ಹೆಣ್ಣು ಸಂಸಾರದ ಕಣ್ಣು: ಸ್ವಯಂ ದುಡಿಮೆಯಿಂದ ಸ್ವಾವಲಂಭಿಯಾಗಿ ಜೀವನ ನಡೆಸಬೇಕು-ಸಮಾಜ ಸೇವಕಿ ಶಾರದಮ್ಮ

ಹೆಣ್ಣು ಮಕ್ಕಳು ಕೇವಲ ಅಡುಗೆ ಮನೆಗೆ ಮಾತ್ರ ಸೀಮಿತವಾಗಬಾರದು ಹೆಣ್ಣು ಸಂಸಾರದ ಕಣ್ಣು ಆಗಬೇಕು ಪ್ರತಿಯೊಬ್ಬ ಮಹಿಳೆಯ ಗ್ರಾಮೀಣ ಮಹಿಳಾ ಗುಂಪುಗಳು ಕರ ಕುಶಲ ಮತ್ತು ವೌಲ್ಯವರ್ಧಿತ ಉತ್ಪನ್ನಗಳನ್ನು ತಾವೇ ತಯಾರಿಸಿ ಮಾರಾಟ ಮಾಡುವ ಮೂಲಕ ಆದಾಯ ಅಭಿವೃದ್ಧಿಯನ್ನು ಮಾಡಿಕೊಂಡು ಸ್ವಯಂ ದುಡಿಮೆಯಿಂದ ಸ್ವವಲಂಭಿಯಾಗಿ ಜೀವನ ನಡೆಸಬೇಕು ಎಂದು ಸಮಾಜ ಸೇವಕಿ ಶಾರದಮ್ಮ ಅಭಿಪ್ರಾಯಪಟ್ಟರು

ಶಿಡ್ಲಘಟ್ಟ ನಗರದ ಕೆಕೆ ಪೇಟೆಯಲ್ಲಿ ಇಂದು ನೆಹರು ಯುವ ಕೇಂದ್ರದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಶ್ರೀ ದಿವ್ಯ ಜ್ಯೋತಿ ಮಹಿಳಾ ಸಂಘ ಹಾಗೂ ಆರುಂಧತಿ ಮಹಿಳಾ ಸಂಘ ಇವರ ಸಹಯೋಗದಲ್ಲಿ ಮಹಿಳಾ ಸಬಲೀಕರಣದ ಕುರಿತು ಅರಿವು ಮತ್ತು ನಾರಿ ಶಕ್ತಿ ಪಿಟ್ ನೆಸ್ ರನ್ಸ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ನಂತರ ಮಂಜುಳಾ ಮಾತನಾಡಿ, ಇಂದಿನ ಸಮಾಜದಲ್ಲಿ ಪ್ರತಿಯೊಬ್ಬ ಮಹಿಳೆಯರು ಒಂದಲ್ಲ ಒಂದು ರೀತಿಯಲ್ಲಿ ಸಾಧನೆ ಮಾಡುತ್ತಿದ್ದಾರೆ. ಪ್ರತಿ ಯಶಸ್ವಿ ಮಹಿಳೆಯ ಹಿಂದೆ ತನ್ನದೇ ಆದ ಚರಿತ್ರೆ ಮತ್ತು ಇತಿಹಾಸ ಇದ್ದೇ ಇರುತ್ತದೆ. ಆದರೆ, ಈ ಎಲ್ಲ ಕಷ್ಟಗಳನ್ನು ಧೈರ್ಯವಾಗಿ ಗಂಡು ಹೆಣ್ಣು ಎಂಬ ಭಾವನೆ ಇಲ್ಲದೆ ಧೈರ್ಯವಾಗಿ ಎದುರಿಸಬೇಕು

ಮಹಿಳೆಯರು ಹೆಣ್ಣು ಮಕ್ಕಳಿಗೆ ಶಿಕ್ಷಣ ದೊರಕಿಸಬೇಕು.ಆಗ ಅವಳು ತನ್ನ ಕುಟುಂಬದ ಎಲ್ಲರಲ್ಲೂ ತಿಳಿವಳಿಕೆ ಮೂಡಿಸುತ್ತಾಳೆ ಆದ್ದರಿಂದ ಮಹಿಳಾ ಸಶಸ್ತ್ರೀಕರಣಕ್ಕೆ, ಸಬಲೀಕರಣಕ್ಕೆ ಶಿಕ್ಷಣವೇ ಮೂಲವಾಗಿದೆ ಎಂದರು. ಇದರ ಜೊತೆಗೆ ಪ್ರತಿಯೊಬ್ಬರು ಸಂವಿಧಾನವನ್ನು ಅರ್ಥ ಮಾಡಿಕೊಳ್ಳಬೇಕು. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರು ಸಹ ಕೇವಲ ಒಂದು ಜಾತಿಗೆ ಸೀಮಿತವಲ್ಲ. ಆದರೆ ಆಡಳಿತ ಸರಕಾರಗಳು ಹಾಗೆ ಮಾಡಿವೆ.ಇವತ್ತಿನ ದಿನ ನೀವೆಲ್ಲ ನಿಮ್ಮ ತಂದೆ ಆಸ್ತಿಯಲ್ಲಿ ಹಕ್ಕನ್ನು ಪಡೆಯಬೇಕು ಎಂದರೆ.ಸರಕಾರಿ ಸೇವೆಯಲ್ಲಿರುವ ಹೆಣ್ಣು ಮಕ್ಕಳಿಗೆ ಹೆರಿಗೆ ಸಮಯದಲ್ಲಿ ಹೆರಿಗೆ ರಜಾ. ಸಮಾನ ಶಿಕ್ಷಣ, ಸೇರಿದಂತೆ ಮೂಲಭೂತ ಹಕ್ಕುಗಳನ್ನು ಸಂವಿಧಾನ ನಮಗೆ ಒದಗಿಸಿಕೊಟ್ಟಿದೆ. ಎಲ್ಲಾ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡಬೇಕು ಎಂದರು.

