ಹೆಚ್ಚುತ್ತಿರುವ 500 ರೂ. ನಕಲಿ ಕರೆನ್ಸಿ ಚಲಾವಣೆ: 500 ರೂ. ನಕಲಿ ನೋಟು ಪರೀಕ್ಷಿಸೋದು ಹೇಗೆ..?

ಭಾರತದಾದ್ಯಂತ 500 ರೂಪಾಯಿಯ ನಕಲಿ ಕರೆನ್ಸಿಗಳ ಚಲಾವಣೆ ಹೆಚ್ಚಾಗುತ್ತಿದ್ದು, ಇದೀಗ ಹೊಸ ನಕಲಿ 500 ಮುಖಬೆಲೆಯ ಕರೆನ್ಸಿ ನೋಟುಗಳ ಬಗ್ಗೆ ಗೃಹ ವ್ಯವಹಾರಗಳ ಸಚಿವಾಲಯ ಹಣಕಾಸು ಮತ್ತು ನಿಯಂತ್ರಕ ಸಂಸ್ಥೆಗಳಿಗೆ ಹೆಚ್ಚಿನ ಪ್ರಾಮುಖ್ಯತೆಯ ಎಚ್ಚರಿಕೆಯನ್ನು ನೀಡಿದೆ.

ನಕಲಿ ನೋಟುಗಳ ಬಗ್ಗೆ ಕಂದಾಯ ಗುಪ್ತಚರ ನಿರ್ದೇಶನಾಲಯ, ಹಣಕಾಸು ಗುಪ್ತಚರ ಘಟಕ, ಕೇಂದ್ರ ತನಿಖಾ ದಳ, ರಾಷ್ಟ್ರೀಯ ತನಿಖಾ ಸಂಸ್ಥೆ, ಭಾರತೀಯ ಭದ್ರತಾ ಪತ್ರಗಳು ಮತ್ತು ವಿನಿಮಯ ಮಂಡಳಿ ಮತ್ತು ಇತರ ಪ್ರಮುಖ ಹಣಕಾಸು ಮತ್ತು ನಿಯಂತ್ರಕ ಸಂಸ್ಥೆಗಳಿಗೆ ಈ ಎಚ್ಚರಿಕೆ ನೀಡಲಾಗಿದೆ.

500 ರೂ. ಮುಖಬೆಲೆಯ ನಕಲಿ ನೋಟುಗಳು, ಅಸಲಿ ನೋಟುಗಳಂತೆ ಕಾಣುವುದರಿಂದ ಸಾಮಾನ್ಯ ಜನರಿಗೆ ಅದನ್ನು ಗುರುತಿಸುವುದು ಬಹಳ ಕಷ್ಟ. ಅಂಗಡಿಯಲ್ಲಿ ಹೆಚ್ಚಿನ ವ್ಯಾಪಾರದ ವೇಳೆ ಮಾಲೀಕರು ನಕಲಿ ನೋಟನ್ನು ಗಮನಿಸುವುದು ಅಸಾದ್ಯವಾಗಿದೆ.

ಇನ್ನು ಈ ನಕಲಿ ನೋಟನ್ನು ಗುರುತಿಸಲು ಇರುವುದು ಒಂದೇ ಹಂತ ಅದು, ನಕಲಿ ನೋಟಿನಲ್ಲಿ RESERVE BANK OF INDIA ಎಂಬ ಪದಗುಚ್ಛದಲ್ಲಿ E ಅಕ್ಷರವನ್ನು A ಅಕ್ಷರದಿಂದ ತಪ್ಪಾಗಿ ಬರೆದಿರಲಾಗಿದೆ.

ಅಸಲಿ 500 ರೂ. ಮುಖಬೆಲೆ ನೋಟುಗಳು ಭದ್ರತಾ ಥ್ರೆಡ್ ಅನ್ನು ಹೊಂದಿದ್ದು, ನೋಟು ಓರೆಯಾಗಿಸಿದಾಗ ಅದು ಹಸಿರು ಬಣ್ಣದಿಂದ ನೀಲಿ ಬಣ್ಣಕ್ಕೆ ಬಣ್ಣವನ್ನು ಬದಲಾಯಿಸುತ್ತದೆ. ಆದರೆ ನಕಲಿ ನೋಟುಗಳು ಈ ಬಣ್ಣ ಬದಲಾವಣೆ ಕಂಡುಬರುವುದಿಲ್ಲ

ಮಹಾತ್ಮ ಗಾಂಧಿಯವರ ಭಾವಚಿತ್ರ ಮತ್ತು ಮುಖಬೆಲೆಯ 500 ಅನ್ನು ತೋರಿಸುವ ಎಲೆಕ್ಟ್ರೋಟೈಪ್ ವಾಟರ್‌ಮಾರ್ಕ್ ಅನ್ನು ನೋಡಲು ನೋಟನ್ನು ಬೆಳಕಿಗೆ ಎದುರಾಗಿ ಹಿಡಿದುಕೊಳ್ಳಿ. ನಕಲಿ ನೋಟುಗಳು ಮಸುಕಾದ ಅಥವಾ ತಪ್ಪಾಗಿ ಜೋಡಿಸಲಾದ ವಾಟರ್‌ಮಾರ್ಕ್‌ಗಳನ್ನು ಹೊಂದಿರುತ್ತದೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

5 hours ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

7 hours ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

8 hours ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

21 hours ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

1 day ago

ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…

1 day ago