ಹೆಣ್ಣಿನ‌ ಹಿತರಕ್ಷಣೆಗಾಗಿ ಮಹಿಳಾ ಪೊಲೀಸ್ ಠಾಣೆ ಸದಾ ಸನ್ನದ್ಧ- ಮಹಿಳಾ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಪಂಕಜಾ

ಹೆಣ್ಣಿನ‌ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ನಿಷೇಧ ಕಾಯ್ದೆ (ಪೋಕ್ಸೊ), ಕೌಟುಂಬಿಕ ದೌರ್ಜನ್ಯ ನಿಷೇಧ ಕಾಯ್ದೆ, ಬಾಲ್ಯವಿವಾಹ ನಿಷೇಧ ಕಾಯ್ದೆ, ಮಹಿಳೆಯನ್ನು ಅಸಭ್ಯವಾಗಿ ಜಾಹೀರುಗೊಳಿಸುವುದು, ಬಾಲ ನ್ಯಾಯಮಂಡಳಿ ಕಾಯ್ದೆ ಸೇರಿ ಮಹಿಳೆ, ವೃದ್ಧ ಮಹಿಳೆ ಮತ್ತು ಮಕ್ಕಳಿಗೆ ಸಂಬಂಧಿಸಿದ ಎಲ್ಲ ಪ್ರಕರಣಗಳ ತನಿಖೆಯನ್ನು ನಡೆಸಲಾಗುತ್ತದೆ.. ಒಂದು ವೇಳೆ ಹೆಣ್ಣಿಗೆ ಪುರುಷನಿಂದ ತೊಂದರೆ ಅಥವಾ ಸಮಸ್ಯೆ ಉಂಟಾದರೆ ಯಾವುದೇ ಭಯವಿಲ್ಲದೇ ಕೂಡಲೇ ದೂರು ನೀಡಬೇಕು ಎಂದು ಮಹಿಳಾ ಪೊಲೀಸ್ ಠಾಣಾ ಸಬ್ ಇನ್ಸ್ ಪೆಕ್ಟರ್ ಪಂಕಜಾ ಅವರು ತಿಳಿಸಿದರು.

ಇಂದು ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ದೊಡ್ಡತಿಮ್ಮನಹಳ್ಳಿ ಗ್ರಾಮದಲ್ಲಿ ದೊಡ್ಡಬಳ್ಳಾಪುರ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವತಿಯಿಂದ ಆಯೋಜನೆ ಮಾಡಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ಕೌಟುಂಬಿಕ ಕಲಹಗಳಲ್ಲಿ ಮಹಿಳೆಯರ ಮೇಲಾಗುವ ಮಾನಸಿಕ ಕಿರುಕುಳ, ದೈಹಿಕ ಹಲ್ಲೆಯಂತಹ ಪ್ರಕರಣಗಳನ್ನು ಪತ್ತೆಹಚ್ಚಲು ಗಸ್ತು ವಾಹನ ತಾಲೂಕಿನಾದ್ಯಂತ ಗಸ್ತು ಹಾಕಲಾಗುತ್ತಿದೆ. ಹೀಗೆ ಗಸ್ತು ಹಾಕುವ ವಾಹನ ಗಮನಿಸುವ ಜನರು ಸ್ಥಳೀಯವಾಗಿ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳ ಮಾಹಿತಿ ನೀಡಬಹುದಾಗಿದೆ ಎಂದರು.

ಮಹಿಳೆಯರಲ್ಲಿ ಭಯದ ವಾತಾವರಣ ನಿವಾರಿಸಿ ಸಮಾಜದಲ್ಲಿ ಶಾಂತಿ, ನೆಮ್ಮದಿ ಹಾಗೂ ಧೈರ್ಯದಿಂದ ಸಮಾಜದಲ್ಲಿ ತಲೆಯೆತ್ತಿ ಬದುಕು ಸಾಗಿಸಬೇಕೆಂಬ ಸದುದ್ಧೇಶದಿಂದ ಮಹಿಳಾ ಠಾಣೆಯನ್ನು ಸ್ಥಾಪಿಸಲಾಗಿದೆ ಎಂದರು..

ಕರ್ನಾಟಕ ಪೊಲೀಸ್ ಇಲಾಖೆಯ ‘ಆಸರೆ’ ಯೋಜನೆಯು ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ ಹಾಗೂ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳುವ ಒಂದು ಪ್ರಮುಖ ಸಮುದಾಯ ಪೊಲೀಸ್ ಉಪಕ್ರಮವಾಗಿದೆ. ಇದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವೃದ್ಧರ ಮನೆಗಳಿಗೆ ನಿಯಮಿತ ಭೇಟಿ ನೀಡುವುದು, ದೌರ್ಜನ್ಯ ತಡೆ, ಆರೋಗ್ಯ ನೆರವು ಮತ್ತು ಆತ್ಮವಿಶ್ವಾಸ ಮೂಡಿಸಲಾಗತ್ತದೆ ಎಂದರು.

ನಂತರ ಸಿಬ್ಬಂದಿ ರಾಜೇಶ್ವರಿ ಮಾತನಾಡಿ, ತುರ್ತು ಸಹಾಯವಾಣಿಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದರು..

ತುರ್ತು ಸಹಾಯವಾಣಿ

181- ಅಕ್ಕಪಡೆ ಸಹಾಯವಾಣಿ

1098- ಮಕ್ಕಳ ಸಹಾಯವಾಣಿ

1930- ಸೈಬರ್ ಕ್ರೈಂ ಸಹಾಯವಾಣಿ

 1090- ಹಿರಿಯ ನಾಗರಿಕ ಸಹಾಯವಾಣಿ

112- ಪೊಲೀಸ್ (ಇಆರ್ ಎಸ್ ಎಸ್) ಸಹಾಯವಾಣಿ

1091- ಮಹಿಳಾ ಸಹಾಯವಾಣಿ

15100- ಉಚಿತ ಕಾನೂನು ಸೇವೆಗಳ ಸಹಾಯವಾಣಿಗೆ ಕರೆ ಮಾಡಬಹುದಾಗಿದೆ ಎಂದು ತಿಳಿಸಿದರು..

ಈ ವೇಳೆ ಪೊಲೀಸ್ ಸಿಬ್ಬಂದಿ ಐಶ್ವರ್ಯ ಹಿರೇಮಠ್, ಮಂಜುನಾಥ್, ಕಾಲೇಜು ಪ್ರಾಂಶುಪಾಲರು, ಉಪನ್ಯಾಸಕರು, ಸೇರಿದಂತೆ ಶಿಬಿರಾರ್ಥಿಗಳು ಇದ್ದರು..

Ramesh Babu

Journalist

Recent Posts

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

27 minutes ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

12 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

18 hours ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

22 hours ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

23 hours ago

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

1 day ago