ಬೆಂಗಳೂರು: ಬೆಂಗಳೂರಿನಲ್ಲಿ ಅತುಲ್ ಸುಭಾಷ್ ಎಂಬ ಸಾಫ್ಟ್ವೇರ್ ಇಂಜಿನಿಯರ್ ವೈವಾಹಿಕ ಸಮಸ್ಯೆಗಳನ್ನು ಎದುರಿಸಲಾರದೇ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ರೀತಿಯ ಆತ್ಮಹತ್ಯೆಯ ಪ್ರಕರಣಗಳು ದಿನವೂ ನಡೆಯುತ್ತಲೇ ಇರುತ್ತವೆ. ಸದ್ಯ ಈ ಪ್ರಕರಣ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಇದಕ್ಕೆ ಕಾರಣ ಆತ್ಮಹತ್ಯೆಗೂ ಮುನ್ನ ಅತುಲ್ ಸುಭಾಷ್ ಬರೆದಿರುವ 24 ಪುಟಗಳ ಸೂಸೈಡ್ ನೋಟ್ ಮತ್ತು ಸಾಯುವ ಮೊದಲು ಮಾಡಿರುವ 1 ಗಂಟೆಯ ವಿಡಿಯೋ ರೆಕಾರ್ಡ್.
ಪತ್ನಿ ಮತ್ತು ಹೆಂಡತಿಯ ಮನೆಯವರ ಕಾಟ ತಡೆಯಲಾರದೆ ಅತುಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ಮೆನ್ಟೂ (#MenToo) ಹ್ಯಾಶ್ಟ್ಯಾಗ್ ಟ್ರೆಂಡಿಂಗ್ನಲ್ಲಿದೆ.
ಲ್ಯಾಪ್ಟ್ಯಾಪ್ನಲ್ಲಿ ಆತ್ಮಹತ್ಯೆಗೆ ಕಾರಣವಾದ ಅಂಶಗಳ ಬಗ್ಗೆ ಸಂಪೂರ್ಣ ವಿವರಗಳನ್ನು ತಿಳಿಸಿ ವಿಡಿಯೋ ರೆಕಾರ್ಡ್ ಮಾಡಿ ಅದನ್ನು ನ್ಯಾಯಾಧೀಶರಿಗೆ, ಪೊಲೀಸರಿಗೆ, ತಮ್ಮ ಕಂಪನಿಯ ಬಾಸ್ಗೆ ಕಳುಹಿಸಿದ್ದಾರೆ. ನಂತರ ಮೊದಲೇ ಪ್ಲಾನ್ ಮಾಡಿದಂತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅತುಲ್ ಸುಭಾಷ್ ಸಾಯುವ ಮುನ್ನ ಕಂಪ್ಯೂಟರ್, ಐಡಿಗಳನ್ನೆಲ್ಲ ಕಂಪನಿಗೆ ವಾಪಸ್ ಮಾಡಿದ್ದರು. ಬಾಕಿ ಪೇಮೆಂಟ್ಗಳನ್ನೆಲ್ಲ ಮಾಡಿದ್ದರು. ಪೊಲೀಸರಿಗೆ ಸಾಕ್ಷಿ ಹುಡುಕಲು ಕಷ್ಟವಾಗಬಾರದೆಂದು ಮೊಬೈಲ್ ಅನ್ ಲಾಕ್ ಮಾಡಿ ಇಟ್ಟಿದ್ದರು. ಕಾರು, ಬೈಕ್ನ ಕೀಗಳನ್ನು ಫ್ರಿಡ್ಜ್ ಮೇಲಿಟ್ಟಿದ್ದರು. ಸೂಸೈಡ್ ನೋಟ್ ಅನ್ನು ಕೆಲವರಿಗೆ ಇಮೇಲ್ ಮೂಲಕ ಕಳುಹಿಸಿದ್ದರು.
