ಹೆಂಡತಿ ಅಗಲಿಕೆಯ ನೋವಿನಿಂದ ಮನನೊಂದು ಗಂಡ ನೇಣಿಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಪಟ್ಟಣದ ತೀಮಾಕನಹಳ್ಳಿಯ ಸ್ಮಶಾನದಲ್ಲಿ ನಡೆದಿದೆ.
ಬಾಗೇಪಲ್ಲಿ ಪಟ್ಟಣದ ಗುರುಮೂರ್ತಿ ನೇಣಿಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಶರಣಾಗುವ ಮುನ್ನ ಹೆಂಡತಿಯ ಸಮಾಧಿಗೆ ಪೂಜೆ ಮಾಡಿ ಸ್ಮಶಾನದಲ್ಲಿ ನೇಣಿಗೆ ಶರಣಾಗಿದ್ದಾನೆ.
ಮೃತ ಗುರುಮೂರ್ತಿ ಮೌನಿಕಾರನ್ನು ಮದುವೆಯಾಗಿದ್ದು, ದಂಪತಿ ಸುಖ ಜೀವನ ನಡೆಸುತ್ತಿದ್ದರು, ಈ ನಡುವೆ ಹೆಂಡತಿ ಅಕಾಲಿಕ ಮೃತ್ಯುಗೆ ತುತ್ತಾಗಿದ್ದಾಳೆ, ಪತ್ನಿ ಅಗಲಿಕೆಯ ನೋವಿನಿಂದ ನರಳುತ್ತಿದ್ದ ಆತ ಹೆಂಡತಿಯ ಸಮಾಧಿಗೆ ಪೂಜೆ ಮಾಡಿ, ಅಲ್ಲಿಯೇ ಇದ್ದ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ಬಾಗೇಪಲ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಳೆದ ವರ್ಷ ಡಿ. 20ರಂದು ಪತ್ನಿ ಮೌನಿಕಾ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಗುರುಮೂರ್ತಿ ಕೂಡಾ ಹೆಂಡತಿ ಸಾವಿನ ನೋವಲ್ಲೇ ಮಾನಸಿಕ ಕಿನ್ನತೆಯಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…