ಹೆಣ್ಣಿನ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ನಿಷೇಧ ಕಾಯ್ದೆ (ಪೋಕ್ಸೊ), ಕೌಟುಂಬಿಕ ದೌರ್ಜನ್ಯ ನಿಷೇಧ ಕಾಯ್ದೆ, ಬಾಲ್ಯವಿವಾಹ ನಿಷೇಧ ಕಾಯ್ದೆ, ಮಹಿಳೆಯನ್ನು ಅಸಭ್ಯವಾಗಿ ಜಾಹೀರುಗೊಳಿಸುವುದು, ಬಾಲ ನ್ಯಾಯಮಂಡಳಿ ಕಾಯ್ದೆ ಸೇರಿ ಮಹಿಳೆ, ವೃದ್ಧ ಮಹಿಳೆ ಮತ್ತು ಮಕ್ಕಳಿಗೆ ಸಂಬಂಧಿಸಿದ ಎಲ್ಲ ಪ್ರಕರಣಗಳ ತನಿಖೆಯನ್ನು ನಡೆಸಲಾಗುತ್ತದೆ.. ಒಂದು ವೇಳೆ ಹೆಣ್ಣಿಗೆ ಪುರುಷನಿಂದ ತೊಂದರೆ ಅಥವಾ ಸಮಸ್ಯೆ ಉಂಟಾದರೆ ಯಾವುದೇ ಭಯವಿಲ್ಲದೇ ಕೂಡಲೇ ದೂರು ನೀಡಬೇಕು ಎಂದು ಮಹಿಳಾ ಪೊಲೀಸ್ ಠಾಣಾ ಸಬ್ ಇನ್ಸ್ ಪೆಕ್ಟರ್ ಪಂಕಜಾ ಅವರು ತಿಳಿಸಿದರು.
ಇಂದು ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ದೊಡ್ಡತಿಮ್ಮನಹಳ್ಳಿ ಗ್ರಾಮದಲ್ಲಿ ದೊಡ್ಡಬಳ್ಳಾಪುರ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವತಿಯಿಂದ ಆಯೋಜನೆ ಮಾಡಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ಕೌಟುಂಬಿಕ ಕಲಹಗಳಲ್ಲಿ ಮಹಿಳೆಯರ ಮೇಲಾಗುವ ಮಾನಸಿಕ ಕಿರುಕುಳ, ದೈಹಿಕ ಹಲ್ಲೆಯಂತಹ ಪ್ರಕರಣಗಳನ್ನು ಪತ್ತೆಹಚ್ಚಲು ಗಸ್ತು ವಾಹನ ತಾಲೂಕಿನಾದ್ಯಂತ ಗಸ್ತು ಹಾಕಲಾಗುತ್ತಿದೆ. ಹೀಗೆ ಗಸ್ತು ಹಾಕುವ ವಾಹನ ಗಮನಿಸುವ ಜನರು ಸ್ಥಳೀಯವಾಗಿ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳ ಮಾಹಿತಿ ನೀಡಬಹುದಾಗಿದೆ ಎಂದರು.
ಮಹಿಳೆಯರಲ್ಲಿ ಭಯದ ವಾತಾವರಣ ನಿವಾರಿಸಿ ಸಮಾಜದಲ್ಲಿ ಶಾಂತಿ, ನೆಮ್ಮದಿ ಹಾಗೂ ಧೈರ್ಯದಿಂದ ಸಮಾಜದಲ್ಲಿ ತಲೆಯೆತ್ತಿ ಬದುಕು ಸಾಗಿಸಬೇಕೆಂಬ ಸದುದ್ಧೇಶದಿಂದ ಮಹಿಳಾ ಠಾಣೆಯನ್ನು ಸ್ಥಾಪಿಸಲಾಗಿದೆ ಎಂದರು..
ಕರ್ನಾಟಕ ಪೊಲೀಸ್ ಇಲಾಖೆಯ ‘ಆಸರೆ’ ಯೋಜನೆಯು ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ ಹಾಗೂ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳುವ ಒಂದು ಪ್ರಮುಖ ಸಮುದಾಯ ಪೊಲೀಸ್ ಉಪಕ್ರಮವಾಗಿದೆ. ಇದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವೃದ್ಧರ ಮನೆಗಳಿಗೆ ನಿಯಮಿತ ಭೇಟಿ ನೀಡುವುದು, ದೌರ್ಜನ್ಯ ತಡೆ, ಆರೋಗ್ಯ ನೆರವು ಮತ್ತು ಆತ್ಮವಿಶ್ವಾಸ ಮೂಡಿಸಲಾಗತ್ತದೆ ಎಂದರು.
ನಂತರ ಸಿಬ್ಬಂದಿ ರಾಜೇಶ್ವರಿ ಮಾತನಾಡಿ, ತುರ್ತು ಸಹಾಯವಾಣಿಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದರು..
ತುರ್ತು ಸಹಾಯವಾಣಿ
181- ಅಕ್ಕಪಡೆ ಸಹಾಯವಾಣಿ
1098- ಮಕ್ಕಳ ಸಹಾಯವಾಣಿ
1930- ಸೈಬರ್ ಕ್ರೈಂ ಸಹಾಯವಾಣಿ
1090- ಹಿರಿಯ ನಾಗರಿಕ ಸಹಾಯವಾಣಿ
112- ಪೊಲೀಸ್ (ಇಆರ್ ಎಸ್ ಎಸ್) ಸಹಾಯವಾಣಿ
1091- ಮಹಿಳಾ ಸಹಾಯವಾಣಿ
15100- ಉಚಿತ ಕಾನೂನು ಸೇವೆಗಳ ಸಹಾಯವಾಣಿಗೆ ಕರೆ ಮಾಡಬಹುದಾಗಿದೆ ಎಂದು ತಿಳಿಸಿದರು..
ಈ ವೇಳೆ ಪೊಲೀಸ್ ಸಿಬ್ಬಂದಿ ಐಶ್ವರ್ಯ ಹಿರೇಮಠ್, ಮಂಜುನಾಥ್, ಕಾಲೇಜು ಪ್ರಾಂಶುಪಾಲರು, ಉಪನ್ಯಾಸಕರು, ಸೇರಿದಂತೆ ಶಿಬಿರಾರ್ಥಿಗಳು ಇದ್ದರು..
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…