ಲೋಕಾಯುಕ್ತ ಬಲೆಗೆ ಬಿದ್ದ ಬೆಂ.ಗ್ರಾ CEN ಠಾಣಾ ಹೆಡ್ ಕಾನ್ ಸ್ಟೇಬಲ್ ಲೋಕೇಶ್. ಚಾರ್ಜ್ ಶೀಟ್ ನಿಂದ ಕ್ಲಿನ್ ಚಿಟ್ ನೀಡಲು 50 ಸಾವಿರ ಲಂಚ ಬೇಡಿಕೆ ಇಟ್ಟು, ಮುಂಗಡವಾಗಿ 25ಸಾವಿರ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಲೋಕೇಶ್.
ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ರಮೇಶ್ ಎಂಬುವವರ ವಿರುದ್ದ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಚಾರ್ಜ್ ಶೀಟ್ ನಿಂದ ಹೆಸರು ತೆಗೆಯಲು ಹಾಗೂ ಜಾಮೀನು ಅರ್ಜಿಗೆ ಸಹಾಯ ಮಾಡಲು 50 ಸಾವಿರ ಲಂಚ ಬೇಡಿಕೆ ಇಟ್ಟಿದ್ದ ಲೋಕೇಶ್. ಈ ಸಂಬಂಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿತ್ತು. ಈ ಹಿನ್ನೆಲೆ 25 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ ಮಾಡಿ ಹೆಡ್ ಕಾನ್ ಸ್ಟೇಬಲ್ ರಮೇಶ್ ಅವರನ್ನ ಬಂಧಿಸಿದ ಲೋಕಾಯುಕ್ತ ಪೊಲೀಸರು.