ಅತುಲ್ ಸಾವಿಗೆ ತಮ್ಮ ಹೆಂಡತಿ ಆಕ್ಸೆಂಚರ್ನಲ್ಲಿ ಉದ್ಯೋಗಿಯಾಗಿರುವ ನಿಖಿತಾ ಸಿಂಘಾನಿಯಾ ಹಾಗೂ ಆಕೆಯ ಮನೆಯವರೇ ಕಾರಣ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.
ಅತುಲ್ ಪತ್ನಿ ಉತ್ತರ ಪ್ರದೇಶದಲ್ಲಿ ಅತುಲ್ ವಿರುದ್ಧ ಹಲವಾರು ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ಅವರು ವೀಡಿಯೊದಲ್ಲಿ ಸುದೀರ್ಘವಾಗಿ ಚರ್ಚಿಸಿದ್ದಾರೆ. ತಾವು ರೆಕಾರ್ಡ್ ಮಾಡಿದ ವಿಡಿಯೋದಲ್ಲಿ ಮತ್ತು ಸೂಸೈಡ್ ನೋಟ್ನಲ್ಲಿ ಅವರು “ಪ್ರಸ್ತುತ ಭಾರತದಲ್ಲಿ ಪುರುಷರ ಮೇಲೆ ಕಾನೂನುಬದ್ಧ ನರಮೇಧ ನಡೆಯುತ್ತಿದೆ” ಎಂದು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಿಟೂ ರೀತಿಯಲ್ಲೇ ಮೆನ್ಟೂ ಎಂಬ ಹ್ಯಾಶ್ಟ್ಯಾಗ್ ಅಭಿಯಾನ ಶುರುವಾಗಿದೆ.
ಅತುಲ್ ಸಾವಿಗೆ ಕಾರಣರಾದ ನಿಖಿತಾ ಅವರನ್ನು ಕೂಡಲೇ ಬಂಧಿಸಬೇಕೆಂದು ನೆಟ್ಟಿಗರು ಒತ್ತಾಯಿಸಿದ್ದಾರೆ. ಮಹಿಳೆ ಆತ್ಮಹತ್ಯೆ ಮಾಡಿಕೊಂಡರೆ ಅದಕ್ಕೆ ಸಂಬಂಧಿಸಿದ ಪುರುಷರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತದೆ, ಬಂಧಿಸಲಾಗುತ್ತದೆ. ಅದೇ ರೀತಿ ಮಹಿಳೆಯನ್ನೂ ವಿಚಾರಗಣೆಗೆ ಒಳಪಡಿಸಬೇಕು ಎಂದು ನೆಟ್ಟಿಗರು ಒತ್ತಾಯಿಸಿದ್ದಾರೆ. ಕಾನೂನಿನಲ್ಲಿ ಪುರುಷರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಕೂಡ ಕೆಲವರು ಅಸಮಾಧಾನ ಹೊರಹಾಕಿದ್ದಾರೆ.
2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…
ಯುವಕರು ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ವೈಯಕ್ತಿಕ ಬೆಳವಣಿಗೆಗೆ ಮಾತ್ರವಲ್ಲದೆ, ಆರೋಗ್ಯಕರ ಮತ್ತು ಸಮೃದ್ಧ ಸಮಾಜದ ನಿರ್ಮಾಣಕ್ಕೂ ಅತ್ಯಗತ್ಯವಾಗಿದೆ ಎಂದು ಹೈಕೋರ್ಟ್…
ಕದನ ವಿರಾಮ...... ಯುದ್ಧ ವಿರಾಮ ಘೋಷಣೆಯಾಗಿದೆ. ಸಾವಿರಾರು ಜನರ ಹತ್ಯೆಗಳ ನಂತರ, ಅಪಾರ ಪ್ರಮಾಣದ ಭೂಪ್ರದೇಶ, ನೈಸರ್ಗಿಕ ಸಂಪನ್ಮೂಲಗಳು, ತೈಲ…
ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…
ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…
ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು…