ಹೆಗ್ಗಡಿಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷೆಯಾಗಿ ಮಂಜುಳಾ ಹಾಗೂ ಉಪಾಧ್ಯಕ್ಷರಾಗಿ ಕುಮಾರ್ ಅಯ್ಕೆ: ಗಣ್ಯರಿಂದ ಅಭಿನಂದನೆ

ಹೆಗ್ಗಡಿಹಳ್ಳಿ ಗ್ರಾಮ ಪಂಚಾಯಿತಿ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ‌ ಮಂಜುಳಾ ಹಾಗೂ ಕುಮಾರ್ ಕ್ರಮವಾಗಿ ಅಧ್ಯಕ್ಷೆ, ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.

ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಿಗದಿಯಾಗಿತ್ತು. ಬೆಳಗ್ಗೆ 10ರಿಂದ ಆರಂಭವಾದ ಚುನಾವಣೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಮಂಜುಳಾ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕುಮಾರ್ ಅವರು ನಾಮಪತ್ರ ಸಲ್ಲಿಸಿದ್ದರು.

ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಯಾರೊಬ್ಬರು ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿಯಾಗಿದ್ದ ಕಾವ್ಯ ಅವರು ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯನ್ನು ಘೋಷಿಸಿದರು.

ಈ‌ ಸಂದರ್ಭದಲ್ಲಿ ನೂತನವಾಗಿ ಆಯ್ಕೆಯಾದ ಅಧ್ಯಕ್ಷೆ ಮಂಜುಳಾ ಮಾತನಾಡಿ, ಅಧ್ಯಕ್ಷ ಗಾದಿಗೆ ನನ್ನನ್ನು ಆಯ್ಕೆ ಮಾಡಿದ ಎಲ್ಲಾ ಸದಸ್ಯರಿಗೆ ಧನ್ಯವಾದ ತಿಳಿಸುತ್ತೇನೆ. ಪಂಚಾಯಿತಿ‌ ವ್ಯಾಪ್ತಿಯ ಎಲ್ಲಾ ಸಮಸ್ಯೆಗಳನ್ನು ಖುದ್ದಾಗಿ ಪರಿಶೀಲಿಸಿ ತ್ವರಿತವಾಗಿ ಬಗೆಹರಿಸುವ ಕಾರ್ಯ ಮಾಡುತ್ತೇನೆ ಎಂದರು.

ಪಂಚಾಯಿತಿಯ ನೀತಿ‌ನಿಯಮಗಳಿಗೆ ಸಂಬಂಧಪಟ್ಟ ವಿಷಯಗಳನ್ನು ಯಾವುದೇ ಪಕ್ಷ ಬೇಧವಿಲ್ಲದೇ ಸರ್ವ ಸದಸ್ಯರ ವಿಶ್ವಾಸದೊಂದಿಗೆ ಚರ್ಚಿಸಿ ಅನುಷ್ಠಾನಗೊಳಿಸಲಾಗುವುದು ಎಂದರು.

ನಂತರ ಪ್ರಭಾರ ಮಾಜಿ‌ ಅಧ್ಯಕ್ಷ ಮುನಿಕೃಷ್ಣಪ್ಪ ಮಾತನಾಡಿ,  ಪಂಚಾಯಿತಿಯ ಆಡಳಿತವನ್ನು ಜನರಿಂದ ಜನರಿಗಾಗಿ ಜನರಿಗೋಸ್ಕರ ನಡೆಸಲು ಎಲ್ಲಾ ಸದಸ್ಯರು ಒಗ್ಗೂಡಿ ಇಂದು ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಇಲ್ಲಿ ಯಾವುದೇ ಪಕ್ಷ, ವ್ಯಕ್ತಿಗೆ ಮಾನ್ಯತೆ ನೀಡದೇ ನಿಸ್ಪಕ್ಷಪಾತವಾಗಿ ಸ್ಥಳೀಯ ಆಡಳಿತ ನಡೆಸುತ್ತೇವೆ. ತೆರವಾಗಿದ್ದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದೆ.‌ಕಳೆದ ತಿಂಗಳು ಪ್ರಭಾರಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಪಂಚಾಯಿತಿ ಆಡಳಿತ ನಡೆಸಿದ್ದೇನೆ. ಈಗ ನೂತನವಾಗಿ ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷರು ಅನುಭವಿಗಳು‌ ಪಂಚಾಯಿತಿಯ ಸರ್ವಾಂಗಿಣ ಅಭಿವೃದ್ಧಿಗೆ ಶ್ರಮಿಸುವ ವಿಶ್ವಾಸವಿದೆ ಎಂದರು.

ಈ‌ ಸಂದರ್ಭದಲ್ಲಿ ನೂತನ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರನ್ನು ಸಿಹಿ‌ ನೀಡಿ‌ ಹೂಮಾಲೆ ಹಾಕುವ ಮೂಲಕ ಅಭಿನಂದಿಸಲಾಯಿತು.

ಈ ವೇಳೆ ಕೆಪಿಸಿಸಿ ಸದಸ್ಯ ಎಸ್.ಆರ್ ಮುನಿರಾಜು, ಮಾಜಿ ಉಪಾಧ್ಯಕ್ಷ ರಾಮೇಗೌಡ, ನರಸಿಂಹಯ್ಯ, ಮೇಳೆಕೋಟೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಚಿದಾನಂದ, ಆಂಜಿನಪ್ಪ, ಊರಿನ ಮುಖಂಡರು ಶ್ರೀನಪ್ಪ, ನರಸಿಂಹಮೂರ್ತಿ, ನಂಜಪ್ಪ, ಅಂಗಡಿ ಮುನಿಕೃಷ್ಣಪ್ಪ ಹಾಗು ಸಿಬ್ಬಂದಿ ವರ್ಗದವರು ಹಾಜರಿದ್ದರು.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

14 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

1 day ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

2 days ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

2 days ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

2 days ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

2 days ago