ಹೆಚ್ಚುತ್ತಿರುವ ಸೈಬರ್ ಕ್ರೈಂ ಪ್ರಕರಣಗಳು:ಜಾಗೃತರಾಗಿರಲು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಕರೆ

 

ಸೈಬರ್ ಅಪರಾಧಗಳು ದಿನದಿಂದ ದಿನಕ್ಕೆ ತನ್ನ ಅಸ್ತ್ರವನ್ನು ಹೆಚ್ಚಿಸುತ್ತಲೇ ಇದೆ ಸಾರ್ವಜನಿಕರು ಸೈಬರ್ ವಂಚನೆಗೆ ಒಳಗಾಗದೆ ಜಾಗೃತರಾಗಿರಿ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದರು.

ಮಾಹಿತಿ ತಂತ್ರಜ್ಞಾನ ಇಲಾಖೆಯ ಜಿಲ್ಲಾ ರಾಷ್ಟ್ರೀಯ ಸೂಚನಾ ವಿಜ್ಞಾನ ಕೇಂದ್ರ ವತಿಯಿಂದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಸುರಕ್ಷಿತ ಅಂತರ್ಜಾಲ ದಿನ ಆಚರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿ

ಇಂದು ಇಂಟರ್ನೆಟ್‌ ನ ದಿನನಿತ್ಯದ ಬಳಕೆಯಲ್ಲಿ ಅಪರಿಚಿತರು ನಮ್ಮ ಅಪ್ಲಿಕೇಶನ್‌ಗಳನ್ನು ಹ್ಯಾಕ್ ಮಾಡಲು ಪ್ರಯತ್ನಿಸುತ್ತಾರೆ ಮತ್ತು ಬಳಕೆದಾರರ ಹೆಸರು, ಪಾಸ್‌ವರ್ಡ್, ಮೊಬೈಲ್ ಸಂಖ್ಯೆ, ಜನ್ಮ ದಿನಾಂಕ, ವಿಳಾಸ ಮುಂತಾದ ನಮ್ಮ ವೈಯಕ್ತಿಕ ಮಾಹಿತಿಯನ್ನು ಹ್ಯಾಕ್ ಮಾಡುತ್ತಾ ಬರುತ್ತಿದ್ದಾರೆ, ಹಣ ದುಪ್ಪಟ್ಟು ಮಾಡಿಕೊಳ್ಳಬೇಕೆಂಬ ಆಸೆಯಿಂದ ಅನಗತ್ಯ ಲಿಂಕ್ ಕ್ಲಿಕ್ ಮಾಡಿ ಮೋಸದ ಜಾಲಕ್ಕೆ ತುತ್ತಾಗುವುದು ನಿಲ್ಲಬೇಕು, ಸಾರ್ವಜನಿಕ ಸ್ಥಳದಲ್ಲಿ ಸಿಗುವ ಉಚಿತ ವೈ-ಫೈ ಬಳಕೆ ಮಾಡುವುದನ್ನು ತಪ್ಪಿಸಿ.

ವೈಯುಕ್ತಿಕ ಮಾಹಿತಿ ಮತ್ತು ಹಣಕ್ಕಾಗಿ ವಿನಂತಿಸುವ ಅಪರಿಚಿತ ಕರೆಗಳಿಗೆ, ಅಸುರಕ್ಷಿತ ವೆಬ್ಸೈಟ್ ಲಿಂಕ್ ಗಳಿಗೆ ಎಂದಿಗೂ ಪ್ರತಿಕ್ರಿಯಿಸಬೇಡಿ ಎಂದರು.

ಅಪರ ಜಿಲ್ಲಾಧಿಕಾರಿ ಅಮರೇಶ್ ಎಚ್ ಅವರು ಮಾತನಾಡಿ ಸೈಬರ್ ವಂಚಕರು ವಿವಿಧ ರೀತಿಯ ತಂತ್ರಗಳನ್ನು ಬಳಸಿ ಜನರ ನಿದ್ದೆಗೆಡಿಸುತ್ತಿದ್ದಾರೆ, ನಿಮ್ಮಿಂದಲೇ ಒಟಿಪಿ ಪಾಸ್ವರ್ಡ್ ಪಡೆದು ನಿಮಗೆ ವಂಚಿಸುತ್ತಿದ್ದಾರೆ ಹಾಗಾಗಿ ಒಟಿಪಿ, ಆಧಾರ್ ಸಂಖ್ಯೆ, ಪಾನ್ ಅಥವಾ ಬ್ಯಾಂಕ್ ರುಜುವಾತುಗಳನ್ನು ಅಪರಿಚಿತ ವ್ಯಕ್ತಿಗಳಿಗೆ ಅಥವಾ ಯಾರೊಂದಿಗೂ ಬಹಿರಂಗ ಪಡಿಸಬೇಡಿ. ನಿಮಗೆ ಸೈಬರ್ ವಂಚನೆಯಾದ ಸಂದರ್ಭದಲ್ಲಿ ಸೈಬರ್ ಕ್ರೈಂ ಪೊಲೀಸ್ ನಂಬರ್ 1930 ಕರೆಮಾಡಿ ದೂರು ದಾಖಲಿಸಬಹುದು ಎಂದರು.

ಈ ಸಂದರ್ಭದಲ್ಲಿ ಜಿ.ಪಂ ಯೋಜನಾ ನಿರ್ದೇಶಕ ವಿಠ್ಠಲ್ ಕಾವ್ಳೆ, ಜಿಲ್ಲಾ ಮಾಹಿತಿ ಅಧಿಕಾರಿ ಗೌರಿಶಂಕರ್, ಕೃಷಿ ಇಲಾಖೆ ಉಪನಿರ್ದೇಶಕಿ ಗಾಯಿತ್ರಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಪ್ರೇಮ, ಆಹಾರ ಇಲಾಖೆಯ ಉಪನಿರ್ದೇಶಕರಾದ ಶಂಕರ್ ಮೂರ್ತಿ, ಜಿಲ್ಲಾಧಿಕಾರಿಗಳ ಆಪ್ತ ಸಹಾಯಕ ರಾಜೀವ್ ಸುಲೋಚನಾ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

5 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

6 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

11 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

13 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

16 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

17 hours ago