ಹೆಗ್ಗಡಿಹಳ್ಳಿ ಗ್ರಾ. ಪಂ ಪ್ರಭಾರ ಅಧ್ಯಕ್ಷರಾಗಿ ಮುನಿಕೃಷ್ಣಪ್ಪ ಆಯ್ಕೆ

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿ ಹೆಗ್ಗಡಿಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರ ರಾಜಿನಾಮೆಯಿಂದ ತೆರವಾದ ಸ್ಥಾನಕ್ಕೆ ಪ್ರಭಾರಿ ಅಧ್ಯಕ್ಷರಾಗಿ ಮುನಿಕೃಷ್ಣಪ್ಪನವರು ಆಯ್ಕೆಯಾಗಿದ್ದಾರೆ.

ಪ್ರಭಾರ ಅಧ್ಯಕ್ಷರಾಗಿ ಆಯ್ಕೆಯಾದ ಮುನಿಕೃಷ್ಣಪ್ಪ ಮಾತನಾಡಿ, ಗ್ರಾಮ ಪಂಚಾಯತಿಯಲ್ಲಿ ಹಳ್ಳಿಗಳಲ್ಲಿ ಕುಡಿಯುವ ನೀರು, ವಿದ್ಯುತ್, ಚರಂಡಿ ಸಮಸ್ಯೆ ಬಗೆಹರಿಸುವುದು, ಬೀದಿ ದೀಪಗಳ ಅಳವಡಿಕೆ ಸೇರಿದಂತೆ ಇನ್ನಿತರೆ ಗ್ರಾಮಗಳ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದಲ್ಲದೇ, ಗ್ರಾಮಗಳ ಸ್ವಚ್ಛತೆ ಬಗ್ಗೆಯೂ ಹೆಚ್ಚಿನ ಗಮನ ಕೊಡುತ್ತೇನೆ ಎಂದು ಹೇಳಿದರು.

ಈ ವೇಳೆ ಹೆಗ್ಗಡಿಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರಾಮೇಗೌಡರು, ಆಂಜಿನಮ್ಮ, ಪಲ್ಲವಿ, ಪಂಚಾಯತಿ ಉಪಾಧ್ಯಕ್ಷ ಜಗನ್ನಾಥ್, ಸಿನಿಮಾ ನಿರ್ಮಾಪಕ ಲಕ್ಷ್ಮಿಪತಿ, ಕೆಪಿಸಿಸಿ ಪದವೀಧರ ವಿಭಾಗದ ಜಿಲ್ಲಾಧ್ಯಕ್ಷ ಡಾಕ್ಟರ್ ಸೌಮ್ಯ, ದೊಡ್ಡಬಳ್ಳಾಪುರ ನಗರಸಭೆ ಮಾಜಿ ಅಧ್ಯಕ್ಷ ಮಲ್ಲು, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಮಂಜಣ್ಣ ಹಾಗೂ ಪಂಚಾಯತಿ ಎಲ್ಲಾ ಸದಸ್ಯರು ಸಿಬ್ಬಂದಿ ವರ್ಗದವರು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!