ಇದೆ ವೇಳೆ ನಾರಿ ಶಕ್ತಿ ಪಿಟ್ ನೆಸ್ ರನ್ಸ್ ನಲ್ಲಿ ಪಾಲ್ಗೊಂಡ ಮಹಿಳೆಯರಿಗೆ ಪ್ರಥಮ ದ್ವಿತೀಯ ಬಹುಮಾನಗಳನ್ನು ವಿತರಣೆ ಮಾಡಲಾಯಿತು

ಇನ್ನು ಇದೆ ಸಂದರ್ಭದಲ್ಲಿ ಆರುಂಧತಿ ಮಹಿಳಾ ಸಂಘ ಅಧ್ಯಕ್ಷರು ಮುನಿರತ್ನ, ಧರ್ಮ ಸ್ಥಳ ಸಂಘದ ಮಾಲಾವತಿ, ಮಂಜುಳಾ ಸೇರಿದಂತೆ ಮತ್ತಿತ್ತರರು ಹಾಜರಿದ್ದರು.

Ramesh Babu

Journalist

Recent Posts

10.50 ಕೋಟಿ ಸಾಲ ವಂಚನೆ ಆರೋಪ: ಸೌಂದರ್ಯ ಸೌಹಾರ್ದ ಕ್ರೆಡಿಟ್‌ ಸೊಸೈಟಿ ಅಧ್ಯಕ್ಷನ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಸೂಕ್ತ ದಾಖಲೆಗಳನ್ನು ಪರಿಶೀಲಿಸದೆ 10.50 ಕೋಟಿ ಸಾಲ ಮಂಜೂರು ಮಾಡಿ ಸೌಂದರ್ಯ ಸೌಹಾರ್ದ ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿಗೆ ಆರ್ಥಿಕ…

4 minutes ago

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಬೈಕ್‌ಗಳ ಮುಖಾಮುಖಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: ತಾಲ್ಲೂಕಿನ ಮಾಕಳಿ ರೈಲ್ವೆ ನಿಲ್ದಾಣದ ಸಮೀಪ ಹಿಂದೂಪುರ–ಯಲಹಂಕ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್…

8 hours ago

ಸೆ.28ರಿಂದ 30ರವರೆಗೆ ಬ್ಯಾಂಕ್ ನೌಕರರ ಮುಷ್ಕರ: ಭಾನುವಾರ ಬ್ಯಾಂಕ್‌ ಸೇವೆ ಲಭ್ಯ

ಬ್ಯಾಂಕ್ ನೌಕರರ ಒಕ್ಕೂಟವು ಸೆ.28ರಿಂದ 30ರವರೆಗೆ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ಹಾಗೂ ಗ್ರಾಹಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ…

23 hours ago

ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ- ಸಚಿವ ಎನ್. ಚಲುವರಾಯಸ್ವಾಮಿ ಭರವಸೆ*

ಜನರು ನೀಡಿದ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು‌ ಎಂಬ ಉದ್ದೇಶದಿಂದ ನನಗಿರುವ ಅಧಿಕಾರವನ್ನು ಬಳಸಿಕೊಂಡು ನಿಮ್ಮ ಸೇವೆ ಮಾಡುತ್ತಿದ್ದೆನೆ ಎಂದು ಮಂಡ್ಯ…

23 hours ago

ಹೈನುಗಾರಿಕೆಗೆ ಅಜೋಲಾ ಆಸರೆ: ಹಸಿರು ಮೇವಿನ ಕೊರತೆಗೆ ಪರ್ಯಾಯ: ಹಾಲು ನೀಡುವ ರಾಸುಗಳಿಗೆ ಪೌಷ್ಟಿಕ ಪೂರಕ ಆಹಾರ

ಬೆಂಗಳೂರು ಗ್ರಾಮಾಂತರ: ಮಳೆಯ ಕೊರತೆ ಹಾಗೂ ಹಸಿರು ಮೇವಿನ ಅಭಾವದಿಂದ ಜಾನುವಾರು ಸಾಕಾಣಿಕೆದಾರರು ಎದುರಿಸುತ್ತಿರುವ ಸಂಕಷ್ಟಕ್ಕೆ ಪರ್ಯಾಯವಾಗಿ, ಜಾನುವಾರುಗಳಿಗೆ ಸ್ಥಳೀಯವಾಗಿಯೇ…

1 day ago

ಸೆ. 28ಕ್ಕೆ ಅವತಿ ಬೆಟ್ಟದಲ್ಲಿ “ವಿಶ್ವ ಪ್ರವಾಸೋದ್ಯಮ ದಿನಾಚರಣೆ-2026″

ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ದೇವನಹಳ್ಳಿ ತಾಲ್ಲೂಕಿನ ಅವತಿಯ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ…

2 days ago