ಹೆಂಡತಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನ: ಪತ್ನಿ ಕೊಂದು ಪೊಲೀಸ್ ಠಾಣೆಗೆ ಬಂದು ಶರಣಾದ ಪಾಪಿ ಗಂಡ

ಹೆಂಡತಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ಗಂಡನೇ ಹೆಂಡತಿಯನ್ನು ಕೊಲೆ ಮಾಡಿ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.

ಮೃತ ಹೆಂಡತಿಯನ್ನು 32 ವರ್ಷದ ರಾಬೀಯ ಎಂದು ಗುರುತಿಸಲಾಗಿದೆ. ನಿಜಾಮುದ್ದೀನ್(38) ಎಂಬಾತ ತನ್ನ ಹೆಂಡತಿಯನ್ನು ಕೊಲೆ ಮಾಡಿ ಪೊಲೀಸ್​ ಠಾಣೆಗೆ ಬಂದು ಶರಣಾಗಿದ್ದಾನೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ತಮ್ಮರಸನಹಳ್ಳಿಯಲ್ಲಿ ಘಟನೆ ನಡೆದಿದೆ. ತಮ್ಮರಸನಹಳ್ಳಿ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ದಂಪತಿ.

ನಿಜಾಮುದ್ದೀನ್​ ಮತ್ತು ರಾಬೀಯ ಮದುವೆಯಾಗಿ ಜೀವನ ಸಾಗಿಸುತ್ತಿದ್ದರು. ಆದರೆ ನಿಜಾಮುದ್ದೀನ್​ಗೆ ಹೆಂಡತಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಅನುಮಾನ ಮೂಡಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಮೃತರನ್ನು ಮೂಲತಃ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪಟ್ಟಣದ ನಿವಾಸಿಗಳು ಎಂದು ಗುರುತಿಸಿದ್ದು. ಕೊಲೆ ಆರೋಪಿ ವಿರುದ್ದ ಸೂಲಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

2 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

15 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

17 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

20 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

23 hours ago

ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ನಾಪತ್ತೆ: ಅಧಿಕಾರಿಗಳಿಗಾಗಿ ಕಾಯುತ್ತಿರುವ ಸಾರ್ವಜನಿಕರು

ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…

24 hours ago