ಹೆಚ್ಚುತ್ತಿರುವ ಬ್ಯಾಂಕ್, ಎಟಿಎಂ ರಾಬರಿ: ಗಾಬರಿಗೊಂಡ ನಾಗರಿಕರು: ಎಚ್ಚೆತ್ತ ಪೊಲೀಸ್ ಇಲಾಖೆ

ಇತ್ತೀಚಿನ ದಿನಗಳಲ್ಲಿ ಎಟಿಎಂ ಕಳ್ಳತನ, ಬ್ಯಾಂಕ್ ಫ್ರಾಡ್, ಸೈಬರ್ ಸೆಕ್ಯೂರಿಟಿ ಮತ್ತು ಬ್ಯಾಂಕ್ ಕಳ್ಳತನ ಸೇರಿದಂತೆ  ಇನ್ನಿತರ ಹಣದ ವಿಚಾರಕ್ಕೆ ಹೆಚ್ಚು ಹೆಚ್ಚು ಅಪರಾಧ ಚಟುವಟಿಕೆಗಳು ನಡೆಯುತ್ತಿವೆ. ಈ ಹಿನ್ನೆಲೆ ನಗರದ ನಾಗರಿಕರು ಈ ಕುರಿತು ಹೇಗೆ ಎಚ್ಚರದಿಂದ ಇರಬೇಕು ಎಂಬುದರ ಬಗ್ಗೆ ದೊಡ್ಡಬಳ್ಳಾಪುರ ಪೊಲೀಸ್ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಅವರ ನೇತೃತ್ವದಲ್ಲಿ ಅರಿವು ಮೂಡಿಸಲಾಯಿತು.

ಇಂದು ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ರೈಲ್ವೆ ನಿಲ್ದಾಣದ, ಸೌಂದರ್ಯ ಮಹಲ್ ವೃತ್ತದಲ್ಲಿ ಬ್ಯಾಂಕ್ ಮತ್ತು ಎಟಿಎಂಗಳಿಗೆ ಬರುವ ಹಿರಿಯ ನಾಗರೀಕರಿಗೆ ಮತ್ತು ಜನಸಾಮಾನ್ಯರಿಗೆ ಹೆಚ್ಚುತ್ತಿರುವ  ಅಪರಾಧಗಳನ್ನು ಕಡಿವಾಣ ಹಾಕಲು ಜಾಗ್ರತೆಯಿಂದ ಅನುಸರಿಸಬೇಕಾದ ಕ್ರಮಗಳನ್ನು ತಿಳಿಸಲಾಯಿತು.

ಅದೇರೀತಿ‌ ಇತ್ತೀಚೆಗೆ ಬೀದರ್‌ ನಲ್ಲಿ ಎಟಿಎಂ ತುಂಬುವ ವಾಹನವನ್ನು ಲೂಟಿ ಹಾಗೂ ಮಂಗಳೂರಿನಲ್ಲಿ ಬ್ಯಾಂಕಿನಲ್ಲಿದ್ದ ಹಣವನ್ನೇ ಡಕಾಯಿತಿ ಮಾಡಲಾಗಿತ್ತು. ಈ ಹಿನ್ನೆಲೆ ಬ್ಯಾಂಕ್ ನ ದರೋಡೆ ಪ್ರಕರಣಗಳು ಮರುಕಳಿಸದಂತೆ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ನಗರದಲ್ಲಿರುವ ಎಲ್ಲಾ ಬ್ಯಾಂಕುಗಳ ಮ್ಯಾನೇಜರ್ ಗಳು ಮತ್ತು ಎಟಿಎಂ ಗಳಿಗೆ ಹಣ ತುಂಬುವ ಸಿಎಂಎಸ್ ನವರೊಂದಿಗೆ ಚರ್ಚೆ ಮಾಡಲಾಯಿತು.

Ramesh Babu

Journalist

Recent Posts

ಅಭಿಮಾನಿಗಳ ಅತಿರೇಕ….ಯಾಕಪ್ಪಾ, ಏನಾಗಿದೆ ಸಮಸ್ಯೆ…?

ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…

1 hour ago

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

20 hours ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

23 hours ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

23 hours ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

2 days ago