯ

ಬ್ಯಾಂಕ್ ನೌಕರರ ಒಕ್ಕೂಟವು ಸೆ.28ರಿಂದ 30ರವರೆಗೆ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ಹಾಗೂ ಗ್ರಾಹಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ…

6 hours ago

ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ- ಸಚಿವ ಎನ್. ಚಲುವರಾಯಸ್ವಾಮಿ ಭರವಸೆ*

ಜನರು ನೀಡಿದ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು‌ ಎಂಬ ಉದ್ದೇಶದಿಂದ ನನಗಿರುವ ಅಧಿಕಾರವನ್ನು ಬಳಸಿಕೊಂಡು ನಿಮ್ಮ ಸೇವೆ ಮಾಡುತ್ತಿದ್ದೆನೆ ಎಂದು ಮಂಡ್ಯ…

6 hours ago

ಹೈನುಗಾರಿಕೆಗೆ ಅಜೋಲಾ ಆಸರೆ: ಹಸಿರು ಮೇವಿನ ಕೊರತೆಗೆ ಪರ್ಯಾಯ: ಹಾಲು ನೀಡುವ ರಾಸುಗಳಿಗೆ ಪೌಷ್ಟಿಕ ಪೂರಕ ಆಹಾರ

ಬೆಂಗಳೂರು ಗ್ರಾಮಾಂತರ: ಮಳೆಯ ಕೊರತೆ ಹಾಗೂ ಹಸಿರು ಮೇವಿನ ಅಭಾವದಿಂದ ಜಾನುವಾರು ಸಾಕಾಣಿಕೆದಾರರು ಎದುರಿಸುತ್ತಿರುವ ಸಂಕಷ್ಟಕ್ಕೆ ಪರ್ಯಾಯವಾಗಿ, ಜಾನುವಾರುಗಳಿಗೆ ಸ್ಥಳೀಯವಾಗಿಯೇ…

16 hours ago

ಸೆ. 28ಕ್ಕೆ ಅವತಿ ಬೆಟ್ಟದಲ್ಲಿ “ವಿಶ್ವ ಪ್ರವಾಸೋದ್ಯಮ ದಿನಾಚರಣೆ-2026″

ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ದೇವನಹಳ್ಳಿ ತಾಲ್ಲೂಕಿನ ಅವತಿಯ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ…

1 day ago

ಮಾದಕ ವಸ್ತುಗಳ (ಡ್ರಗ್ಸ್) ಸಂಪೂರ್ಣ ನಿಯಂತ್ರಣಕ್ಕೆ ಎಲ್ಲಾ ಇಲಾಖೆಗಳು ಒಟ್ಟಾಗಿ ಕರ್ತವ್ಯ ನಿರ್ವಹಿಸಿ – ಜಿಲ್ಲಾಧಿಕಾರಿ ಡಾ.ಕೆ.ಎನ್.ಅನುರಾಧ

ಜಿಲ್ಲೆಯಲ್ಲಿ ಮಾದಕ ವಸ್ತುಗಳ (ಡ್ರಗ್ಸ್) ಹಾವಳಿಯನ್ನು ಸಂಪೂರ್ಣವಾಗಿ ತೊಡೆದುಹಾಕಲು ಎಲ್ಲಾ ಇಲಾಖೆಗಳು ಒಟ್ಟಾಗಿ ಕೈಜೋಡಿಸಿ ಕರ್ತವ್ಯ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ…

1 day ago

ನಿಷೇಧಿತ ಕ್ಯಾಟ್ ಫಿಶ್ ಸಾಕಾಣಿಕೆ ಸ್ಥಳಗಳಿಗೆ ಸಿಇಒ ದಿಢೀರ್ ಭೇಟಿ: ಸ್ಥಳದಲ್ಲೇ ಕ್ಯಾಟ್ ಫಿಶ್, ಹೊಂಡಗಳ ನಾಶ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಹೋಬಳಿಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿಷೇಧಿತ ಕ್ಯಾಟ್‌ ಫಿಶ್‌ ಸಾಕಣೆ ಮಾಡುತ್ತಿದ್ದ ಹೊಂಡಗಳ…

1 day ago